ಕುಂದಾಪುರ: ಚೂರಿ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

ಕುಂದಾಪುರ: ಭಾನುವಾರ ರಾತ್ರಿ ಚೂರಿ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಕುಂದಾಪುರದ ರಾಘವೇಂದ್ರ ಶೇರುಗಾರ್(ಬನ್ಸ್ ರಾಘು)(42 ವರ್ಷ) ಸೋಮವಾರ ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಕುಂದಾಪುರದ‌ ಖಾರ್ವಿಕೇರಿ ನಿವಾಸಿ ರಾಘವೇಂದ್ರ ಶೇರುಗಾರ್ ಭಾನುವಾರ ರಾತ್ರಿ ಚಿಕ್ಕಮ್ಮನಸಾಲು ರಸ್ತೆಯ ಪೋಸ್ಟ್ ಆಫೀಸ್ ಬಳಿ ತಮ್ಮ‌ ಕಾರಿನಲ್ಲಿ ಸಾಗುತ್ತಿರುವಾಗ ಕಾರು ಸೈಡ್ ಕೊಡುವ ವಿಚಾರದಲ್ಲಿ ಗಲಾಟೆಯಾಗಿತ್ತು. ಗಲಾಟೆ ತೀವ್ರಗೊಂಡು ವ್ಯಾಗನರ್ ಕಾರಿನಲ್ಲಿದ್ದ ವ್ಯಕ್ತಿ ರಾಘವೇಂದ್ರ ಅವರ ತೊಡೆಯ ಭಾಗಕ್ಕೆ ಚೂರಿಯಿಂದ ಇರಿದು ಪರಾರಿಯಾಗಿದ್ದನು. ತೀವ್ರ […]

ಮಣಿಪಾಲ: ಡಾ. ಟಿಎಂಎ ಪೈ 125 ನೇ ಜನ್ಮ ವಾರ್ಷಿಕೋತ್ಸವ ಆಚರಣೆ

ಮಣಿಪಾಲ: ಮಣಿಪಾಲ ಉನ್ನತ ಶಿಕ್ಷಣ ಅಕಾಡಮಿ ವೈದ್ಯಕೀಯ ಶಿಕ್ಷಣ ಸಮ್ಮೇಳನ 2023 ಅನ್ನು ಆಯೋಜಿಸುವ ಮೂಲಕ ಸಂಸ್ಥೆಯ ಸಂಸ್ಥಾಪಕ ಡಾ. ಟಿಎಂಎ ಪೈ ಅವರ 125 ನೇ ಜನ್ಮ ವಾರ್ಷಿಕೋತ್ಸವವನ್ನು ಆಚರಿಸಿತು. ಡಾ. ಟಿ ಎಂ ಎ ಪೈ ಆಡಿಟೋರಿಯಂ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಗೌರವಾನ್ವಿತ ಡಾ. ರಿಕಾರ್ಡೊ ಲಿಯಾನ್ ಬೊರ್ಕ್ವೆಜ್, ಅಧ್ಯಕ್ಷರು ವಿಶ್ವ ವೈದ್ಯಕೀಯ ಶಿಕ್ಷಣ ಒಕ್ಕೂಟದ (WFME) ಪಾಲ್ಗೊಂಡಿದ್ದರು . ಈ ಗಮನಾರ್ಹ ಸಂದರ್ಭವು ಭಾರತವು ರಾಷ್ಟ್ರೀಯ ವೈದ್ಯಕೀಯ ಆಯೋಗದಿಂದ 10 […]

ಬಾಪೂಜಿ ಪ್ರಬಂಧ ಸ್ಪರ್ಧೆಯ ವಿಜೇತರ ವಿವರ

ಉಡುಪಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮಹಾತ್ಮಾ ಗಾಂಧೀಜಿಯವರ 154 ನೇ ಜಯಂತಿ ಅಂಗವಾಗಿ, ವಿದ್ಯಾರ್ಥಿ ಹಾಗೂ ಯುವ ಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಕುರಿತು ಪ್ರೌಢಶಾಲಾ ವಿಭಾಗ, ಪದವಿ ಪೂರ್ವ ಶಿಕ್ಷಣ ವಿಭಾಗ ಮತ್ತು ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ಒಟ್ಟು ಮೂರು ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದ್ದು, ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ […]

ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಮೀನುಗಾರರಿಂದ ಅರ್ಜಿ ಆಹ್ವಾನ

ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ ಫಲಾನುಭವಿ ಆಧಾರಿತ ಯೋಜನೆಗಳಾದ ಹೊಸ ಮೀನು ಕೃಷಿ ಕೊಳಗಳ ನಿರ್ಮಾಣ, ಕಡಲಚಿಪ್ಪು ಕೃಷಿ, ಬ್ಯಾಕ್ ಯಾರ್ಡ್ ಮಿನಿ ಆರ್.ಎ.ಎಸ್ ಘಟಕ ಸ್ಥಾಪನೆ, ರೆಫ್ರಿಜರೇಟೆಡ್ ವಾಹನಗಳ ಖರೀದಿ, ಮೋಟಾರ್ ಸೈಕಲ್‌ನೊಂದಿಗೆ ಐಸ್ ಬಾಕ್ಸ್, ಸಾಂಪ್ರದಾಯಿಕ ಮತ್ತು ಮೋಟಾರೀಕೃತ ಮೀನುಗಾರಿಕಾ ದೋಣಿಗಳ ಮೀನುಗಾರರಿಗೆ ಸುರಕ್ಷತಾ ಕಿಟ್‌ಗಳನ್ನು ಒದಗಿಸಲು ಬೆಂಬಲ ಹಾಗೂ ಸಾಂಪ್ರದಾಯಿಕ ಮೀನುಗಾರರಿಗೆ ದೋಣಿ ಮತ್ತು ಬಲೆ ಒದಗಿಸುವ ಸೌಲಭ್ಯ ಪಡೆಯಲು ಅರ್ಹ ಮೀನುಗಾರರಿಂದ ಅರ್ಜಿ […]

ಕಾಂದಿವಿಲಿ ಕನ್ನಡ ಸಂಘ ಮಹಿಳಾ ವಿಭಾಗದ ವತಿಯಿಂದ ವಾರ್ಷಿಕ ಭಜನಾ ಕಾರ್ಯಕ್ರಮ

ಮುಂಬಯಿ: ಮುಂಬಯಿ ಪಶ್ಚಿಮದ ಉಪನಗರದ ಹಿರಿಯ ಕನ್ನಡ ಸಂಸ್ಥೆಗಳಲ್ಲೊಂದಾದ ಕಾಂದಿವಿಲಿ ಕನ್ನಡ ಸಂಘ ದಹಾಣುಕರ್ ವಾಡಿ ಕಾಂದಿವಿಲಿ ಇದರ ಮಹಿಳಾ ವಿಭಾಗದ ಸದಸ್ಯರ ವತಿಯಿಂದ ಗಣೇಶ ಚತುರ್ಥಿಯ ಅಂಗವಾಗಿ ವಾರ್ಷಿಕ ಭಜನಾ ಕಾರ್ಯಕ್ರಮವು ಸೆ. 26ರಂದು ಕಾಂದಿವಿಲಿ ಪಶ್ಚಿಮದ ಪೊಯ್ಸರ್ ಜಿಮ್ಕಾನದ ಸಭಾಗೃಹದಲ್ಲಿ ಭಜನೆ ಭಕ್ತಿ ಗಾಯನ ಭಜನಾ ಕುಣಿತ ಇನ್ನಿತರ ಧಾರ್ಮಿಕ ವೈವಿಧ್ಯ ಕಾರ್ಯಕ್ರಮದೊಂದಿಗೆ ಜರಗಿತು. ಕಾರ್ಯಕ್ರಮವನ್ನು ಸಂಘದ ಉಪಾಧ್ಯಕ್ಷ ಪ್ರೇಮ್ ನಾಥ್ ಪಿ ಕೋಟ್ಯಾನ್ ಪದಾಧಿಕಾರಿಗಳು ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸಭಿತಾ ಜಿ ಪೂಜಾರಿ […]