ಹಿಂದೂಜಾ ಲೇಲ್ಯಾಂಡ್ ಫೈನಾನ್ಸ್ ಅಧ್ಯಕ್ಷರಿಂದ ಕೃಷ್ಣ ಮಠ ಭೇಟಿ

ಉಡುಪಿ: ಹಿಂದೂಜಾ ಲೇಲ್ಯಾಂಡ್ ಫೈನಾನ್ಸ್ ನ ಅಧ್ಯಕ್ಷ ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಸಚಿನ್ ಪಿಳ್ಳೈ ಶ್ರೀಕೃಷ್ಣ ಮಠಕ್ಕಾಗಮಿಸಿ ದೇವರ ದರ್ಶನ ಪಡೆದುಕೊಂಡು ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಇವರಿಂದ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸ್ವಾಗತ ಸಮಿತಿ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್ ಮೊದಲಾದವರು ಉಪಸ್ಥಿತರಿದ್ದರು.

ಸೌಜನ್ಯ ಪ್ರಕರಣ ಮರುತನಿಖೆಗೆ ಒತ್ತಾಯಿಸಿ ಪ್ರಧಾನಿಗೆ ಪತ್ರ

ಹಿರೇಬೆಟ್ಟು: ಸೌಜನ್ಯ ಪ್ರಕರಣದಲ್ಲಿ ಸಂತ್ರಸ್ತೆಗೆ ನ್ಯಾಯ ಸಿಗಬೇಕು ಎನ್ನುವ ನಿಟ್ಟಿನಲ್ಲಿ ಹಲವಾರು ಸಮಯದಿಂದ ಹೋರಾಟ ನಡೆಯುತ್ತಿದ್ದು, ಹಿರೇಬೆಟ್ಟು ಸೌಜನ್ಯ ಹೋರಾಟ ಸಮಿತಿ ವತಿಯಿಂದ ಪ್ರತಿಭಟನಾ ಸಭೆ ನಡೆಯಿತು. ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ, ತಮ್ಮಣ್ಣ ಶೆಟ್ಟಿ ಹಾಗೂ ಸೌಜನ್ಯ ತಾಯಿ ಸಭೆಯಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಸೌಜನ್ಯ ಪ್ರಕರಣವನ್ನು ಮರು ತನಿಖೆ ನಡೆಸಿ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡುವಂತೆ ಮತ್ತು ಧರ್ಮಸ್ಥಳ ಪರಿಸರದಲ್ಲಿ ಇದುವರೆಗೆ ನಡೆದ ಎಲ್ಲಾ ಸರಣಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ವಿಸ್ತೃತ ತನಿಖೆ ನಡೆಸುವಂತೆ […]

NIAಯ ಮೋಸ್ಟ್ ವಾಂಟೆಡ್ ಲಿಸ್ಟ್ ನಲ್ಲಿರುವ ಶಂಕಿತ ಐಸಿಸ್ ಭಯೋತ್ಪಾದಕನನ್ನು ಬಂಧಿಸಿದ ದೆಹಲಿ ಪೊಲೀಸ್

ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆಯ (NIA) ಮೋಸ್ಟ್ ವಾಂಟೆಡ್ ಲಿಸ್ಟ್‌ನಲ್ಲಿರುವ ಶಂಕಿತ ಐಸಿಸ್ ಭಯೋತ್ಪಾದಕನನ್ನು ಭಯೋತ್ಪಾದನಾ ನಿಗ್ರಹ ದಳದ ದೊಡ್ಡಕಾರ್ಯಾಚರಣೆಯ ವೇಳೆ ದೆಹಲಿಯಲ್ಲಿ ಬಂಧಿಸಲಾಗಿದೆ. ಶಹನವಾಜ್ ಅಲಿಯಾಸ್ ಶಫಿ ಉಜ್ಜಾಮನನ್ನು ದೆಹಲಿ ಪೊಲೀಸರ ವಿಶೇಷ ಸೆಲ್ ರಾಷ್ಟ್ರ ರಾಜಧಾನಿಯ ಅಡಗುತಾಣದಿಂದ ಬಂಧಿಸಿದೆ. ದೆಹಲಿ ಪೊಲೀಸರ ವಿಶೇಷ ಸೆಲ್ NIA ಯೊಂದಿಗೆ ಸಹಕರಿಸಿದೆ. ಭಯೋತ್ಪಾದಕ ಸಂಘಟನೆಯ ಸ್ಲೀಪರ್ ಸೆಲ್‌ಗಳೆಂದು ಶಂಕಿಸಲಾದ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ವೃತ್ತಿಯಲ್ಲಿ ಇಂಜಿನಿಯರ್ ಆಗಿರುವ ಶಹನವಾಜ್ ಐಸಿಸ್ ಪುಣೆ ಮಾಡ್ಯೂಲ್ ಪ್ರಕರಣದಲ್ಲಿ ಬೇಕಾಗಿದ್ದ. ಮೂಲಗಳ […]

ಮಂಗಳೂರು: ಮಹೇಶ್ ಮೋಟರ್ಸ್ ಮಾಲಕ ಪ್ರಕಾಶ್ ಶೇಖ ನೇಣಿಗೆ ಶರಣು

ಮಂಗಳೂರು: ಇಲ್ಲಿನ ಕದ್ರಿ ಕಂಬಳದಲ್ಲಿ ಅ. 1 ರಂದು ಮಹೇಶ್ ಮೋಟಾರ್ಸ್ ಮಾಲೀಕನ ಮಗ ಪ್ರಕಾಶ್ ಶೇಖ (42) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಮೂಲಗಳ ಪ್ರಕಾರ, ಭಾನುವಾರದಂದು ಪ್ರಕಾಶ್ ಅವರು ಕದ್ರಿ ಕಂಬಳದಲ್ಲಿರುವ ತಮ್ಮ ನಿವಾಸದಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕದ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಿಲ್ಲೆಗೆ ರಾಜ್ಯಪಾಲರ ಆಗಮನ ಹಿನ್ನೆಲೆ: ಅ.3 ರ ಬಂದ್ ಕೈ ಬಿಟ್ಟ ಕಟ್ಟಡ ಸಾಮಾಗ್ರಿ ಸಾಗಾಟ ವಾಹನ ಮಾಲಕರ ಒಕ್ಕೂಟ

ಉಡುಪಿ: ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ನೂತನ ನಿಯಮವನ್ನು ವಿರೋಧಿಸಿ ಜಿಲ್ಲಾ ಕಟ್ಟಡ ಸಾಮಾಗ್ರಿ ಸಾಗಾಟ ವಾಹನಗಳ ಮಾಲಕರ ಒಕ್ಕೂಟವು ಅಕ್ಟೋಬರ್ 3 ರಂದು ಉಡುಪಿ ಜಿಲ್ಲಾ ಬಂದ್ ಗೆ ಕರೆ ನೀಡಿದ್ದನ್ನು ರಾಜ್ಯಪಾಲರ ಆಗಮನದ ಹಿನ್ನೆಲೆಯಲ್ಲಿ ಕೈಬಿಡಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಪರವಾನಗಿ ರಹಿತ ಕಟ್ಟಡ ಸಾಮಗ್ರಿ ಸಾಗಾಟ ವಾಹನಗಳನ್ನು ಪೊಲೀಸರು ಮುಟ್ಟುಗೋಲು ಹಾಕಿ ದಂಡ ವಿಧಿಸಿ ಪ್ರಕರಣ ದಾಖಲಿಸುತ್ತಿರುವುದನ್ನು ವಿರೋಧಿಸಿ, ಉಡುಪಿ ಜಿಲ್ಲಾ ಕಟ್ಟಡ ಸಾಮಗ್ರಿ ಸಾಗಾಟ ಲಾರಿ, ಟೆಂಪೋ ಮಾಲಕರ ಒಕ್ಕೂಟದ ನೇತೃತ್ವದಲ್ಲಿ ಉಡುಪಿ […]