ಹೆಬ್ರಿ ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಪ್ರಕರಣ ದಾಖಲು

ಹೆಬ್ರಿ: ಪರವಾನಿಗೆಯಿಲ್ಲದೇ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿರುವ ಪೊಲೀಸ್ ಇಲಾಖೆ,ಅಕ್ರಮ ದಂಧೆಯಲ್ಲಿ ಭಾಗಿಯಾದವರ ವಿರುದ್ಧ ಮುಲಾಜಿಲ್ಲದೇ ಕೇಸ್ ದಾಖಲಿಸುತ್ತಿದ್ದಾರೆ. ಉಡುಪಿ ಎಸ್ಪಿಯವರ ಖಡಕ್ ಸೂಚನೆ ಹಿನ್ನಲೆಯಲ್ಲಿ ಪೊಲೀಸರು ಅಕ್ರಮ ದಂಧೆಕೋರರಿಗೆ ಬಿಸಿಮುಟ್ಟಿಸುತ್ತಿದ್ದು, ಹೆಬ್ರಿ ತಾಲೂಕಿನ ವರಂಗ ಗ್ರಾಮದ ಮುನಿಯಾಲು ಮಾತಿಬೆಟ್ಟು ಹೊಳೆಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಕುರಿತು ಮಾಹಿತಿ ಪಡೆದ ಪೊಲೀಸರು ಮಾತಿಬೆಟ್ಟು ಪೆರ್ಮಾನು ಎಂಬಲ್ಲಿ ರತ್ನಾಕರ ಪೂಜಾರಿ ಎಂಬವರು ಹೊಳೆಯಿಂದ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 1 ಯೂನಿಟ್ ಮರಳನ್ನು ವಶಪಡಿಸಿಕೊಂಡು ರತ್ನಾಕರ ಪೂಜಾರಿ […]