24 ಗಂಟೆಯಲ್ಲಿ 12 ಶಿಶುಗಳು ಸೇರಿ 24 ರೋಗಿಗಳ ಸಾವು : ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆಯಲ್ಲಿ ಮರಣಮೃದಂಗ
ನಾಂದೇಡ್ (ಮಹಾರಾಷ್ಟ್ರ) : ಮಹಾರಾಷ್ಟ್ರದಲ್ಲಿ ಆರೋಗ್ಯ ಸೇವೆ ತೀವ್ರ ಕುಸಿತ ಕಾಣುತ್ತಿದೆಯೇ ಎಂಬ ಅನುಮಾನ ಮೂಡಿಸಿದೆ. ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆಯಲ್ಲಿ ಮರಣಮೃದಂಗ ಕೇಳಿಬಂದಿದೆ. ಕೆಲ ದಿನಗಳ ಹಿಂದಷ್ಟೇ ಥಾಣೆಯ ಸರ್ಕಾರಿ ಆಸ್ಪತ್ರೆಯಲ್ಲಿ 12 ತಾಸಿನಲ್ಲಿ 17 ಮಂದಿ ಸಾವಿಗೀಡಾದ ಘಟನೆ ಸಂಚಲನ ಉಂಟು ಮಾಡಿತ್ತು. ಇದೀಗ ಅಂಥದ್ದೇ ಮತ್ತೊಂದು ದುರ್ಘಟನೆ ನಡೆದಿದ್ದು, ನಾಂದೇಡ್ ಸರ್ಕಾರಿ ಆಸ್ಪತ್ರೆಯಲ್ಲಿ 24 ಗಂಟೆಯಲ್ಲಿ 12 ನವಜಾತ ಶಿಶುಗಳು ಸೇರಿ 24 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದು ಸರ್ಕಾರದ ವಿರುದ್ಧ ತೀವ್ರ ಆಕ್ರೋಶಕ್ಕೆ […]
ಎನ್‌ಡಿಎ ಪ್ರವೇಶ ಪರೀಕ್ಷೆಯಲ್ಲಿ ಎಕ್ಸ್ ಪರ್ಟ್ ಕಾಲೇಜು ವಿದ್ಯಾರ್ಥಿಗಳು ತೇರ್ಗಡೆ
ಮಂಗಳೂರು: ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮತ್ತು ನೇವಲ್ ಅಕಾಡೆಮಿಯ ಪ್ರವೇಶಕ್ಕಾಗಿ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ನಡೆಸಿದ ಲಿಖಿತ ಪರೀಕ್ಷೆಯಲ್ಲಿ ಮಂಗಳೂರಿನ ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಅರ್ಹತೆ ಪಡೆದು ಮುಂದಿನ ಸಂದರ್ಶನಕ್ಕೆ ಆಯ್ಕೆಯಾಗಿದ್ದಾರೆ. ಮೈಸೂರಿನ ಅರ್ಜುನ್ ಕಿಶೋರ್ ಮತ್ತು ಬೆಂಗಳೂರಿನ ಸವ್ಯಸಾಚಿ ಎಸ್. ಆಯ್ಕೆಯಾಗಿದ್ದಾರೆ. ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ 2023ರ ಸೆಪ್ಟೆಂಬರ್ 3 ರಂದು ಪರೀಕ್ಷೆ ನಡೆಸಿತ್ತು.
ಹೈಡ್ರೋಜನ್ ಬಸ್ ಟೆಸ್ಟ್ ಡ್ರೈವ್ ಮಾಡಿದ ಕೇಂದ್ರ ಸಚಿವರು : ಪ್ರಾಗ್ನಲ್ಲಿ ನಿತಿನ್ ಗಡ್ಕರಿ
ಪ್ರಾಗ್( ಜೆಕ್ ರಿಪಬ್ಲಿಕ್): ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಜೆಕ್ ರಿಪಬ್ಲಿಕ್ ಪ್ರವಾಸದಲ್ಲಿದ್ದಾರೆ. ಅಲ್ಲಿ ಅವರು ಹೈಡ್ರೋಜನ್ ಬಸ್‌ನಲ್ಲಿ ಟೆಸ್ಟ್ ಡ್ರೈವ್ ಮಾಡಿದರು. ಈ ಮೂಲಕ ಹೈಡ್ರೋಜನ್ ಬಸ್ಗಳ ಬಳಕೆ ಮಾಡಿಕೊಳ್ಳುವ ಕುರಿತಂತೆ ಅವರು ಮಾಹಿತಿ ಪಡೆದುಕೊಂಡರುನಿತಿನ್ ಗಡ್ಕರಿ ಭಾನುವಾರ ಪ್ರಾಗ್ಗೆ ಭೇಟಿ ನೀಡಿದ್ದು, ಇಲ್ಲಿ ನಡೆದ 27 ನೇ ವಿಶ್ವ ರಸ್ತೆ ಕಾಂಗ್ರೆಸ್‌ನಲ್ಲಿ ಭಾಗವಹಿಸಿದ್ದಾರೆ. ಇದೇ ವೇಳೆ ಅವರು ಹೈಡ್ರೋಜನ್ ಬಸ್ ಟೆಸ್ಟ್ ಡ್ರೈವ್ ಮಾಡಿ ಅದರ ಕಾರ್ಯದಕ್ಷತೆಯ ಬಗ್ಗೆ […]
ಶುಭಾಶಯ ತಿಳಿಸಿದ ಪ್ರಧಾನಿ ಮೋದಿ, ರಿಷಿ ಸುನಕ್ : ಉದ್ಘಾಟನೆ ಹೊಸ್ತಿಲಲ್ಲಿರುವ ಅಮೆರಿಕದ ಅಕ್ಷರಧಾಮ
ವಾಷಿಂಗ್ಟನ್: ಅಮೆರಿಕದ ನ್ಯೂಜೆರ್ಸಿಯ ರಾಬಿನ್ಸ್ವಿಲ್ಲೆ ನಗರದಲ್ಲಿ ನಿರ್ಮಾಣವಾಗಿರುವ ವಿಶ್ವದ ಎರಡನೇ ಅತೀ ದೊಡ್ಡ ದೇವಾಲಯ ಬಿಎಪಿಎಸ್ ಸ್ವಾಮಿನಾರಾಯಣ ಅಕ್ಷರಧಾಮ ಉದ್ಘಾಟನೆಗೆ ತಯಾರಾಗಿದೆ.ನ್ಯೂಜೆರ್ಸಿಯ ರಾಬಿನ್ಸ್ವಿಲ್ಲೆ ನಗರದಲ್ಲಿ ನಿರ್ಮಾಣವಾಗಿರುವ ಬಿಎಪಿಎಸ್ ಸ್ವಾಮಿನಾರಾಯಣ ಅಕ್ಷರಧಾಮ ಅಕ್ಟೋಬರ್ 8 ರಂದು ಉದ್ಘಾಟನೆಯಾಗಲಿದೆ.ದೇವಾಲಯದ ಉದ್ಘಾಟನೆಗೂ ಮುನ್ನ ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಶುಭಾಶಯಗಳನ್ನು ಕೋರಿದ್ದಾರೆ. ಬಿಎಪಿಎಸ್ ಸ್ವಾಮಿನಾರಾಯಣ ಅಕ್ಷರಧಾಮಕ್ಕೆ ಪತ್ರ ಬರೆದಿರುವ ಪ್ರಧಾನಿ ಮೋದಿ ಅಕ್ಷರಧಾಮದಲ್ಲಿರುವ ಎಲ್ಲರಿಗೂ ಹಾಗೂ ಅದರಲ್ಲಿ ತೊಡಗಿಕೊಂಡಿರುವ ಎಲ್ಲರಿಗೂ ಶುಭಾಶಯಗಳನ್ನು ಕಳುಹಿಸಿದ್ದಾರೆ. ಪತ್ರದಲ್ಲಿ […]
ತನಿಖೆಗೆ ಸಹಕರಿಸುವಂತೆ ಭಾರತಕ್ಕೆ ಹಲವು ಬಾರಿ ಅಮೆರಿಕ ಮನವಿ: ನಿಜ್ಜರ್ ಹತ್ಯೆ
ವಾಷಿಂಗ್ಟನ್: ಅಮೆರಿಕ ಆಡಳಿತವು ಖಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಸಾವಿನ ತನಿಖೆಯಲ್ಲಿ ಕೆನಡಾದೊಂದಿಗೆ ಸಹಕರಿಸುವಂತೆ ಭಾರತ ಸರ್ಕಾರದೊಂದಿಗೆ ಹಲವಾರು ಸಂದರ್ಭಗಳಲ್ಲಿ ಒತ್ತಾಯಿಸಿದೆ ಎಂದು ಅಮೆರಿಕದ ವಿದೇಶಾಂಗ ಇಲಾಖೆಯ ವಕ್ತಾರ ಮ್ಯಾಥ್ಯೂ ಮಿಲ್ಲರ್ ತಿಳಿಸಿದ್ದಾರೆ.ವಿದೇಶಾಂಗ ಇಲಾಖೆಯ ವಕ್ತಾರ ಮ್ಯಾಥ್ಯೂ ಮಿಲ್ಲರ್, ಕಳೆದ ವಾರ ಇಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಅವರೊಂದಿಗೆ ಮಾತುಕತೆ ನಡೆಸಿದ್ದರು. ಆ ಸಂದರ್ಭದಲ್ಲಿ ಆಂಟೋನಿ ಬ್ಲಿಂಕೆನ್ ಅವರು ಈ ವಿಷಯವನ್ನು ಪ್ರಸ್ತಾಪಿಸಿದ್ದರು. ಆಗ ಅವರು ಸ್ಪಷ್ಟಪಡಿಸಿದಂತೆ, […]