ಸುರಕ್ಷತೆಗೆ ಪ್ರಾಧಿಕಾರವೇ ಹೊಣೆ ಎಂದ ಜಿಲ್ಲಾಡಳಿತ , ಕೊನೆಗೂ ಸುರಂಗ ಮಾರ್ಗದಲ್ಲಿ ತಾತ್ಕಾಲಿಕ ಸಂಚಾರಕ್ಕೆ ಅವಕಾಶ

ಕಾರವಾರ: ಕಳೆದ ಕೆಲ ದಿನಗಳಿಂದ ಆಕ್ಷೇಪ, ಹೋರಾಟ, ರಾಜಕೀಯ ಗುದ್ದಾಟಕ್ಕೆ ಕಾರಣವಾಗಿದ್ದ ನಗರದ ಟನಲ್ ಮಾರ್ಗದಲ್ಲಿ ಕೊನೆಗೂ ಜಿಲ್ಲಾಡಳಿತ ಸೋಮವಾರ ಸಾರ್ವಜನಿಕ ಸಂಚಾರಕ್ಕೆ ಅವಕಾಶ ಕಲ್ಪಿಸಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರವಾರದಿಂದ – ಬಿಣಗಾದವರೆಗೆ ನಿರ್ಮಿಸಲಾಗಿದ್ದ ಸುರಂಗ ಮಾರ್ಗದಲ್ಲಿ ಸುರಕ್ಷತೆ ದೃಷ್ಟಿಯಿಂದ ಸಂಚಾರವನ್ನು ನಿಷೇಧಿಸಿ ಮೂರನೇ ಸಂಸ್ಥೆಯಿಂದ ತಪಾಸಣೆ ಮಾಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಿಗೆ ಸೂಚಿಸಲಾಗಿತ್ತು. ಆದರೆ, ಸುರಂಗ ಮಾರ್ಗದ ತಾಂತ್ರಿಕ ತಪಾಸಣೆಯನ್ನು ಅ.8 ರಂದು ನಿಗದಿಪಡಿಸಿರುವುದಾಗಿ ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.ಕಾರವಾರದಲ್ಲಿ ಕಳೆದ 3 […]

ಗಾಂಧೀಜಿ ತತ್ವಾದರ್ಶಗಳು ಅನುಕರಣೀಯ: ಯಶ್ ಪಾಲ್ ಸುವರ್ಣ

ಉಡುಪಿ: ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿಯವರು ಅಜ್ಜರಕಾಡುವಿಗೆ ಭೇಟಿ ನೀಡಿ, ಈ ಭಾಗದ ಜನರನ್ನು ಒಂದೆಡೆ ಸೇರಿಸಿ, ಸ್ವಾತಂತ್ರ್ಯದ ಕುರಿತು ಕಾರ್ಯಕ್ರಮ ಆಯೋಜಿಸಿದ್ದು ಅವರ ನೆನಪಿಗಾಗಿ ಇಲ್ಲಿ ಗಾಂಧೀಜಿಯವರ ಪುತ್ಥಳಿಯನ್ನು ಭುಜಂಜ ಶೆಟ್ಟಿ ಪಾರ್ಕಿನಲ್ಲಿ ನಿರ್ಮಾಣ ಮಾಡಲಾಗಿದೆ. ಗಾಂಧೀಜಿಯವರ ವಿಚಾರ, ತತ್ವ ಹಾಗೂ ಆದರ್ಶಗಳನ್ನು ವಿಶ್ವದಲ್ಲಿ ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಅದನ್ನು ಪಾಲಿಸಬೇಕು ಎಂದು ಶಾಸಕ ಯಶ್‌ಪಾಲ್ ಎ ಸುವರ್ಣ ಹೇಳಿದರು. ಸೋಮವಾರ ನಗರದ ಅಜ್ಜರಕಾಡು ಭುಜಂಗ ಪಾರ್ಕಿನ ಗಾಂಧಿಕಟ್ಟೆಯಲ್ಲಿ, ಜಿಲ್ಲಾಡಳಿತ, ವಾರ್ತಾ ಮತ್ತು […]

ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ: ಸಂತೋಷ್ ಕೊರಂಗ್ರಪಾಡಿ ಪ್ರಥಮ

ಉಡುಪಿ: ಸೌತ್‌ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್‌ ಉಡುಪಿ ವಲಯ, ನಿಕ್ಕಾನ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಮತ್ತು ಪ್ರವಾಸೋದ್ಯಮ ಇಲಾಖೆ ಇದರ ಸಂಯುಕ್ತ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ರಾಜ್ಯ ಮಟ್ಟದ “ಕಲರ್ಸ್ ಅಫ್‌ ಶ್ರೀ ಕೃಷ್ಣ ಲೀಲೋತ್ಸವ 2023” ಛಾಯಾಚಿತ್ರ ಸ್ಪರ್ಧೆಯಲ್ಲಿ ಸಂತೋಷ್ ಕೊರಂಗ್ರಪಾಡಿ ಪ್ರಥಮ ಬಹುಮಾನವನ್ನು ಪಡೆದಿದ್ದಾರೆ.

ಟೆನ್ನಿ ಕೋಯಿಟ್ ಹಾಗೂ ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಚಾಂಪಿಯನ್ ಆಗಿ ಹೊರ ಹೊಮ್ಮಿದ ಶ್ರೀ.ವೆಂ.ಪ.ಪೂ ಕಾಲೇಜು

ಕುಂದಾಪುರ : ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ನ್ಯಾಶನಲ್ ಪದವಿ ಪೂರ್ವ ಕಾಲೇಜು ಬಾರಕೂರು ಇವರ ಸಹಯೋಗದಲ್ಲಿ ನಡೆದ ಟೆನ್ನಿ ಕೋಯಿಟ್ ಪಂದ್ಯಾಟ ದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು, ಬಾಲಕರ ತಂಡ ದ್ವಿತೀಯ ಸ್ಥಾನವನ್ನು, ಟೆನ್ನಿಸ್ ವಾಲಿಬಾಲ್ ಪಂದ್ಯಾಟದಲ್ಲಿ ಬಾಲಕ ಮತ್ತು ಬಾಲಕಿಯರ ತಂಡ ದ್ವಿತೀಯ ಸ್ಥಾನ ವನ್ನು ಪಡೆಯುವುದರ ಮೂಲಕ ಜಿಲ್ಲಾ ಮಟ್ಟದಲ್ಲಿ ಚಾಂಪಿಯನ್ ಆಗಿ ಮಿಂಚಿದ್ದಾರೆ. ಸಾತ್ವಿಕ್, ವಿನಯ್, ಕಲ್ಪಿತಾ, ಲಿಖಿತಾ […]

ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವತಿಯಿಂದ ಗಾಂಧಿ ಜಯಂತಿ ಆಚರಣೆ

ಉಡುಪಿ: ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಹಾಗೂ ಪ್ರಾಚ್ಯ ಸಂಚಯ ಸಂಶೋಧನಾ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಗಾಂಧಿ ಜಯಂತಿ 154ನೇ ವರ್ಷದ ಸ್ಮರಣಾರ್ಥ “ಸನ್ಮತಿ ಮಂಥನ – ಜ್ಞಾನ ಪ್ರಸಾರಣ” ವಿಶೇಷ ಕಾರ್ಯಕ್ರಮವು ಉಡುಪಿಯ ಜಗನ್ನಾಥ ಸಭಾಭವನದಲ್ಲಿ ಬಡಗಬೆಟ್ಟು ಸೊಸೈಟಿಯ ಅಧ್ಯಕ್ಷ ಸಂಜೀವ ಕಾಂಚನ್‌ ಅಧ್ಯಕ್ಷತೆಯಲ್ಲಿ ಜರಗಿತು. ಗಾಂಧೀಜಿಯವರು 25-02-1934ರಂದು ದ.ಕ ಜಿಲ್ಲೆಗೆ ಆಗಮಿಸಿದ ಸಂದರ್ಭದಲ್ಲಿ ಬಳಸಿದ ಚರಕದ ರಾಟೆಗೆ ಖಾದಿ ನೂಲಿನ ಹಾರ ಹಾಕಿ, ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿಲಾಯಿತು. ಕಾರ್ಯಕ್ರಮದಲ್ಲಿ “ಒಪ್ಪಿಕೊ ಪಚ್ಚೆವನಸಿರಿ ಜಾಗೃತಿ […]