ಕಾಪು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಉಚ್ಛಾಟನೆ

ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಉದ್ಯಾವರ ಗ್ರಾಮ ಪಂಚಾಯತ್‌ನ ಅಧ್ಯಕ್ಷರು ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದುಕೊಂಡು ಪಕ್ಷದ ನಿಲುವನ್ನು ವಿರೋಧಿಸಿ ಬಿಜೆಪಿಯ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅವರ ಸೋಲಿಗೆ ಕಾರಣರಾಗಿರುವ ಮಾಲತಿ ಮತ್ತು ಅವರಿಗೆ ಬೆಂಬಲಿಸಿರುವ ಗ್ರಾಮ ಪಂಚಾಯತ್ ಸದಸ್ಯರಾದ ಗಿರೀಶ್ ಸುವರ್ಣ ಹಾಗೂ ಫ್ರೀಡಾ ಡಿ’ಸೋಜಾ ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಾಗಿ ಕಾಪು ಮಂಡಲ ಅಧ್ಯಕ್ಷರ ಶಿಫಾರಸ್ಸಿನ ಮೇರೆಗೆ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್‌ ಸೂಚನೆಯಂತೆ 6 ವರ್ಷಗಳ ಕಾಲ […]

ಉಡುಪಿ: ವಿವಿಧ ಬೇಡಿಕೆಗಳನ್ನು ಮುಂದಿರಿಸಿ ಗ್ರಾಮೀಣ ಅಂಚೆ ನೌಕರರಿಂದ ಮುಷ್ಕರ

ಉಡುಪಿ: ಗ್ರಾಮೀಣ ಅಂಚೆ ನೌಕರರ (GDS) ಕೆಂದ್ರ ಜಂಟಿ ಕ್ರಿಯಾ ಸಮಿತಿಯು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ್ದು ಇದರ ಅಂಗವಾಗಿ ಉಡುಪಿಯಲ್ಲಿ ಕೂಡಾ ರಾಷ್ಟ್ರೀಯ ಗ್ರಾಮೀಣ ಅಂಚೆ ನೌಕರರಿಂದ ಸಾಂಕೇತಿಕ ಮುಷ್ಕರ ಇಲ್ಲಿನ ಪ್ರಧಾನ ಅಂಚೆ ಕಚೇರಿ ಮುಂದುಗಡೆ ನಡೆಯಿತು. ಮುಷ್ಕರದಲ್ಲಿ ಉಡುಪಿ ಅಂಚೆ ವಿಭಾಗದ ವಿವಿಧ ಅಂಚೆ ಕಚೇರಿಗಳಿಂದ ಆಗಮಿಸಿದ್ದ ಗ್ರಾಮೀಣ ಅಂಚೆ ನೌಕರರು ಭಾಗವಹಿಸಿದ್ದರು. ರಾಷ್ಟ ವ್ಯಾಪಿ ನಡೆದ ಈ ಮುಷ್ಕರಕ್ಕೆ ರಾಷ್ಟ್ರೀಯ ಅಂಚೆ ನೌಕರರ ಸಂಘದ ಗ್ರೂಪ್ ಸಿ, ಪೋಸ್ಟ್ ಮ್ಯಾನ್ -ಎಂಟಿಎಸ್ […]

ಅ. 6 -7 ರಂದು ಆಳ್ವಾಸ್ ಪ್ರಗತಿ ಬೃಹತ್ ಉದ್ಯೋಗ ಮೇಳ

ಮೂಡಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುವ ಬೃಹತ್ ಉದ್ಯೋಗ ಮೇಳ ‘ಆಳ್ವಾಸ್ ಪ್ರಗತಿ-2023ʼ ಅಕ್ಟೋಬರ್ 6 ಹಾಗೂ 7ರಂದು ಮೂಡುಬಿದಿರೆಯ ವಿದ್ಯಾಗಿರಿ ಕಾಲೇಜು ಆವರಣದಲ್ಲಿ ನಡೆಯಲಿದೆ. ಆಳ್ವಾಸ್ ಪ್ರತಿಷ್ಠಾನವು 2007 ರಿಂದ ಬೃಹತ್ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ ಯನ್ನು ನಡೆಸಿಕೊಂಡು ಬರುತ್ತಿದೆ. ಇದು ಆಳ್ವಾಸ್ ಪ್ರಗತಿಯ 13ನೇ ಆವೃತ್ತಿಯಾಗಿದ್ದು, ಒಟ್ಟಾರೆಯಾಗಿ 200 ಕ್ಕೂ ಅಧಿಕ ಉದ್ಯೋಗದಾತ ಕಂಪೆನಿಗಳು ಭಾಗವಹಿಸುವ ನಿರೀಕ್ಷೆ ಇದೆ. ಅರ್ಹತೆ: ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ವೈದ್ಯಕೀಯ, ಅರೆ ವೈದ್ಯಕೀಯ, ಇಂಜಿನಿಯರಿಂಗ್, […]

ಕಾಶ್ಮೀರದಲ್ಲಿ ಅನುರಣಿಸಿತು ಕರಾವಳಿಯ ಗಂಡುಕಲೆ ಯಕ್ಷಗಾನ!! ನವರಾತ್ರಿಗೆ ವೈಷ್ಣೋದೇವಿ ಮಂದಿರದಲ್ಲಿ ಪ್ರದರ್ಶನಕ್ಕೆ ಗವರ್ನರ್ ರಿಂದ ಆಹ್ವಾನ!

ಶ್ರೀನಗರ: ಅ.2 ರಂದು ಗಾಂಧಿ ಜಯಂತಿ ಪ್ರಯುಕ್ತ ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದ ಶೇರ್-ಇ-ಕಾಶ್ಮೀರ್‌ ಇಂಟರ್‌ನ್ಯಾಷನಲ್‌ ಕಾನ್ಫರೆನ್ಸ್‌ ಸೆಂಟರ್‌ನಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಷನ್‌ ದೆಹಲಿ ಘಟಕ, ಸುಳ್ಯದ ಬೆಳ್ಳಾರೆಯ ನಿನಾದ ಸಾಂಸ್ಕೃತಿಕ ಕೇಂದ್ರ ಮತ್ತು ಜಮ್ಮು-ಕಾಶ್ಮೀರ ಸರ್ಕಾರದ ಕಲೆ, ಸಂಸ್ಕೃತಿ ಮತ್ತು ಭಾಷಾ ಇಲಾಖೆ ವತಿಯಿಂದ ಹಿಂದಿ ಯಕ್ಷಗಾನ ಮತ್ತು ಪಜ್ಜೆ-ಗೆಜ್ಜೆ ತುಳು-ಕನ್ನಡ ಶಾಸ್ತ್ರೀಯ, ಜಾನಪದ ನೃತ್ಯ ಪ್ರಕಾರ ಕಾರ್ಯಕ್ರಮ ನಡೆಯಿತು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ, ಕರ್ನಾಟಕದ 2 ಕಲಾ […]

ಕರ್ನಾಟಕ ನೈರುತ್ಯ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ

ಉಡುಪಿ: ಭಾರತ ಚುನಾವಣಾ ಆಯೋಗವು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರನ್ನು ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರ ನೋಂದಣಾಧಿಕಾರಿಯನ್ನಾಗಿ ಹಾಗೂ ಈ ಚುನಾವಣಾ ಕ್ಷೇತ್ರ ವ್ಯಾಪ್ತಿಗೊಳಪಡುವ ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ದಾವಣಗೆರೆ (ಹೊನ್ನಾಳಿ, ನ್ಯಾಮತಿ ಮತ್ತು ಚನ್ನಗಿರಿ ತಾಲೂಕುಗಳು), ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಯ ಜಿಲ್ಲಾಧಿಕಾರಿಗಳನ್ನು, ಆಯಾ ಉಪವಿಭಾಗಕ್ಕೆ ಸಂಬಂಧಪಟ್ಟ ಎಲ್ಲಾ ಸಹಾಯಕ ಆಯುಕ್ತರು, ವಿಭಾಗದ ಎಲ್ಲಾ ಸಂಬಂಧಪಟ್ಟ ತಾಲೂಕಿನ ತಹಶೀಲ್ದಾರರನ್ನು ಸಹಾಯಕ ಮತದಾರರ ನೋಂದಣಾಧಿಕಾರಿಯನ್ನಾಗಿ ನೇಮಿಸಿದ್ದು, ಅರ್ಹತಾ ದಿನಾಂಕ 2023 […]