ಪೆರ್ಡೂರು ಬಂಟರ ಸೌಹಾರ್ದ ಸಹಕಾರಿ ನಿಯಮಿತ: ವಾರ್ಷಿಕ ಮಹಾಸಭೆ
ಪೆರ್ಡೂರು: ಪೆರ್ಡೂರು ಸಮಾಜ ಬಾಂಧವರ ನಿರಂತರ ಸಹಕಾರದಿಂದ ಸಂಘ ಅಭಿವೃದ್ದಿ ಹೊಂದುವುದರ ಜತೆಗೆ ಲಾಭಾಂಶವನ್ನು ಶಿಕ್ಷಣ ಆರೋಗ್ಯ ಮತ್ತು ವಸತಿ ವಿಚಾರದಲ್ಲಿ ಸಮಾಜ ಬಾಂಧವರಿಗೆ ನೀಡಲಾಗುತ್ತಿದೆ. ಅಲ್ಲದೆ ಸಂಘದ ಎಲ್ಲಾ ನಿರ್ದೇಶಕರು ಯಾವುದೇ ಗೌರವ ಧನ ಹಾಗೂ ಡಿವಿಡೆಂಟ್ ನ್ನು ಪಡೆಯದೆ ಸಂಘದ ಬೆಳವಣಿಗೆಗೆ ಸಹಕಾರಿಯಾಗಿ ಸದಸ್ಯರಿಗೆ ಶೇ. 8 ಡಿವಿಡೆಂಟ್ ಘೋಷಿಸಲಾಗಿದೆ ಎಂದು ಪೆರ್ಡೂರು ಬಂಟರ ಸೌಹಾರ್ದ ಸಹಕಾರಿ ನಿಯಮಿತ ಇದರ ಅಧ್ಯಕ್ಷ ಶಾಂತಾರಾಮ ಸೂಡ ಕೆ. ಹೇಳಿದರು. ಅವರು ಸೆ.24ರಂದು ಪೆರ್ಡೂರು ಬಂಟರ ಸಮುದಾಯ […]
ಬರದ ಮಧ್ಯೆ ಬೆಲೆಯೇರಿಕೆ ಬರೆ, ಗ್ರಾಮಕ್ಕೊಂದು ಮದ್ಯದಂಗಡಿ: ಸರಕಾರದ ನೀತಿ ವಿರುದ್ಧ ಮಹಾವೀರ್ ಹೆಗ್ಡೆ ಕಿಡಿ
ಕಾರ್ಕಳ: ಅಗತ್ಯ ವಸ್ತು ಬೆಲೆ ಏರಿಕೆ, ವಿದ್ಯುತ್ ದರ ದುಪ್ಪಟ್ಟು, ಎಲ್ಲೆಂದರಲ್ಲಿ ಮದ್ಯದಂಗಡಿ ತೆರೆಯುವ ಮೂಲಕ ಸರಕಾರ ಸಮಾಜದ ಸ್ವಾಸ್ಥ್ಯ ಹಾಳುಗೆಡವಲು ಹೊರಟಿದೆ. ಇದರ ವಿರುದ್ಧ ಹೋರಾಟ ನಡೆಸಬೇಕಾದ ಅವಶ್ಯಕತೆ ಇದೆ. ರಾಜ್ಯದಲ್ಲಿ ಜನತೆ ಮೂಲಭೂತ ಬೇಡಿಕೆ ಈಡೇರಿಸಿಕೊಳ್ಳಲು ಹರಸಾಹಸ ಪಡುವಂತಹ ಸ್ಥಿತಿ ಬಂದೊದಗಿದೆ. ಅಕ್ಕಿ, ಬೇಳೆ, ದವಸ ಧಾನ್ಯ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯೇರಿಕೆಯಾಗಿದೆ. ಜನತೆ ಕೊಂಡುಕೊಳ್ಳುವ ಶಕ್ತಿ ಕಳೆದುಕೊಂಡು ಸಂಕಷ್ಟದಲ್ಲಿದ್ದಾರೆ. ಕಾಂಗ್ರೆಸ್ ದುರಾಡಳಿತಕ್ಕೆ ಇದು ಸಾಕ್ಷಿ. ವಿದ್ಯುತ್ ದರ ದುಪ್ಪಟ್ಟು ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ […]
ಸರ್ಕಾರಿ ಉದ್ಯೋಗಗಳ ಸ್ಪರ್ಧಾತ್ಮಕ ಪರೀಕ್ಷೆಗೆ ಆನ್‌ಲೈನ್ ತರಬೇತಿ
ಉಡುಪಿ: ಜಿಲ್ಲೆಯ ನಿರುದ್ಯೋಗ ಯುವಕ ಹಾಗೂ ಯುವತಿಯರಿಗೆ ಸರ್ಕಾರಿ ಉದ್ಯೋಗ ಪಡೆಯಲು ಸ್ಪರ್ಧಾತ್ಮಕ ಪರೀಕ್ಷೆಯು ಅಗತ್ಯವಿರುವುದರಿಂದ, ಉಡುಪಿ ಜಿಲ್ಲಾ ಪಂಚಾಯತ್ ಸ್ಟುಡಿಯೋದಿಂದ ಪ್ರತಿ ದಿನ ಸಂಜೆ 5.30 ರಿಂದ 7 ರ ವರೆಗೆ ಸ್ಪರ್ಧಾತ್ಮಕ ಪರೀಕ್ಷೆಗಾಗಿ ಆನ್‌ಲೈನ್ ತರಬೇತಿಯನ್ನು ನೀಡಲಾಗುವುದು. ತರಬೇತಿಯನ್ನು ಪಡೆಯಲಿಚ್ಛಿಸುವವರು ಉಡುಪಿ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ಹಾಜರಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಈ ಕುರಿತು ಮಾಹಿತಿಗಾಗಿ ಉಡುಪಿ ನಗರಸಭೆಯನ್ನು ಸಂಪರ್ಕಿಸಬಹುದಾಗಿದೆ ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಕಳ: ಕ್ರಿಯೇಟಿವ್ ಕಾಲೇಜಿನ ಎನ್.ಎಸ್.ಎಸ್ ಶಿಬಿರದ ಪೂರ್ವಭಾವಿ ಸಭೆ
ಕಾರ್ಕಳ: ಇಲ್ಲಿನ ಮೂರೂರಿನಲ್ಲಿಅ12 ರಿಂದ 18 ರ ವರೆಗೆ ಬಿ. ಎಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ರಿಯೇಟಿವ್ ಕಾಲೇಜಿನ ಎನ್.ಎಸ್.ಎಸ್ ಶಿಬಿರವು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸೆ.30 ರಂದು ಊರಿನ ಹಿರಿಯರು ಹಾಗೂ ಗಣ್ಯರ ಮಾರ್ಗದರ್ಶನದಲ್ಲಿ ಶಿಬಿರದ ಪೂರ್ವಭಾವಿ ಸಭೆ ನಡೆಯಿತು. ಕ್ರಿಯೇಟಿವ್ ವಿದ್ಯಾ ಸಂಸ್ಥೆಯ ಸಹ ಸಂಸ್ಥಾಪಕ ಡಾ. ಗಣನಾಥ ಶೆಟ್ಟಿ ಯವರು ಶಿಬಿರದ ಆಯೋಜನೆಯ ಉದ್ದೇಶ ಮತ್ತು ನಾಗರಿಕ ಸಮುದಾಯಗಳ ಪ್ರಗತಿ, ಊರಿನವರ ಸಹಕಾರ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಊರಿನ […]
ಕುಂದಾಪುರ: ಸಪ್ತಸ್ವರ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ: ಶೇ.14 ಡಿವಿಡೆಂಟ್ ಘೋಷಣೆ
ಕುಂದಾಪುರ: ಸಪ್ತಸ್ವರ ವಿವಿಧೋದ್ದೇಶ ಸಹಕಾರಿ ಸಂಘದ 2022-23 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ತಲ್ಲೂರಿನ ಜೈ ದುರ್ಗಾಮಾತ ಕಾಂಪ್ಲೆಕ್ಸ್ ನಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಎಂ. ಸಂಜೀವ ದೇವಾಡಿಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘವು 100 ಕೋ.ರೂ.ಗೂಅಧಿಕ ವಹಿವಾಟು ನಡೆಸಿದ್ದು, 17.61 ಕೋ.ರೂ.ಗೆ. ಸಾಲ ನೀಡಿದೆ. 25.45 ಲಕ್ಷ ರೂ. ಲಾಭ ಗಳಿಸಿದೆ. ಸದಸ್ಯರಿಗೆ ಶೇ.14 ಡಿವಿಡೆಂಟ್ ನೀಡಲು ನಿರ್ಧರಿಸಲಾಗಿದೆ. 200ಕ್ಕೂ ಮಿಕ್ಕಿ ಸ್ವಸಹಾಯ ಸಂಘ ರಚಿಸಿದ್ದು, ಮುಂದಿನ ದಿನಗಳಲ್ಲಿ ಗ್ರಾಹಕರ ಅನುಕೂಲಕ್ಕಾಗಿ ಹಲವಾರು […]