ಉಡುಪಿ: ಯುವತಿ ನಾಪತ್ತೆ

ಉಡುಪಿ: ಉಡುಪಿ ತಾಲೂಕು 76-ಬಡಗುಬೆಟ್ಟು ಗ್ರಾಮದ ಬೀಡಿನಗುಡ್ಡೆ ಶಂಕರಶೆಟ್ಟಿ ಕಂಪೌಂಡ್‌ನ ಬಾಡಿಗೆ ಮನೆಯ ನಿವಾಸಿ ಜಯಶ್ರೀ ರಾಠೋಡ್ ಅಲಿಯಾಸ್ ಪೂಜಾ ಎಂಬ ಯುವತಿಯು ಅಕ್ಟೋಬರ್ 1 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 4 ಇಂಚು ಎತ್ತರ, ಸಪೂರ ಶರೀರ, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಹಾಗೂ ಲಂಬಾಣಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ಅರ್ಜಿ ತಿರಸ್ಕರಿಸಿದ ಕರ್ನಾಟಕ ಹೈಕೋರ್ಟ್

ಬೆಂಗಳೂರು: ಕಳೆದ ವರ್ಷ ಭಾರತೀಯ ಜನತಾ ಪಕ್ಷದ(BJP) ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಮೂವರ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ. ನ್ಯಾಯಮೂರ್ತಿಗಳಾದ ಎಚ್‌ಬಿ ಪ್ರಭಾಕರ ಶಾಸ್ತ್ರಿ ಮತ್ತು ಅನಿಲ್ ಬಿ ಕತ್ತಿ ಅವರ ಪೀಠವು ಆರೋಪಿಗಳು ಅಪರಾಧದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವುದನ್ನು ತೋರಿಸಲು ಸಾಕಷ್ಟು ದೋಷಾರೋಪಣೆಯ ಸಾಕ್ಷ್ಯವನ್ನು ಕಂಡುಹಿಡಿದಿದೆ. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಸದಸ್ಯರಾಗಿರುವ ಮೂವರು ಆರೋಪಿಗಳಾದ ಇಸ್ಮಾಯಿಲ್ ಶಫಿ ಕೆ, ಕೆ ಮಹಮ್ಮದ್ ಇಕ್ಬಾಲ್ ಮತ್ತು ಶಹೀದ್ ಎಂ […]

ಇಂಗ್ಲೆಂಡ್​-ನ್ಯೂಜಿಲೆಂಡ್​ ನಡುವೆ ಮೊದಲ ಪಂದ್ಯ : ಅಹಮದಾಬಾದ್‌ನಲ್ಲಿ ವಿಶ್ವಕಪ್ ಕ್ರಿಕೆಟ್‌​ ಉದ್ಘಾಟನೆ

2019ರ ವಿಶ್ವಕಪ್​ ಗೆದ್ದ ಆಂಗ್ಲರ ಪಡೆ ಬಲಿಷ್ಠವಾಗಿದೆ. ಹಾಗೆಯೇ ಅದನ್ನೆದುರಿಸಲು ಕಿವೀಸ್​ ಪಡೆ ಸಕಲ ರೀತಿಯಲ್ಲೂ ಸನ್ನದ್ಧವಾಗಿದೆ. ಗಾಯದಿಂದ ಚೇತರಿಸಿಕೊಂಡು ತಂಡಕ್ಕೆ ಮರಳಿರುವ ನಾಯಕ ವಿಲಿಯಮ್ಸನ್​ ಕಿವೀಸ್​ ಬಲ. ಅತ್ತ ನಿವೃತ್ತಿಯನ್ನು ವಿಶ್ವಕಪ್​ಗಾಗಿ ವಾಪಸ್ ಪಡೆದ ಸ್ಟೋಕ್ಸ್​ ಅವರಿಗೆ ಗಾಯವಾಗಿರುವುದು ಆಂಗ್ಲರಿಗೆ ನೆಗೆಟಿವ್​ ಆಗಿದೆ. ಈ ಎಲ್ಲದರ ನಡುವೆ ಉದ್ಘಾಟನಾ ಪಂದ್ಯ ರೋಚಕ ಹಣಾಹಣಿಗೆ ಸಾಕ್ಷಿಯಾಗಲಿದೆ. ಅಹಮದಾಬಾದ್ (ಗುಜರಾತ್): ನಾಳೆ ಗುಜರಾತ್‌ನ​ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ತಂಡಗಳ ಸೆಣಸಾಟದಿಂದ ವಿಶ್ವಕಪ್ ಕ್ರಿಕೆಟ್‌ಗೆ​ […]

ವಿಚಾರಣೆ ಮುಂದೂಡಿದ ಹೈಕೋರ್ಟ್ : ಮುರುಘಾ ಶ್ರೀಗಳ ವಿರುದ್ಧ ಪಿತೂರಿ ಆರೋಪ

ಬೆಂಗಳೂರು: ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧದ ಪ್ರಕರಣದ ಸಾಕ್ಷಿಗಳಾಗಿರುವ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಮತ್ತವರ ಪತ್ನಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. ಮುರುಘಾ ಶರಣ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲು ಪಿತೂರಿ ನಡೆಸಿದ ಮತ್ತು ಹಣ ಸುಲಿಗೆಗೆ ಪ್ರಯತ್ನಿಸಿದ ಆರೋಪದ ಮೇಲೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಬಸವರಾಜನ್ ಮತ್ತು ಸೌಭಾಗ್ಯ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ದೇವದಾಸ್ ಅವರ ಪೀಠ ವಿಚಾರಣೆಯನ್ನು ಮುಂದೂಡಿತು. ಚಿತ್ರದುರ್ಗ ಮುರುಘಾ […]

ನಾಗ್ಪುರ : 2 ಸರ್ಕಾರಿ ಆಸ್ಪತ್ರೆಗಳಲ್ಲಿ 24 ಗಂಟೆಗಳಲ್ಲಿ 25 ರೋಗಿಗಳ ಸಾವು

ನಾಗ್ಪುರ (ಮಹಾರಾಷ್ಟ್ರ): ನಾಗ್ಪುರದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ (ಮೇಯೊ) ಯಲ್ಲಿ ಕಳೆದ 24 ಗಂಟೆಗಳಲ್ಲಿ 25 ರೋಗಿಗಳು ಸಾವನ್ನಪ್ಪಿರುವುದು ವರದಿಯಾಗಿದೆ. ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ 16 ರೋಗಿಗಳು ಹಾಗೂ ಮೇಯೊ ಆಸ್ಪತ್ರೆಯಲ್ಲಿ 9 ರೋಗಿಗಳು ಸಾವನ್ನಪ್ಪಿದ್ದಾರೆ. ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಸಾವುಗಳು ಹೆಚ್ಚುತ್ತಿರುವ ಬಗ್ಗೆ ಇತ್ತೀಚೆಗೆ ವರದಿಯಾಗುತ್ತಿದ್ದು, ಇದೀಗ ನಾಗ್ಪುರದ ಎರಡು ಸರ್ಕಾರಿ ಆಸ್ಪತ್ರೆಗಳಲ್ಲಿ ಕಳೆದ 24 ಗಂಟೆಗಳಲ್ಲಿ 25 ರೋಗಿಗಳು ಸಾವನಪ್ಪಿರುವುದು […]