ಆತ್ಮಾಹುತಿ ದಾಳಿಗೆ ಪ್ರತೀಕಾರ: 26 ಕುರ್ದಿಶ್ ಉಗ್ರರನ್ನು ಹತ್ಯೆಗೈದ ಟರ್ಕಿ
ಅಂಕಾರಾ : ಸಿರಿಯಾದ ಕುರ್ದಿಶ್ ಪೀಪಲ್ಸ್ ಡಿಫೆನ್ಸ್ ಯೂನಿಟ್ (ವೈಪಿಜಿ) ನಡೆಸಿದ ದಾಳಿಗೆ ಪ್ರತಿಯಾಗಿ ತನ್ನ ಪಡೆಗಳು 26 ಕುರ್ದಿಶ್ ಉಗ್ರರನ್ನು ಹತ್ಯೆಗೈದಿವೆ ಎಂದು ಟರ್ಕಿಯ ರಕ್ಷಣಾ ಸಚಿವಾಲಯ ಶುಕ್ರವಾರ ತಿಳಿಸಿದೆ. ಉತ್ತರ ಸಿರಿಯಾದಲ್ಲಿನ ಟರ್ಕಿಶ್ ಮಿಲಿಟರಿಯ ಯೂಫ್ರೆಟಿಸ್ ಶೀಲ್ಡ್ ಕಾರ್ಯಾಚರಣೆ ವಲಯದ ದಾಬಿಕ್ ಬೇಸ್ ಪ್ರದೇಶದ ಮೇಲೆ ವೈಪಿಜಿ ಗುರುವಾರ ತಡರಾತ್ರಿ ದಾಳಿ ನಡೆಸಿದ ನಂತರ ಅಂಕಾರಾ ಪ್ರತೀಕಾರ ಕೈಗೊಂಡಿದೆ ಎಂದು ಸಚಿವಾಲಯದ ಹೇಳಿಕೆಯನ್ನು ಉಲ್ಲೇಖಿಸಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಟರ್ಕಿ ಮಿಲಿಟರಿಯು 26 […]
ಕಾರ್ಕಳ: ಚಲಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಚಿರತೆ ಸಾವು
ಕಾರ್ಕಳ: ಕಾಡಿನ ಮಧ್ಯದಿಂದ ಹಠಾತ್ತನೆ ಚಿರತೆಯೊಂದು ರಸ್ತೆಗೆ ನುಗ್ಗಿ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆ ಪರಿಣಾಮ ಸಾವನಪ್ಪಿದೆ. ಘಟನೆಯು ಹೆಬ್ರಿ ತಾಲೂಕಿನ ಮುದ್ರಾಡಿ ಕಾರ್ಕಳ ರಸ್ತೆಯ ಭಕ್ರೆ ಮಠ ಕ್ರಾಸ್ ಬಳಿ ಗುರುವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಕಾರ್ಕಳದಿಂದ ಮುದ್ರಾಡಿ ಕಡೆಗೆ ವೇಗವಾಗಿ ಸಂಚರಿಸುತ್ತಿದ್ದ ಕಾರು ರಸ್ತೆ ಕಡೆಗೆ ಹಠಾತ್ತಾಗಿ ನುಗ್ಗಿದ ಚಿರತೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಚಿರತೆ ಸ್ಥಳದಲ್ಲೇ ಸಾವನ್ನಪ್ಪಿದೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ […]
ನೇತ್ರಾವತಿ ರೈಲಿನಲ್ಲಿ ಮಹಿಳೆಯ ಬ್ಯಾಗ್ ಕಳ್ಳತನ: ನಾಲ್ಕು ಗಂಟೆಯೊಳಗಾಗಿ ಕಳ್ಳನ ಪತ್ತೆ ಹಚ್ಚಿದ ಪೊಲೀಸರು
ಉಡುಪಿ: ನೇತ್ರಾವತಿ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್ ಕದ್ದು ಪರಾರಿಯಾಗಿದ್ದ ಕಳ್ಳನನ್ನು ರೈಲ್ವೆ ಪೊಲೀಸರು ದೂರು ದಾಖಲಿಸ್ದ ನಾಲ್ಕು ಗಂಟೆಗಳೊಳಗಾಗಿ ಬಂಧಿಸಿದ್ದಾರೆ. ದಿಲ್ಲಿ ನಿವಾಸಿ ಸನ್ನಿ ಮಲ್ಹೋತ್ರಾ (30) ಬಂಧಿತ ಆರೋಪಿಯಾಗಿದ್ದಾನೆ. ನೇತ್ರಾವತಿ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕಲ್ಯಾಣಿ ಬಾಲಕೃಷ್ಣನ್ ಎಂಬ ಮಹಿಳೆ ಬುಧವಾರ S7 ಕೋಚ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಅವರ ಬ್ಯಾಗ್ ತೋಕೂರು ನಿಲ್ದಾಣದ ಬಳಿ ಕಳ್ಳತನವಾಗಿತ್ತು. ಬ್ಯಾಗಿನಲ್ಲಿ ಚಿನ್ನ ಮತ್ತು ಇತರ ಬೆಲೆಬಾಳುವ ವಸ್ತುಗಳಿದ್ದವು. ಈ ಕುರಿತು ಅವರು ರೈಲ್ವೆ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ಪ್ರಾರಂಭಿಸಿದ […]
ಏಷ್ಯನ್ ಗೇಮ್ಸ್: ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಸೋಲಿಸಿ ಫೈನಲ್ ಪ್ರವೇಶಿಸಿದ ಭಾರತೀಯ ಪುರುಷರ ಕಬಡ್ಡಿ ತಂಡ
ಶುಕ್ರವಾರ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನ ಫೈನಲ್‌ಗೆ ಅರ್ಹತೆ ಪಡೆಯಲು ಭಾರತೀಯ ಪುರುಷರ ಕಬಡ್ಡಿ ತಂಡವು ಸೆಮಿಫೈನಲ್‌ನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಸೋಲಿಸಿತು. ಪವನ್ ಸೆಹ್ರಾವತ್ ನೇತೃತ್ವದ ಭಾರತವು ಆರಂಭದಿಂದಲೇ ಪ್ರಾಬಲ್ಯ ಸಾಧಿಸಿತು ಮತ್ತು ಪ್ರತಿಸ್ಪರ್ಧಿ ಪಾಕಿಸ್ತಾನದ ವಿರುದ್ಧ 61-14 ಅಂತರದಿಂದ ಜಯಗಳಿಸಿತು. ಶನಿವಾರ ಇರಾನ್ ಮತ್ತು ಚೈನೀಸ್ ತೈಪೆ ನಡುವಿನ ಇನ್ನೊಂದು ಸೆಮಿಫೈನಲ್ ನಡೆಯಲಿದೆ. ಭಾರತವು ಫೈನಲ್ ನಲ್ಲಿ ಈ ಎರಡಲ್ಲಿ ವಿಜೇತರಾದ ತಂಡವನ್ನು ಎದುರಿಸಲಿದೆ. ಮೊದಲ ನಾಲ್ಕು ಅಂಕಗಳನ್ನು ಗಳಿಸಿದ ಪಾಕಿಸ್ತಾನವು ಪಂದ್ಯವನ್ನು ಬಲಿಷ್ಠವಾಗಿ […]
ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ: ನಿರ್ವಾಹಕರು ಹಾಗೂ ಕ್ಲೀನರ್‌ಗಳಿಂದ ನೋಂದಣಿ ಆಹ್ವಾನ
ಉಡುಪಿ: ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಾದ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್‌ಗಳು ನಿರಂತರವಾಗಿ ಅಪಘಾತಗಳಿಗೆ ತುತ್ತಾಗಿ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಗಳು ಹೆಚ್ಚಾಗಿದ್ದು, ಇಂತಹ ಕಾರ್ಮಿಕರು ಅಪಘಾತಕ್ಕಿಡಾಗಿ ಮರಣಕ್ಕೆ ತುತ್ತಾಗುವ, ಶಾಶ್ವತ ದುರ್ಬಲತೆ ಅಥವಾ ತಾತ್ಕಾಲಿಕ ದುರ್ಬಲತೆ ಹೊಂದಿದ ಸಂದರ್ಭದಲ್ಲಿ, ಅವರ ದುಡಿಮೆಯನ್ನೇ ಅವಲಂಬಿಸಿರುವ ಅವರ ಕುಟುಂಬವು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕುತ್ತದೆ. ಅಪಘಾತದಿಂದಾಗಿ ಸಂಕಷ್ಟಕ್ಕೆ ಸಿಲುಕುವ ಚಾಲಕರು ಮತ್ತು ಅವರ ಕುಟುಂಬದ ಸದಸ್ಯರಿಗೆ ನೆರವು ನೀಡಲು ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ವಾಹನ ಚಾಲಕರ ಅಪಘಾತ […]