ಅ.10 ರಂದು ಬೃಹತ್ ಹಿಂದೂ ಸಮಾಜೋತ್ಸವ: ಪಂಡಿತ್ ಧೀರೇಂದ್ರ ಕೃಷ್ಣ ಶಾಸ್ತ್ರಿ ಭಾಗಿ

ಉಡುಪಿ: ವಿಶ್ವ ಹಿಂದೂ ಪರಿಷದ್ ಬಜರಂಗದಳ ಉಡುಪಿ ಜಿಲ್ಲೆಯ ವತಿಯಿಂದ ಷಷ್ಠಿಪೂರ್ತಿ ಸಮಾರಂಭದ ಅಂಗವಾಗಿ ಅ.10 ರಂದು ಹಿಂದೂ ಸಮಾಜೋತ್ಸವ ಶೌರ್ಯ ಜಾಗರಣ ರಥಯತ್ರೆಯು ಎಂ.ಜಿ.ಎಂ ಕಾಲೇಜು ಮೈದಾನದಲ್ಲಿ ನಡೆಯಲಿದ್ದು ದೇಶದ ಪ್ರಖರ ಹಿಂದೂ ವಾಗ್ಮಿ ಭಾಗೇಶ್ವರ ಧಾಮ ಸರ್ಕಾರ್ ಪಂಡಿತ್ ಧೀರೇಂದ್ರ ಕೃಷ್ಣ ಶಾಸ್ತ್ರಿ ಭಾಗವಹಿಸಲಿದ್ದಾರೆ.

ಹಮಾಸ್ ವಿರುದ್ದ ಯುದ್ದ ಘೋಷಿಸಿದ ಇಸ್ರೇಲ್: ಉಗ್ರ ದಾಳಿಗೆ ಪ್ರತೀಕಾರ ತೀರಿಸುವ ಪ್ರತಿಜ್ಞೆ ಕೈಗೊಂಡ ಬೆಂಜಮಿನ್ ನೆತನ್ಯಾಹು

ಟೆಲ್ ಅವೀವ್: 22 ಇಸ್ರೇಲಿಗಳನ್ನು ಕೊಂದ ಭೀಕರ ರಾಕೆಟ್ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಪ್ರತಿಜ್ಞೆ ಮಾಡಿರುವ ಇಸ್ರೇಲ್, ಶನಿವಾರ ಪ್ಯಾಲೆಸ್ಟೈನ್‌ನ ಹಮಾಸ್ ವಿರುದ್ಧ ಯುದ್ಧ ಘೋಷಿಸಿದೆ. ದಿಗ್ಬಂಧನಗೊಂಡಿರುವ ಗಾಜಾ ಪಟ್ಟಿಯ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದೆ. ತಮ್ಮ ದೇಶವು ಯುದ್ಧದಲ್ಲಿದೆ ಮತ್ತು ಹಮಾಸ್ ಹಿಂದೆಂದೂ ಕಂಡಿಲ್ಲದ ಬೆಲೆ ತೆರಲಿದೆ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. “ಇಸ್ರೇಲ್ ನಾಗರಿಕರೇ, ನಾವು ಯುದ್ಧದಲ್ಲಿದ್ದೇವೆ. ಇದು ಕಾರ್ಯಾಚರಣೆಯಲ್ಲ, ಉಲ್ಬಣವಲ್ಲ – ಇದು ಯುದ್ಧ. ಮತ್ತು ನಾವು ಗೆಲ್ಲುತ್ತೇವೆ. ಹಮಾಸ್ […]

ನಗರಸಭಾ ವ್ಯಾಪ್ತಿಯ ವಿವಿಧ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಒದಗಿಸಿ: ಯಶ್ ಪಾಲ್ ಸುವರ್ಣ

ಉಡುಪಿ: ಉಡುಪಿ ನಗರಸಭೆಯ ಸತ್ಯಮೂರ್ತಿ ಸ್ಮಾರಕ ಸಭಾಭವನದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಭಾಗವಹಿಸಿ, ನಗರಸಭಾ ವ್ಯಾಪ್ತಿಯ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಿ ತಕ್ಷಣ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹೆರ್ಗ ಸರಳಬೆಟ್ಟು ವಸತಿ ಸಮುಚ್ಚಯದ ಫಲಾನುಭವಿಗಳಿಗೆ ನವೆಂಬರ್ 1 ರೊಳಗೆ ಮನೆಗಳನ್ನು ಹಸ್ತಾಂತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಉಡುಪಿ ನಗರದ ವಾಹನ ದಟ್ಟಣೆ, ಪಾರ್ಕಿಂಗ್ ಸಮಸ್ಯೆ, ನಗರೋತ್ಥಾನ ಯೋಜನೆ ಸಹಿತ ಬಾಕಿಯಿರುವ ಅಭಿವೃದ್ಧಿ ಕಾಮಗಾರಿಗಳು, ದಾರಿ ದೀಪ ಸಮರ್ಪಕ […]

ಏಷನ್ ಗೇಮ್ಸ್ ನಲ್ಲಿ ಇತಿಹಾಸ ಸೃಷ್ಟಿ: ಬ್ಯಾಡ್ಮಿಂಟನ್ ಪುರುಷರ ಡಬಲ್ಸ್ ನಲ್ಲಿ ಸಾತ್ವಿಕ್‌-ಚಿರಾಗ್ ಗೆ ಚಿನ್ನದ ಪದಕ!!

ಏಷ್ಯನ್ ಗೇಮ್ಸ್ 2023 ರ ಬ್ಯಾಡ್ಮಿಂಟನ್ ಪುರುಷರ ಡಬಲ್ಸ್ ಈವೆಂಟ್‌ನಲ್ಲಿ ಭಾರತದ ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಇತಿಹಾಸವನ್ನು ಸೃಷ್ಟಿಸಿದರು. ಸಾತ್ವಿಕ್-ಚಿರಾಗ್ ರಿಪಬ್ಲಿಕ್ ಆಫ್ ಕೊರಿಯಾದ ಚೋಯ್ ಸೊಲ್ಗ್ಯು ಮತ್ತು ಕಿಮ್ ವೊನ್ಹೋ ಅವರನ್ನು ನೇರ ಗೇಮ್‌ಗಳಲ್ಲಿ ಸೋಲಿಸಿ ಚಿನ್ನದ ಪದಕಕ್ಕೆ ಕೊರಳೊಡ್ಡಿದರು. ಈ ಗೆಲುವಿನೊಂದಿಗೆ ಭಾರತವು ಅಕ್ಟೋಬರ್ 7 ರ ಶನಿವಾರದಂದು ತನ್ನ ಪದಕಗಳ ಸಂಖ್ಯೆಯನ್ನು 101 ಕ್ಕೆ ಏರಿಸಿತು. ವಿಶ್ವ ನಂ. 3 ಪುರುಷರ ಡಬಲ್ಸ್ ಜೋಡಿ ಸಾತ್ವಿಕ್‌ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ […]

ಅ. 9 ರಂದು ಗ್ರಾಮ ಪಂಚಾಯತ್ ಗಳಲ್ಲಿ ಸಾಮಾನ್ಯ ಜ್ಞಾನ ಪತ್ರಿಕೆಯ ಪ್ರಾಯೋಗಿಕ ತರಬೇತಿ

ಉಡುಪಿ: ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಸಭಾಂಗಣದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಆನ್‌ಲೈನ್ ತರಬೇತಿ ಆಯೋಜಿಸಲು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವ್ಯವಸ್ಥೆ ಮಾಡಿಕೊಂಡಿದ್ದು, ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವ ಸಾಮಾನ್ಯ ಜ್ಞಾನ ಪತ್ರಿಕೆಯ ಆನ್‌ಲೈನ್ ತರಬೇತಿಯನ್ನು ಪ್ರಾಯೋಗಿಕವಾಗಿ ಅಕ್ಟೋಬರ್ 9 ರಂದು ಸಂಜೆ 5.30 ಕ್ಕೆ ಆರಂಭಿಸಲಾಗುತ್ತಿದೆ. ಸ್ಪರ್ಧಾತ್ಮಕ ಪರೀಕ್ಷೆ ಬರೆಯಲಿಚ್ಚಿಸುವ ಅಭ್ಯರ್ಥಿಗಳು https://udupi-spardha.com ಮೂಲಕ ಆಥವಾ ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೆಸರು ನೊಂದಾಯಿಸಿಕೊಳ್ಳುವಂತೆ […]