ಮಾಹೆ ಗಾಂಧಿಯನ್ ಸೆಂಟರ್ ನಿಂದ ಡಾ.ಟಿ.ಎಂ.ಎ ಪೈ ಅವರ 125ನೇ ಜನ್ಮದಿನ ಆಚರಣೆ

ಮಣಿಪಾಲ: ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ವತಿಯಿಂದ ಆಧುನಿಕ ಮಣಿಪಾಲದ ನಿರ್ಮಾತೃ, ಶಿಕ್ಷಣ ತಜ್ಞ ಡಾ.ಟಿ.ಎಂ.ಎ ಪೈ ಅವರ 125ನೇ ಜನ್ಮಶತಮಾನೋತ್ಸವವನ್ನು ಮಣಿಪಾಲದ ಅಕಾಡೆಮಿ ಹೈಯರ್ ಪ್ರೈಮರಿ ಸ್ಕೂಲ್ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳನ್ನು ಆಯೋಜಿಸುವುದರ ಮೂಲಕ ಆಚರಿಸಲಾಯಿತು. ವಿದ್ಯಾರ್ಥಿಗಳನ್ನು ಡಾ.ಟಿ.ಎಂ.ಎ. ಪೈ ವಾಸಿಸುತ್ತಿದ್ದ ಸ್ಮೃತಿ ಭವನಕ್ಕೆ ಕರೆದೊಯ್ದು, ಸ್ಮೃತಿ ಭವನದಲ್ಲಿರುವ ಛಾಯಾಚಿತ್ರಗಳು, ವೃತ್ತಪತ್ರಿಕೆ ತುಣುಕುಗಳು ಮತ್ತು ಇತರ ಆರ್ಕೈವಲ್ ವಸ್ತುಗಳ ಮೂಲಕ ಡಾ ಪೈ ಅವರ ಜೀವನ ಮತ್ತು ಬದುಕನ್ನು ಅವರಿಗೆ […]
ಅ.10 ಹಾಗೂ 11 ರಂದು ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಅಕ್ಟೋಬರ್ 10 ಮತ್ತು 11 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 110/11 ಕೆವಿ ಬೆಳ್ಮಣ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆ.ವಿ ಫೀಡರ್ ಗಳಾದ ಮುಂಡ್ಕೂರು, ಬೆಳ್ಮಣ್ ನಂದಳಿಕೆ, ಸೂಡ ಫೀಡರ್ ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳ್ಮಣ್, ಬೆಳ್ಮಣ್ ದೇವಸ್ಥಾನ, ಗೋಳಿಕಟ್ಟೆ, ನಂದಳಿಕೆ, ಜಂತ್ರ, ನೀಚಾಲು, ಕೆದಿಂಜೆ, ಮಾವಿನಕಟ್ಟೆ, ದೇಂದೊಟ್ಟು ಪದವು, ಇಟ್ಟಮೇರಿ, ಮುಂಡ್ಕೂರು, ಕಾಂಜರಕಟ್ಟೆ, […]
ಉಡುಪಿಯ ಸ್ವಚ್ಛತೆಗೆ ಪೌರಕಾರ್ಮಿಕರ ಅವಿರತ ಸೇವೆ ಕಾರಣ: ಶೋಭಾ ಕರಂದ್ಲಾಜೆ

ಉಡುಪಿ: ಉಡುಪಿ ನಗರವು ಸ್ವಚ್ಛತೆಗ ಹೆಸರುವಾಸಿಯಾಗಿದೆ. ನಗರದ ಸ್ವಚ್ಛತೆಗೆ ಪೌರಕಾರ್ಮಿಕರ ಕೊಡುಗೆ ಅವಿರತವಾಗಿದ್ದು, ನಗರವನ್ನು ಸ್ವಚ್ಛವಾಗಿಡಲು ಪೌರಕಾರ್ಮಿಕರು ಶ್ರಮ ವಹಿಸುತ್ತಿದ್ದಾರೆ. ಕೊರೋನ ಸಂದರ್ಭದಲ್ಲಿ ಪೌರಕಾರ್ಮಿಕರು ಸಮಾಜದ ಉಳಿವಿಗಾಗಿ ಸ್ವಚ್ಛತೆಗೆ ಆದ್ಯತೆ ನೀಡಿದ್ದಾರೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಶನಿವಾರ ನಗರದ ಅಜ್ಜರಕಾಡು ಪುರಭವನದಲ್ಲಿ, ಉಡುಪಿ ನಗರಸಭೆ ವತಿಯಿಂದ ನಡೆದ ಪೌರಕಾರ್ಮಿಕರ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಲ ಹೊರುವ ಪದ್ಧತಿ ನಿಷೇಧಕ್ಕೆ ಡಾ. ವಿ.ಎಸ್ ಆಚಾರ್ಯ ಅವರ […]
ಪರಶುರಾಮ ಥೀಂ ಪಾರ್ಕ್ ಪ್ರವೇಶಕ್ಕೆ ತಾತ್ಕಾಲಿಕ ತಡೆ

ಕಾರ್ಕಳ: ತಾಲೂಕಿನ ಯರ್ಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಶುರಾಮ ಥೀಂ ಪಾರ್ಕಿನ ಕಾಮಗಾರಿಯನ್ನು ಪೂರ್ಣಗೊಳಿಸಲು ಅನುಕೂಲವಾಗುವಂತೆ ಅ.9 ರಿಂದ ನವೆಂಬರ್ ಅಂತ್ಯದವರೆಗೆ ಕಾಲಾವಕಾಶ ಬೇಕಾಗಿರುವುದರಿಂದ ಅಲ್ಲಿಯವರೆಗೆ ಥೀಂ ಪಾರ್ಕ್ ಗೆ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ ಎಂದು ಕಾರ್ಕಳ ತಾಲೂಕು ತಹಸೀಲ್ದಾರ್ ಅವರ ಪ್ರಕಟಣೆ ತಿಳಿಸಿದೆ.