7 ಮಂದಿ ದಾರುಣ ಸಾವು : ತಮಿಳುನಾಡಿನ ಪಟಾಕಿ ಅಂಗಡಿಯಲ್ಲಿ ಅಗ್ನಿ ಅವಘಡ

ಅರಿಯಲೂರು (ತಮಿಳುನಾಡು): ಕರ್ನಾಟಕದ ಅತ್ತಿಬೆಲೆಯಲ್ಲಿ ನಡೆದ ದುರ್ಘಟನೆ ಮಾಸುವ ಮುನ್ನವೇ ತಮಿಳುನಾಡಿನಲ್ಲಿ ಅಂತಹುದೇ ಘಟನೆಯೊಂದು ವರದಿಯಾಗಿದೆ.ತಮಿಳುನಾಡಿನ ಅರಿಯಲೂರು ಜಿಲ್ಲೆಯ ಪಟಾಕಿ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ದುರ್ಘಟನೆಯಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಬೆಳಗ್ಗೆ 9:30ರ ಸುಮಾರಿಗೆ ಪಟಾಕಿ ತಯಾರಿಸುತ್ತಿದ್ದಾಗ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಅರಿಯಲೂರು ಜಿಲ್ಲೆಯ ಪಟಾಕಿ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ. ರಾಜೇಂದ್ರನ್ ಎಂಬುವರು. ವೀರಕಲೂರು ಗ್ರಾಮದಲ್ಲಿ ಯಾಜ್ ಕ್ರ್ಯಾಕರ್ಸ್ ಎಂಬ ಅಂಗಡಿಯನ್ನು ನಡೆಸುತ್ತಿದ್ದು, […]
ವಿಧಾನಸಭೆ ಸ್ಪೀಕರ್‌ಗೆ ನೋಟಿಸ್ ಜಾರಿ ಮಾಡಿದ ಸುಪ್ರೀಂ ಕೋರ್ಟ್ : ಮಹಾರಾಷ್ಟ್ರ
ನವದೆಹಲಿ: ಪಕ್ಷಾಂತರ ನಿಷೇಧ ಕಾಯ್ದೆಯಡಿ ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ಅಜಿತ್ ಪವಾರ್ ಮತ್ತು ಇತರ ಏಳು ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಶರದ್ ಪವಾರ್ ಬಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ.ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರ ಪೀಠವು ಮುಂದಿನ ಶುಕ್ರವಾರ ಅರ್ಜಿಯನ್ನು ಶಿವಸೇನೆ ಪ್ರಕರಣದೊಂದಿಗೆ ಪಟ್ಟಿ ಮಾಡಲು ನಿರ್ಧರಿಸಿದೆ. ಇದರಲ್ಲಿ ನ್ಯಾಯಾಲಯವು ಅನರ್ಹತೆ […]
ಕೆಎಂಎಫ್-24ರಲ್ಲಿ 3ನೇ ಸ್ಥಾನ : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸಾಧನೆ

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ . ಕೆಎಂಎಫ್ (ಕರ್ನಾಟಕ ಮುನ್ಸಿಪಲ್ ಫೈನಾನ್ಸ್)-24 ಆನ್‌ಲೈನ್ ಅಪ್ಲಿಕೇಷನ್ ಪ್ರಕ್ರಿಯೆಯಲ್ಲಿ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯು ರಾಜ್ಯದಲ್ಲಿ 3ನೇ ಸ್ಥಾನ ಲಭಿಸಿದೆ.ಈ ನಿಟ್ಟಿನಲ್ಲಿ ಕೆಎಂಎಫ್-24ರಲ್ಲಿ ಮೂರನೇ ಸ್ಥಾನ ಗಿಟ್ಟಿಸಿಕೊಂಡು ಉತ್ತಮ ಸಾಧನೆ ಮಾಡಿದೆ. ಅವಳಿ ನಗರದ ಎಲ್ಲ ಸ್ಥಿರಾಸ್ತಿಗಳನ್ನು ಡಿಜಿಟಲೀಕರಣಗೊಳಿಸುವ ಕೆಎಂಎಫ್ (ಕರ್ನಾಟಕ ಮುನ್ಸಿಪಲ್ ಫೈನಾನ್ಸ್)-24 ಆನ್‌ಲೈನ್ ಅಪ್ಲಿಕೇಷನ್ ಪ್ರಕ್ರಿಯೆಯಲ್ಲಿ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯು ರಾಜ್ಯದಲ್ಲಿ 3ನೇ ಸ್ಥಾನ ಪಡೆದುಕೊಂಡಿದೆ. 3,52,459 […]
ನೆದರ್ಲ್ಯಾಂಡ್ಸ್ : ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ

ಹೈದರಾಬಾದ್: ವಿಶ್ವಕಪ್ 2023ರ ಅಂಗವಾಗಿ ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ಮತ್ತು ನೆದರ್ಲ್ಯಾಂಡ್ಸ್ ನಡುವೆ ಸೆಣಸಾಟ ನಡೆಯುತ್ತಿದ್ದು, ಟಾಸ್ ಗೆದ್ದ ನೆದರ್ಲ್ಯಾಂಡ್ಸ್ ತಂಡದ ನಾಯಕ ಸ್ಕಾಟ್ ಎಡ್ವರ್ಡ್ಸ್, ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.ನ್ಯೂಜಿಲೆಂಡ್ ಆಟಗಾರರನ್ನು ಬ್ಯಾಟಿಂಗ್ ಮಾಡಲು ಆಹ್ವಾನ ನೀಡಿದ್ದಾರೆ. ವಿಶ್ವಕಪ್‌ನ ಆರಂಭಿಕ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ವಿರುದ್ಧ ಮೇಲುಗೈ ಸಾಧಿಸಿದ ನ್ಯೂಜಿಲೆಂಡ್, ಇಂದಿನ ಪಂದ್ಯವನ್ನು ಕೂಡ ಗೆಲ್ಲುವ ನಿರೀಕ್ಷೆ ಇಟ್ಟುಕೊಂಡಿದೆ. ನೆದರ್ಲ್ಯಾಂಡ್ಸ್ ಕೂಡ ನ್ಯೂಜಿಲೆಂಡ್ಗೆ ಕಠಿಣ ಸ್ಪರ್ಧೆಯೊಡ್ಡುವ ಉತ್ಸಾಹದಲ್ಲಿದೆ. ನಡೆಯುತ್ತಿರುವ ವಿಶ್ವಕಪ್‌ನ ಆರಂಭಿಕ […]
ಅ.15 ರಿಂದ 24 ರ ವರೆಗೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

ಕುಂದಾಪುರ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಅ.15 ರಿಂದ 24 ರ ವರೆಗೆ ಮಹಾನವರಾತ್ರಿ ಉತ್ಸವ ಜರುಗಲಿದೆ. ಅ.23 ರಂದು ಮಹಾ ನವಮಿ ದಿನ ಬೆಳಗ್ಗೆ 11.30ಕ್ಕೆ ಚಂಡಿಕಾ ಯಾಗ, ಮಧ್ಯಾಹ್ನ 12.20ಕ್ಕೆ ರಥೋತ್ಸವ ಜರುಗಲಿದೆ. ಅ.24 ರಂದು ವಿಜಯ ದಶಮಿಯಂದು ವಿದ್ಯಾರಂಭ, ನವಾನ್ನಪ್ರಾಶನ ನಡೆಯಲಿದೆ. ನವರಾತ್ರಿ ಉತ್ಸವದಲ್ಲಿ ಭಕ್ತರು ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾಗಬೇಕು ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ ತಿಳಿಸಿದ್ದಾರೆ. ಮಹಾನವರಾತ್ರಿ ಉತ್ಸವದ ಸಂದರ್ಭ ಪ್ರತಿದಿನ ಶತರುದ್ರ ನಡೆಯಲಿದ್ದು, […]