ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಜೀರ್ಣೋದ್ಧಾರ

ತುಮಕೂರು : ಕಲ್ಪತರು ನಾಡದ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಶುಕ್ರವಾರದ ಕೋಟೆ ಬಾಗಿಲು ಹೊಸ ಬೀದಿಯ ಇತಿಹಾಸ ಪ್ರಸಿದ್ಧ ಶ್ರೀ ಮಹಾಲಕ್ಷ್ಮೀ ಮದ್ದರ ಲಕ್ಕಮ್ಮ ದೇವಾಲಯವು ದೊಡ್ಡಣ್ಣ ಗುಡ್ಡೆಯ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ಧರ್ಮದರ್ಶಿಗಳಾದ ಪರಮಪೂಜ್ಯ ಶ್ರೀ ರಮಾನಂದ ಗುರೂಜಿಯವರ ಮಾರ್ಗದರ್ಶನದಲ್ಲಿ ಜೀರ್ಣೋದ್ಧಾರಗೊಳ್ಳಲಿದೆ. ಆ ಪ್ರಯುಕ್ತ ನಡೆದ ಸಭೆಯಲ್ಲಿ ಮದರ ಲಕ್ಕಮ್ಮ ಟ್ರಸ್ಟ್ ಹಾಗೂ ಜೀರ್ಣೋದ್ದಾರ ಸಮಿತಿಯ ಗೌರವ ಅಧ್ಯಕ್ಷರನ್ನಾಗಿ ದೇವಾಲಯದ ಭಕ್ತರು ಮತ್ತು ಆಡಳಿತ ಮಂಡಳಿಯ ಸದಸ್ಯರುಗಳು ಸರ್ವಾನುಮತದಿಂದ ಪರಮ ಪೂಜ್ಯ ಶ್ರೀ ಗುರೂಜಿರವರನ್ನು […]

ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಪಟಾಕಿ ನಿಷೇಧ; ಹಸಿರು ಪಟಾಕಿಗಳಿಗೆ ಮಾತ್ರ ಪರವಾನಗಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಮದುವೆ, ಗಣೇಶ ಉತ್ಸವ ಹಾಗೂ ರಾಜಕೀಯ ಸಂಬಂಧಿತ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅತ್ತಿಬೆಲೆ ಪಟಾಕಿ ಮಳಿಗೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸುಪ್ರೀಂಕೋರ್ಟ್ ಆದೇಶದ ಪ್ರಕಾರ, ಹಸಿರು ಪಟಾಕಿ ನಿಯಾಮವಳಿಗಳಿಗೆ ವಿರುದ್ಧವಾಗಿ ಅಂಗಡಿಗಳು ಇದ್ದರೆ ಕ್ರಮ ಕೈಗೊಳ್ಳಬೇಕು. ಅನಧಿಕೃತ ಮಳಿಗೆಗಳು ಕಂಡುಬಂದಲ್ಲಿ ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳಲು ಸೂಚಿಸಿದ್ದೇವೆ. ಸುಪ್ರೀಂಕೋರ್ಟ್ ಆದೇಶದ ಪ್ರಕಾರವೇ ಪಟಾಕಿ ಅಂಗಡಿಗಳಿಗೆ […]

ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಚಿತ್ರ ನಟಿ ಪ್ರೇಮಾ

ಉಡುಪಿ: ಶ್ರೀ ಕೃಷ್ಣಮಠಕ್ಕೆ ಇಂದು ಖ್ಯಾತ ಸಿನಿಮಾ ಕಲಾವಿದೆ ಪ್ರೇಮಾ ಆಗಮಿಸಿ ದೇವರ ದರ್ಶನ ಪಡೆದರು. ಈ ಸಂದರ್ಭ ಮಠದ ದಿವಾನ ವರದರಾಜ ಭಟ್ ಹಾಗೂ ಮಧೂರು ನಾರಾಯಣ ಶರಳಾಯ ಉಪಸ್ಥಿತರಿದ್ದರು. ಭಾರತ ಸರಕಾರದ ಫಾರ್ಮಸಿಕ್ಯೂಟಿಕಲ್ಸ್ ಎಕ್ಸ್ಪೋರ್ಟ್ ಪ್ರಮೋಷನ್ ಕೌನ್ಸಿಲ್ ಆಫ್ ಇಂಡಿಯಾದ ಅಧ್ಯಕ್ಷಡಾ.ಎಸ್.ವಿ.ವೀರಮಣಿ ಕುಟುಂಬ ಸಮೇತರಾಗಿ ಆಗಮಿಸಿ ದೇವರ ದರ್ಶನ ಪಡೆದುಕೊಂಡು ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಇವರಿಂದ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ,ಸ್ವಾಗತ ಸಮಿತಿ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್ ಮೊದಲಾದವರು ಉಪಸ್ಥಿತರಿದ್ದರು.

ಸ್ಯಾಂಟ್ನರ್​ : ಡೇನಿಯಲ್ ವೆಟ್ಟೋರಿ ಸರಿಗಟ್ಟಿದ ದಾಖಲೆ

ಹೈದರಾಬಾದ್​, ತೆಲಂಗಾಣ: ನ್ಯೂಜಿಲೆಂಡ್‌ನ ಆಲ್‌ರೌಂಡರ್ ಮಿಚೆಲ್ ಸ್ಯಾಂಟ್ನರ್ ವಿಶ್ವಕಪ್‌ನಲ್ಲಿ ನೆದರ್ಲೆಂಡ್ಸ್ ವಿರುದ್ಧ ಅದ್ಭುತ ಬೌಲಿಂಗ್ ಮಾಡಿದ್ದಾರೆ.59 ರನ್ ನೀಡಿ 5 ವಿಕೆಟ್ ಪಡೆದರು. ಸ್ಯಾಂಟ್ನರ್ 5 ವಿಕೆಟ್ ಪಡೆಯುವ ಮೂಲಕ ನ್ಯೂಜಿಲೆಂಡ್ ತಂಡದ ಮಾಜಿ ನಾಯಕ ಡೇನಿಯಲ್ ವೆಟ್ಟೋರಿ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಇದಲ್ಲದೆ, ಅವರು ಟೀಮ್ ಇಂಡಿಯಾದ ಮಾಜಿ ಆಲ್ ರೌಂಡರ್ ಯುವರಾಜ್ ಸಿಂಗ್ ಅವರ ಕ್ಲಬ್‌ಗೂ ಸೇರಿಕೊಂಡಿದ್ದಾರೆ. ಇದರೊಂದಿಗೆ ಸ್ಯಾಂಟ್ನರ್ ವಿಶ್ವಕಪ್‌ನಲ್ಲಿ ಇತಿಹಾಸ ನಿರ್ಮಿಸಿದ್ದಾರೆ.ನಿನ್ನೆ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ ಪರ ಅತ್ಯಂತ ಯಶಸ್ವಿ ಬೌಲರ್ […]

ಶಾಲೆಯಿಂದ ಹೊರಗುಳಿದ 19 ಮಿಲಿಯನ್ ಮಕ್ಕಳು : ಸುಡಾನ್ ಸಂಘರ್ಷಕ್ಕೆ 6 ತಿಂಗಳು

ವಿಶ್ವಸಂಸ್ಥೆ : ಸುಡಾನ್ ಸಶಸ್ತ್ರ ಪಡೆಗಳು (ಎಸ್‌ಎಎಫ್) ಮತ್ತು ಅರೆಸೈನಿಕ ಕ್ಷಿಪ್ರ ಬೆಂಬಲ ಪಡೆಗಳ (ಆರ್​ಎಸ್‌ಎಫ್) ನಡುವಿನ ಯುದ್ಧ ಆರಂಭಗೊಂಡು ಮುಂದಿನ ವಾರ ಆರು ತಿಂಗಳಿಗೆ ಸಮೀಸುತ್ತಿದೆ. ಈ ಸಶಸ್ತ್ರ ಆಂತರಿಕ ಹೋರಾಟದಿಂದ ಸುಡಾನ್ ದೇಶ ಜರ್ಜರಿತವಾಗಿದ್ದು, ಅಂದಾಜು 19 ಮಿಲಿಯನ್ ಮಕ್ಕಳು ವಿದ್ಯಾಭ್ಯಾಸದಿಂದ ಹೊರಗುಳಿದಿದ್ದಾರೆ ಎಂದು ಯುನಿಸೆಫ್ ಮತ್ತು ಸೇವ್ ದಿ ಚಿಲ್ಡ್ರನ್ ಜಂಟಿ ಹೇಳಿಕೆಯಲ್ಲಿ ತಿಳಿಸಿವೆ.ಸುಡಾನ್​ನಲ್ಲಿ ಮುಂದುವರಿದಿರುವ ಸಶಸ್ತ್ರ ಸಂಘರ್ಷದ ಕಾರಣದಿಂದ ಸುಮಾರು 19 ಮಿಲಿಯನ್ ಮಕ್ಕಳು ವಿದ್ಯಾಭ್ಯಾಸದಿಂದ ವಂಚಿತರಾಗಿದ್ದಾರೆ. ಏತನ್ಮಧ್ಯೆ, ಯುದ್ಧದ ಪರಿಣಾಮ […]