ರಿಷಬ್ ಶೆಟ್ಟಿ ಪ್ರೊಡಕ್ಷನ್ ನಂಬರ್ 9: ಆಸಕ್ತ ನಟ-ನಟಿಯರಿಗೆ ಕಾಸ್ಟಿಂಗ್ ಕಾಲ್

ರಿಷಬ್ ಶೆಟ್ಟಿ ಪ್ರೊಡಕ್ಷನ್ ನಂಬರ್ 9- ಆಡಿಷನ್ ಮತ್ತು ಕಾಸ್ಟಿಂಗ್ ಕಾಲ್. ಎಲ್ಲಾ ಆಸಕ್ತ ನಟ ನಟಿಯರಿಗೆ ಆಹ್ವಾನ. ನಟಿಯಾಗಲು ಬಯಸುವವರ ವಯಸ್ಸು 19 ರಿಂದ 25. ನಟರಿಗೆ- 18 ರಿಂದ 60. ಉತ್ತರ ಕರ್ನಾಟಕದ ಭಾಷಾ ಸೊಗಡು ತಿಳಿದಿರುವ ನಟ ನಟಿಯರಿಗೆ ಮೊದಲ ಆದ್ಯತೆ. ಆಸಕ್ತರು ತಮ್ಮ ಫೋಟೋ ಮತ್ತು ಪ್ರೊಫೈಲ್ ಅನ್ನು [email protected] ಅಥವಾ 9380748309 ಕಳುಹಿಸಬಹುದು.  

ಕುಂದಾಪುರ: ಬನ್ಸ್ ರಾಘು ಹತ್ಯೆ ಪ್ರಕರಣ; ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದ ನ್ಯಾಯಾಲಯ

ಕುಂದಾಪುರ: ಇಲ್ಲಿನ ಖಾರ್ವಿಕೇರಿ ನಿವಾಸಿ 42 ವರ್ಷದ ರಾಘವೇಂದ್ರ ಶೇರುಗಾರ್ (ಬನ್ಸ್ ರಾಘು) ಕೊಲೆ ಪ್ರರಕಣದ ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಶಿವಮೊಗ್ಗ ನಿವಾಸಿಗಳಾದ ಶಫಿವುಲ್ಲಾ ಅಲಿಯಾಸ್ ಆಟೋ ಶಫಿ (40), ಮಹಮ್ಮದ್ ಇಮ್ರಾನ್ (43) ಎಂಬ ಆರೋಪಿಗಳನ್ನು ಅಕ್ಟೋಬರ್ 5 ರಂದು ಕುಂದಾಪುರ ಪೊಲೀಸರು ಶಿವಮೊಗ್ಗ ರೈಲ್ವೇ ನಿಲ್ದಾಣದ ಬಳಿ ಬಂಧಿಸಿದ್ದು ಅಕ್ಟೋಬರ್ 6 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಹೆಚ್ಚಿನ ತನಿಖೆಗಾಗಿ ಮೂರು ದಿನಗಳ ಕಾಲ ಪೊಲೀಸ್‌ ಬಂಧನಕ್ಕೆ […]

ಯುವ ರೆಡ್‌ಕ್ರಾಸ್ ಘಟಕದ ವಿದ್ಯಾರ್ಥಿ ನಾಯಕರಿಗೆ ತರಬೇತಿ

ಉಡುಪಿ: ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕದ ಜಂಟಿ ಸಹಯೋಗದೊಂದಿಗೆ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿರುವ ಕಾಲೇಜುಗಳ ಯುವರೆಡ್‌ಕ್ರಾಸ್ ಘಟಕದ ವಿದ್ಯಾರ್ಥಿ ನಾಯಕರುಗಳಿಗೆ ಒಂದು ದಿನದ ತರಬೇತಿ ಕಾರ್ಯಕ್ರಮವು ರೆಡ್‌ಕ್ರಾಸ್ ಭವನದಲ್ಲಿ ಸೋಮವಾರ ನಡೆಯಿತು. ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ. ಎನ್.ಬಿ ವಿಜಯ ಬಲ್ಲಾಳ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯುವಜನರು ಉತ್ತಮ ಪ್ರಜೆಗಳಾಗಿ ಆರೋಗ್ಯಯುತ ಜೀವನ ನಡೆಸಬೇಕು. ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಯೂತ್ ರೆಡ್‌ಕ್ರಾಸ್ ಘಟಕಗಳ ಮೂಲಕ ನಡೆಸಲಾಗುವ […]

ಭಯೋತ್ಪಾದಕತೆಯ ವಿರುದ್ದ ಗುಡುಗಿದ ಬೆಂಜಮಿನ್ ನೆತನ್ಯಾಹು: ಇಸ್ರೇಲ್-ಹಮಾಸ್ ಯುದ್ದ ಉಲ್ಬಣ; 1600 ರ ಗಡಿ ದಾಟಿದ ಸಾವಿನ ಸಂಖ್ಯೆ

ಟೆಲ್ ಅವೀವ್: ಇಸ್ರೇಲ್ ಮತ್ತು ಹಮಾಸ್ ನಡುವೆ ನಡೆಯುತ್ತಿರುವ ಯುದ್ಧದ ಮಧ್ಯೆ, ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮಂಗಳವಾರ ತಮ್ಮ ದೇಶವು “ಯುದ್ಧವನ್ನು ಪ್ರಾರಂಭಿಸಲಿಲ್ಲ, ಆದರೆ ಅದನ್ನು ಮುಗಿಸುತ್ತದೆ” ಎಂದು ಹೇಳಿದ್ದಾರೆ. “ನಮಗೆ ಈ ಯುದ್ಧ ಬೇಕಾಗಿಲ್ಲ. ಇದು ಅತ್ಯಂತ ಕ್ರೂರ ಮತ್ತು ಅನಾಗರಿಕ ರೀತಿಯಲ್ಲಿ ನಮ್ಮ ಮೇಲೆ ಬಲವಂತವಾಗಿ ಹೇರಲಾಯಿತು. ಇಸ್ರೇಲ್ ಈ ಯುದ್ಧವನ್ನು ಪ್ರಾರಂಭಿಸದಿದ್ದರೂ, ಇಸ್ರೇಲ್ ಅದನ್ನು ಮುಗಿಸುತ್ತದೆ ”ಎಂದು ಪ್ರಧಾನಿ ಹೇಳಿದ್ದಾರೆ. ಶನಿವಾರ ಪ್ರಾರಂಭವಾದ ಇಸ್ರೇಲ್-ಹಮಾಸ್ ಯುದ್ಧವು ಮಂಗಳವಾರವೂ ಮುಂದುವರೆದಿದ್ದು ಸಾವಿನ ಸಂಖ್ಯೆ […]

ಜಮ್ಮು-ಕಾಶ್ಮೀರದಲ್ಲಿ ಎನ್ ಕೌಂಟರ್: 2 ಎಲ್ಇಟಿ ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಎನ್‌ಕೌಂಟರ್ ನಡೆದಿದೆ ಎಂದು ಪಿಟಿಐ ವರದಿ ಮಾಡಿದೆ. ಶೋಪಿಯಾನ್‌ನ ಅಲ್ಶಿಪೋರಾ ಪ್ರದೇಶದಲ್ಲಿ ಎನ್‌ಕೌಂಟರ್ ಪ್ರಾರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆಯಲ್ಲಿದ್ದು ಉಗ್ರರನ್ನು ಮಟ್ಟಹಾಕುತ್ತಿವೆ. ಕಾರ್ಯಾಚರಣೆಯಲ್ಲಿ 2 ಉಗ್ರರು ಹತರಾಗಿದ್ದಾರೆ. ಹತರಾದ ಭಯೋತ್ಪಾದಕರನ್ನು ಎಲ್ಇಟಿಯ ಮೋರಿಫತ್ ಮಕ್ಬೂಲ್ ಮತ್ತು ಜಾಜಿಮ್ ಫಾರೂಕ್ ಅಬ್ರಾರ್ ಎಂದು ಗುರುತಿಸಲಾಗಿದೆ. ಕಾಶ್ಮೀರಿ ಪಂಡಿತ್ ದಿವಂಗತ ಸಂಜಯ್ ಶರ್ಮಾ ಹತ್ಯೆಯಲ್ಲಿ ಭಯೋತ್ಪಾದಕ ಅಬ್ರಾರ್ ಭಾಗಿಯಾಗಿದ್ದಾನೆ ಎಂದು ಕಾಶ್ಮೀರ ಎಡಿಜಿಪಿ […]