ಇಲ್ಲಿಯವರೆಗಿನ ಹಲವು ದಾಖಲೆಗಳು ಧೂಳಿಪಟ : ಕ್ರಿಕೆಟ್ ವಿಶ್ವಕಪ್ 2023
ಹೈದರಾಬಾದ್: ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಪಂದ್ಯ ಹಲವು ದಾಖಲೆಗಳು ಸಾಕ್ಷಿಯಾಯಿತು.ವಿಶ್ವಕಪ್ ಕ್ರಿಕೆಟ್‌ನಲ್ಲಿ ಹಲವು ದಾಖಲೆಗಳು ಸೃಷ್ಟಿಯಾಗಿವೆ. ಕೆಲ ಪಂದ್ಯಗಳು ಪ್ರೇಕ್ಷಕರನ್ನು ತುದಿಗಾಲ ಮೇಲೆ ನಿಲ್ಲುವಂತೆ ಮಾಡಿವೆ. ಯಾವೆಲ್ಲ ದಾಖಲೆಗಳು ನಿರ್ಮಾಣ ಆಗಿವೆ ಎಂಬುದನ್ನು ನೋಡುವುದಾದರೆ, ಅಕ್ಟೋಬರ್ 5 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆರಂಭವಾದ ವಿಶ್ವಕಪ್ ಕ್ರಿಕೆಟ್‌ನಲ್ಲಿ ಇದುವರೆಗೆ ಎಂಟು ಪಂದ್ಯಗಳು ನಡೆದಿವೆ. ಈ ಬಾರಿಯ ವಿಶ್ವಕಪ್ನಲ್ಲಿ ಕೆಲವು ಬ್ಯಾಟಿಂಗ್ ದಾಖಲೆಗಳು ಈಗಾಗಲೇ ಪುಡಿಪುಡಿಯಾಗಿವೆ. ಪ್ರಮುಖ ಏಳು ದಾಖಲೆಗಳನ್ನು ನೋಡುವುದಾದರೆ, ನವದೆಹಲಿಯ ಅರುಣ್ […]
ತೀವ್ರ ಶೋಧ: ಮಹಾರಾಷ್ಟ್ರ, ತಮಿಳುನಾಡು ಸೇರಿ ಆರು ರಾಜ್ಯಗಳಲ್ಲಿ ಎನ್ಐಎ ಕಾರ್ಯಾಚರಣೆ
ಚೆನೈ/ ಮುಂಬೈ : ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿದ್ದಾರೆ. ದೇಶದ ಆರು ರಾಜ್ಯಗಳಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದಾರೆ.ಮಹಾರಾಷ್ಟ್ರ, ಉತ್ತರಪ್ರದೇಶ, ರಾಜಸ್ಥಾನ , ದೆಹಲಿ, ತಮಿಳುನಾಡು ಮತ್ತು ಮಧ್ಯಪ್ರದೇಶದಲ್ಲಿ ಎನ್ಐಎ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದು, ಮಾಹಿತಿ ಕಲೆ ಹಾಕುತ್ತಿದ್ದಾರೆ. ಎನ್ಐಎ ಅಧಿಕಾರಿಗಳು ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಮುಖಂಡರ ಮನೆ ಮೇಲೆ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ. ವರ್ಷ ಪ್ರಧಾನಿ ನರೇಂದ್ರ […]
ತಮಿಳುನಾಡಿನ 8 ಜಿಲ್ಲೆಗಳಲ್ಲಿ ಬಂದ್ಗೆ ಕರೆ : ಕಾವೇರಿ ನೀರು ಹಂಚಿಕೆ ವಿವಾದ
ನಾಗಪಟ್ಟಣಂ (ತಮಿಳುನಾಡು) : ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನದಿ ನೀರು ಹಂಚಿಕೆ ಸಮಸ್ಯೆ ಬಗೆಹರಿಯುವಂತೆ ಕಾಣುತ್ತಿಲ್ಲ. ಇಂದು ತಮಿಳುನಾಡಿನ 8 ಜಿಲ್ಲೆಗಳಲ್ಲಿ ಬಂದ್ಗೆ ಕರೆ ನೀಡಲಾಗಿದೆ. ನಾಗಪಟ್ಟಣಂ ಜಿಲ್ಲೆಯಲ್ಲಿ ಸುಮಾರು 12,000 ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳನ್ನು ಬಂದ್ ಮಾಡಿರುವ ವ್ಯಾಪಾರಿಗಳು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡು ಸರ್ಕಾರಗಳು ಸುದೀರ್ಘ ಹಗ್ಗಜಗ್ಗಾಟ ನಡೆಸುತ್ತಿವೆ. ಈ ಬೆನ್ನಲ್ಲೇ ಇಂದು ತಮಿಳುನಾಡಿನ 8 ಜಿಲ್ಲೆಗಳಲ್ಲಿ ಬಂದ್ಗೆ […]
ಸೆನ್ಸೆಕ್ಸ್, ನಿಫ್ಟಿ ಏರಿಕೆಯೊಂದಿಗೆ ಆರಂಭ : ಮಧ್ಯಪ್ರಾಚ್ಯ ಬಿಕ್ಕಟ್ಟಿನ ಆತಂಕ ಮಾಯ
ಮುಂಬೈ: ಜಾಗತಿಕ ಮಾರುಕಟ್ಟೆಯಲ್ಲಿನ ಉತ್ತೇಜನಕಾರಿ ಪ್ರವೃತ್ತಿಗಳು ಹೂಡಿಕೆದಾರರಲ್ಲಿ ಭರವಸೆ ಮೂಡಿಸಿದ್ದರಿಂದ ಭಾರತದ ಸೆನ್ಸೆಕ್ಸ್ ಮತ್ತು ನಿಫ್ಟಿ ಬುಧವಾರದ ಆರಂಭಿಕ ವಹಿವಾಟಿನಲ್ಲಿ ಏರಿಕೆ ಕಂಡವು.30 ಷೇರುಗಳ ಸೆನ್ಸೆಕ್ಸ್ 416.22 ಪಾಯಿಂಟ್ ಅಥವಾ ಶೇಕಡಾ 0.63 ರಷ್ಟು ಏರಿಕೆ ಕಂಡು 66,495.58 ಪಾಯಿಂಟ್ಗಳಿಗೆ ತಲುಪಿದ್ದರೆ, ವಿಶಾಲ ನಿಫ್ಟಿ 120 ಪಾಯಿಂಟ್ಸ್ ಅಥವಾ ಶೇಕಡಾ 0.61 ರಷ್ಟು ಏರಿಕೆ ಕಂಡು 19,809.85 ಪಾಯಿಂಟ್ಗಳಿಗೆ ತಲುಪಿದೆ. ಬುಧವಾರದ ಆರಂಭಿಕ ವಹಿವಾಟಿನಲ್ಲಿ ಭಾರತದ ಷೇರು ಮಾರುಕಟ್ಟೆಗಳು ಏರಿಕೆ ಕಂಡಿವೆ. ಇಂದಿನ ಷೇರು ಮಾರುಕಟ್ಟೆಗಳ ಪ್ರವೃತ್ತಿಯ […]
ರಿಷಬ್ ಶೆಟ್ಟಿ ನಿರ್ಮಾಣದ ‘ಶಿವಮ್ಮ’ ಸಿನಿಮಾ: ಟೀಸರ್ ರಿಲೀಸ್
ಕನ್ನಡ ಚಿತ್ರಗಳು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗಮನ ಸೆಳೆಯುತ್ತಿವೆ. ಬಿಗ್ ಬಜೆಟ್ ಸಿನಿಮಾಗಳ ಅಬ್ಬರದ ನಡುವೆ ಕನ್ನಡದ ಕೆಲವು ಸಣ್ಣ ಸಿನಿಮಾಗಳು ಭಾರತದ ಗಡಿಯಾಚೆಗೆ ಸಂಚರಿಸಿ ಅಲ್ಲಿನ ಚಿತ್ರೋತ್ಸವಗಳಲ್ಲಿ ಮನ್ನಣೆ ಗಳಿಸಿವೆ. ಜೈಶಂಕರ್ ಆರ್ಯರ್ ನಿರ್ದೇಶನದ ಚೊಚ್ಚಲ ಚಿತ್ರ ಶಿವಮ್ಮ. ಕೊಪ್ಪಳ ಜಿಲ್ಲೆಯ ಯಾರೇಹಂಚಿನಾಳ ಗ್ರಾಮದಿಂದ ಶುರುವಾದ ಪ್ರಯಾಣ ಹತ್ತಾರು ದೇಶಗಳಲ್ಲಿ ಹಲವಾರು ಪ್ರಶಸ್ತಿ, ಪ್ರಶಂಸೆಗಳನ್ನು ಗಳಿಸಿದ್ದಲ್ಲದೇ ವಿದೇಶಿಗರ ಪ್ರೀತಿಗೂ ಪಾತ್ರವಾಗಿದೆ. ಈ ಸಾಲಿನಲ್ಲಿ ರಿಷಬ್ ಶೆಟ್ಟಿ ಸಂಸ್ಥೆಯ ಶಿವಮ್ಮ ಚಿತ್ರ ಪ್ರಪಂಚಾದ್ಯಂತ ಸಂಚರಿಸಿ ಹಲವು ಪ್ರಶಸ್ತಿಗಳನ್ನು […]