ದಸರಾ ಹಬ್ಬದ ಪ್ರಯುಕ್ತ ಬಸ್ರೂರು ಮಹಾಲಸಾ ನಾರಾಯಣೀ ದೇವಾಲಯದಲ್ಲಿ ನವರಾತ್ರಿ ಮಹೋತ್ಸವ

ಬಸ್ರೂರು : ಇತಿಹಾಸ ಪ್ರಸಿದ್ಧ ಬಸ್ರೂರಿನ ಶ್ರೀ ಮಹಾಲಸಾ ನಾರಾಯಣಿ ದೇವಾಲಯದಲ್ಲಿ ಇದೇ ತಿಂಗಳ 15 ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ಇದೇ ತಿಂಗಳು ದಿ. 15.10.2023 ರಿಂದ ದಿ. 24.10.2023 ಮಂಗಳವಾರದವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳಿಂದ ವಿಜೃಂಭಣೆಯಿಂದ ನಡೆಯಲಿವೆ. ನವರಾತ್ರಿ ಕಾರ್ಯಕ್ರಮದ ಅಂಗವಾಗಿ ತಾ.22.10 2023 ರವಿವಾರ ಸಂಜೆ ದುರ್ಗಾಷ್ಟಮಿ ಪ್ರಯುಕ್ತ ದುರ್ಗಾನಮಸ್ಕಾರ ಸೇವೆ, 23ರಂದು ಮಹಾನವಮಿ, 24ರಂದು ವಿಜಯದಶಮಿ ಪ್ರಯುಕ್ತ ಸಂಜೆ ರಜತ ಪಲ್ಲಕ್ಕಿ ಉತ್ಸವ ಇರುವುದು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ […]

ಆರೋಪಿ ಪರಮಶಿವಯ್ಯಗೆ ಹೈಕೋರ್ಟ್ ಜಾಮೀನು : ಮುರುಘಾ ಶರಣರ ವಿರುದ್ಧದ ಫೋಕ್ಸೋ ಪ್ರಕರಣ

ಬೆಂಗಳೂರು: ಪರಮಶಿವಯ್ಯ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣವರ್ ಅವರ ನೇತೃತ್ವದ ಏಕಸದಸ್ಯ ಅರ್ಜಿಯನ್ನು ಪುರಸ್ಕರಿಸಿದ್ದು, ಜಾಮೀನು ನೀಡಿದೆ.ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ದಾಖಲಾಗಿದ್ದ ಮೊದಲನೇ ಪೋಕ್ಸೋ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಮಠದ ವಿದ್ಯಾಪೀಠಗಳ ಕಾರ್ಯದರ್ಶಿ ಪರಮಶಿವಯ್ಯ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಮುರುಘಾ ಶರಣರ ವಿರುದ್ಧದ ಫೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಪರಮಶಿವಯ್ಯಗೆ ಹೈಕೋರ್ಟ್ ಜಾಮೀನು ನೀಡಿದೆ. ವಿಸ್ತೃತ ಆದೇಶ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಅಲ್ಲದೇ, ಅರ್ಜಿದಾರರು […]

ಕೃಷ್ಣ ಮಠಕ್ಕೆ ಬರುವ ಪ್ರವಾಸಿಗರು ತ್ಯಾಜ್ಯ ವಸ್ತುಗಳನ್ನು ಕಸದ ಡಬ್ಬಿಗೆ ಹಾಕಲು ಸಲಹೆ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶ್ರೀಕೃಷ್ಣಮಠದ ರಾಜಾಂಗಣದ ಪಾರ್ಕಿಂಗ್ ಪ್ರದೇಶದ ಬಳಿ ಇರುವ ಬ್ಲಾಕ್ ಸ್ಪಾಟ್ ಅನ್ನು ತೆರವುಗೊಳಿಸಲಾಗಿದ್ದು, ಶ್ರೀಕೃಷ್ಣಮಠಕ್ಕೆ ಬರುವ ಪ್ರವಾಸಿಗರು ಮತ್ತು ಭಕ್ತಾದಿಗಳು ಘನತ್ಯಾಜ್ಯ ವಸ್ತುಗಳನ್ನು ಮತ್ತು ಅಡಿಗೆ ಮಾಡಿದ ವಸ್ತುಗಳನ್ನು ಅಲ್ಲಲ್ಲಿ ಎಸೆದು ಹೋಗುತ್ತಿರುವುದರಿಂದ ಸದರಿ ಕಸವನ್ನು ಅಲ್ಲೇ ಇರುವಂತಹ ಕಂಪೌಂಡಿನ ಬಳಿಯಲ್ಲಿ ಕಸವನ್ನು ಮಿಶ್ರಣ ಮಾಡಿ ಸಂಗ್ರಹಿಸಲಾಗುತ್ತಿದೆ. ಈ ಪ್ರದೇಶದಲ್ಲಿ ಕಸ ಸಂಗ್ರಹವಾಗುತ್ತಿದ್ದು, ವಾರಕೊಮ್ಮೆ ಅಥವಾ ವಾರಕ್ಕೆ 2 ಬಾರಿ ಸ್ವಚ್ಛತೆ ಮಾಡಲಾಗುತ್ತಿದೆ. ಪ್ರವಾಸಿಗರು ಬರುವಂತಹ ಉಡುಪಿ ನಗರ ಸ್ವಚ್ಛವಾಗಿ ಕಾಣಬೇಕೆಂಬ […]

ಕ್ಯಾನ್ಸರ್ ನಿಂದ ಬಳಲುತ್ತಿದ್ದ ಚೋರಿ ಚೋರಿ ಚುಪ್ಕೆ ಚುಪ್ಕೆ ನಟಿ ವಿಧಿವಶ!

ಅನುಭವಿ ನಟಿ ಭೈರವಿ ವೈದ್ಯ ಅವರು ಇಂದು ನಿಧನರಾಗಿದ್ದಾರೆ. ನಟಿಗೆ 67 ವರ್ಷ ವಯಸ್ಸಾಗಿತ್ತು. ಕಳೆದ ಆರು ತಿಂಗಳಿನಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದರು. ಹಿರಿಯ ನಟಿ 45 ವರ್ಷಗಳಿಗೂ ಹೆಚ್ಚು ಕಾಲದಿಂದ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದು, ಹಲವು ಸಿನಿಮಾ ಮತ್ತು ಕಿರುತೆರೆ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದಾರೆಮಲಯಾಳಂನ ಖ್ಯಾತ ನಿರ್ಮಾಪಕ, ಎಐಸಿಸಿ ಸದಸ್ಯ ಮತ್ತು ಉದ್ಯಮಿ ಪಿ.ವಿ ಗಂಗಾಧರನ್ ನಿಧನದ ಬೆನ್ನಲ್ಲೇ ಚಿತ್ರರಂಗದಿಂದ ಮತ್ತೊಂದು ಆಘಾತದ ಸುದ್ದಿ ಬಂದಿದೆ.ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದ ನಟಿ ಭೈರವಿ ವೈದ್ಯ ಇಂದು ಕೊನೆಯುಸಿರೆಳೆದಿದ್ದಾರೆ. ನಟಿ ಭೈರವಿ […]

ಟಾಸ್​ ಗೆದ್ದು ಕ್ಷೇತ್ರರಕ್ಷಣೆ ಆಯ್ಕೆ ಮಾಡಿಕೊಂಡ ನ್ಯೂಜಿಲೆಂಡ್ : ಐಸಿಸಿ ಏಕದಿನ ವಿಶ್ವಕಪ್

ಚೆನ್ನೈ(ತಮಿಳುನಾಡು): ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಇಂದು ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ ತಂಡಗಳು ಮುಖಾಮುಖಿಗಿವೆ. ​​ಟಾಸ್​ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಮೊದಲು ಬೌಲಿಂಗ್​​ ಆಯ್ಕೆ ಮಾಡಿಕೊಂಡರು. ಎದುರಾಳಿ ನಾಯಕ ಶಾಕಿಬ್ ಅಲ್ ಹಸನ್ ಮುಂದಾಳತ್ವದ ಬಾಂಗ್ಲಾ ತಂಡ ಬ್ಯಾಟಿಂಗ್​ಗೆ ಮುಂದಾಗಿದೆಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಭಾಗವಾಗಿ ಇಂದು ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಿವೆ. ಚೆನ್ನೈನ ಚಿದಂಬರಂ ಮೈದಾನ ಆತಿಥ್ಯ ವಹಿಸಿಕೊಂಡಿದೆ. ಅಫ್ಘಾನಿಸ್ತಾನ ವಿರುದ್ಧ ಮೊದಲ ನಿರಾಯಾಸ ಗೆಲುವು ಕಂಡ ಬಾಂಗ್ಲಾ, ತನ್ನ ಎರಡನೇ […]