16 ನೌಕರರನ್ನು ವಜಾಗೊಳಿಸಿದ ಟಿಸಿಎಸ್ : ಉದ್ಯೋಗಕ್ಕಾಗಿ ಲಂಚ

ಬೆಂಗಳೂರು : ಕೆಲಸಕ್ಕಾಗಿ ಲಂಚ ಪಡೆದ ಆರೋಪಗಳ ಬಗ್ಗೆ ತನಿಖೆ ನಡೆಸಿದ ನಂತರ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) 16 ಉದ್ಯೋಗಿಗಳನ್ನು ವಜಾಗೊಳಿಸಿದೆ ಮತ್ತು ಆರು ಸಿಬ್ಬಂದಿ ನೇಮಕಾತಿ ಸಂಸ್ಥೆಗಳನ್ನು ಕಪ್ಪುಪಟ್ಟಿಗೆ ಸೇರಿಸಿದೆ.ಈ ಬಗ್ಗೆ ಎಕ್ಸ್​ಚೇಂಜ್ ಫೈಲಿಂಗ್​ನಲ್ಲಿ ಮಾಹಿತಿ ನೀಡಿರುವ ಕಂಪನಿ, “ತನಿಖೆಯಲ್ಲಿ 19 ಉದ್ಯೋಗಿಗಳು ಲಂಚ ಪ್ರಕರಣದಲ್ಲಿ ಭಾಗಿಯಾಗಿರುವುದು ಕಂಡು ಬಂದಿದೆ ಮತ್ತು ಇಲ್ಲಿ ವಿವರಿಸಿದಂತೆ ಎಲ್ಲರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ. ಕಂಪನಿಯ ನಿಯಮಾವಳಿಗಳ ಉಲ್ಲಂಘನೆಗಾಗಿ 16 ಉದ್ಯೋಗಿಗಳನ್ನು ಕೆಲಸದಿಂದ ವಜಾ ಮಾಡಲಾಗಿದೆ ಮತ್ತು ಮೂವರು […]

ಪ್ರಜ್ವಲ್ ದೇವರಾಜ್ 40ನೇ ಸಿನಿಮಾಗ ಆಯಕ್ಷನ್ ಕಟ್ಹೇಳಲಿರುವ ಗುರುದತ್ ಗಾಣಿಗ

ಲವರ್ ಬಾಯ್ ಹಾಗೂ ತನ್ನದೇ ಅಭಿನಯದ ಮೂಲಕ ಕನ್ನಡಿಗರ ಹೃದಯ ಗೆದ್ದಿರುವ ನಟ ಪ್ರಜ್ವಲ್ ದೇವರಾಜ್. ನಟ ಪ್ರಜ್ವಲ್ ದೇವರಾಜ್ ಅವರ 40ನೇ ಸಿನಿಮಾಗೆ ‘ಅಂಬಿ ನಿಂಗೆ ವಯಸಾಯ್ತೋ’ ಖ್ಯಾತಿಯ ನಿರ್ದೇಶಕ ಗುರುದತ್ ಗಾಣಿಗ ಆಯಕ್ಷನ್ ಕಟ್ ಹೇಳುತ್ತಿದ್ದಾರೆ.ಪೋಸ್ಟರ್ ಮೂಲಕ ಅಭಿಮಾನಿಗಳ ಮುಂದೆ ಬಂದಿರುವ ಪ್ರಜ್ವಲ್ ಹೊಸ ಸಿನಿಮಾಗೆ ಇನ್ನೂ ಟೈಟಲ್ ಫೈನಲ್ ಆಗಿಲ್ಲ. ಸದ್ಯ ರಿಲೀಸ್ ಆಗಿರುವ ಪೋಸ್ಟರ್ ಭರ್ಜರಿಯಾಗಿ ಮೂಡಿ ಬಂದಿದ್ದು, ಭಾರಿ ಕುತೂಹಲ ಹೆಚ್ಚಿಸಿದೆ. ಪ್ರಜ್ವಲ್ ಸಿನಿ ಜೀವನದಲ್ಲೇ ಇದೊಂದು ವಿಭಿನ್ನವಾದ ಸಿನಿಮಾ […]

ಕೇಂದ್ರ ಸಶಸ್ತ್ರ ಪಡೆಗಳ 11 ಸಾವಿರ ಹಳೆಯ ವಾಹನ ಗುಜರಿಗೆ : ಹೊಸ ಅಟೊಮೊಬೈಲ್ ನೀತಿ

ನವದೆಹಲಿ: ಭಾರತ ಸರ್ಕಾರದ ‘ವೆಹಿಕಲ್ ಸ್ಕ್ರ್ಯಾಪಿಂಗ್ ಪಾಲಿಸಿ’ ಪ್ರಕಾರ 15 ವರ್ಷಕ್ಕಿಂತ ಹಳೆಯದಾದ ವಾಹನಗಳನ್ನು ಗುಜರಿಗೆ ಹಾಕುವುದನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಗೃಹ ಸಚಿವಾಲಯ ಕ್ರಮಗಳನ್ನು ಕೈಗೊಂಡಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. 15 ವರ್ಷಕ್ಕಿಂತ ಹಳೆಯದಾದ ಎಲ್ಲ ವಾಹನಗಳನ್ನು ವಿಲೇವಾರಿ ಮಾಡುವ ಕೇಂದ್ರ ಸರ್ಕಾರದ ನೀತಿಯ ಭಾಗವಾಗಿ ಬಿಎಸ್‌ಎಫ್, ಸಿಆರ್​ಪಿಎಫ್ ಮತ್ತು ಸಿಐಎಸ್‌ಎಫ್​ನಂಥ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಿಗೆ (ಸಿಎಪಿಎಫ್) ಸೇರಿದ 11,000 ವಾಹನಗಳನ್ನು ಗುಜರಿಗೆ ಹಾಕಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಕೇಂದ್ರ ಸಶಸ್ತ್ರ ಪಡೆಗಳಿಗೆ ಸೇರಿದ 11 […]

ಮಾಜಿ ವಿಶ್ವಸುಂದರಿ ಸ್ಪರ್ಧಿ ಶೆರಿಕಾ ಡಿ ಅರ್ಮಾಸ್​ ಕ್ಯಾನ್ಸರ್​ ಜೊತೆ ಹೋರಾಡಿ 26ನೇ ವಯಸ್ಸಿಗೆ ನಿಧನ

ಕ್ಯಾನ್ಸರ್​ನಿಂದ ಬಳಲುತ್ತಿದ್ದ ಶೆರಿಕಾ ಡಿ ಅರ್ಮಾಸ್​ ಕಿಮೋಥೆರಪಿ ಹಾಗೂ ರೇಡಿಯೋಥೆರಪಿ ಚಿಕಿತ್ಸೆಗಳಿಗೆ ಒಳಗಾಗಿದ್ದರು. ಶೆರಿಕಾ ಡಿ ಅರ್ಮಾಸ್​ ಅವರ ನಿಧನ ಉರುಗ್ವೆ ಮಾತ್ರವಲ್ಲದೆ ಪ್ರಪಂಚದಾದ್ಯಂತ ಅನೇಕರನ್ನು ದುಃಖಕ್ಕೀಡು ಮಾಡಿದೆ.ಶೆರಿಕ್​ ಅವರು ಎರಡು ವರ್ಷಗಳ ಕಾಲ ಗರ್ಭಕಂಠದ ಕ್ಯಾನ್ಸರ್​ ಜೊತೆ ಹೋರಾಡಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಶೆರಿಕಾ ಡಿ ಅರ್ಮಾಸ್​ ನಿಧನಕ್ಕೆ ಅನೇಕ ವಿಶ್ವಸುಂದರಿ ವಿಜೇತರು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸಿದ್ದಾರೆ.2015ರ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಉರುಗ್ವೆಯನ್ನು ಪ್ರತಿನಿಧಿಸಿದ್ದ ಮಾಜಿ ವಿಶ್ವ ಸುಂದರಿ ಸ್ಪರ್ಧಿ ಶೆರಿಕಾ ಡಿ ಅರ್ಮಾಸ್​ […]

ಯು.ಟಿ.ಖಾದರ್​, ಬಸವರಾಜ ಹೊರಟ್ಟಿ ಲಂಡನ್​ನಲ್ಲಿ ಬಸವೇಶ್ವರ ಪ್ರತಿಮೆಗೆ ನಮನ

ಲಂಡನ್​: ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಮತ್ತು ವಿಧಾನ ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ ಅವರು ಲಂಡನ್​ಗೆ ಭೇಟಿ ನೀಡಿದ್ದು, ಭಾನುವಾರ ಲ್ಯಾಂಬೆತ್ ನಗರದ ಥೇಮ್ಸ್ ನದಿ ದಂಡೆ ಮೇಲಿರುವ ಜಗಜ್ಯೋತಿ ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಮತ್ತು ವಿಧಾನ ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ ಲ್ಯಾಂಬೆತ್​ ನಗರದಲ್ಲಿನ ಜಗಜ್ಯೋತಿ ಬಸವೇಶ್ವರರ ಪುತ್ಥಳಿಗೆ ಗೌರವ ಸಲ್ಲಿಸಿದರು. ಲ್ಯಾಂಬೆತ್‌ನ ಮಾಜಿ ಮೇಯರ್ ಡಾ.ನೀರಜ್ ಪಾಟೀಲ್ ಅವರು ಖಾದರ್ ಹಾಗೂ ಹೊರಟ್ಟಿ ಅವರನ್ನು […]