ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ದೇವತಾರಾಧನೆ-ಕಲರಾಧನೆಗೆ ಚಾಲನೆ

ದೊಡ್ಡಣ್ಣ ಗುಡ್ಡೆ: ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ನಿರಂತರ ಹತ್ತು ದಿನಗಳ ಕಾಲ ಸಂಪನ್ನಗೊಳ್ಳಲಿರುವ ನವರಾತ್ರಿ ಮಹೋತ್ಸವದ ದೇವತಾರಾಧನೆಯಾಗಿ ದಿನಂಪ್ರತಿ ಜೋಡಿ ಚಂಡಿಕಾಯಾಗ ದುರ್ಗಾ ನಮಸ್ಕಾರ ಪೂಜೆ, ಕಲ್ಪೋಕ್ತ ಪೂಜೆ ಸಹಿತ ರಂಗ ಪೂಜೆ ನೆರವೇರಿತು. ಕ್ಷೇತ್ರದ ನವಶಕ್ತಿ ವೇದಿಕೆ ಹಾಗೂ ದುರ್ಗಾ ಆದಿಶಕ್ತಿ ದೇವಿಗೆ ಅಭಿಮುಖವಾಗಿ ಕ್ಷೇತ್ರದ ನಾಟ್ಯ ರಾಣಿ ಗಂಧರ್ವ ಕನ್ಯೆಯ ಪ್ರೀತ್ಯರ್ಥವಾಗಿ ದುರ್ಗಾ ಆದಿಶಕ್ತಿ ದೇವಿಯ ಅನುಗ್ರಹಕ್ಕಾಗಿ ಹಲವಾರು ನೃತ್ಯ ತಂಡದ ನೃತ್ಯಾರ್ಥಿಗಳು ಕಲಿಕಾ ಸಾಧನೆಗಾಗಿ ಶ್ರದ್ದಾಪೂರ್ವಕವಾಗಿ […]

ಅಖಿಲ ಭಾರತ ರಜತ ಕೊಂಕಣಿ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಗೆ ‘ವಿಶನ್ ಕೊಂಕಣಿ’ ನೇತಾರ ಮೈಕಲ್ ಡಿ’ಸೊಜಾ ಸಾರಥ್ಯ

ಮಂಗಳೂರು: ಕೊಂಕಣಿ ಭಾಷೆ, ಸಾಹಿತ್ಯ, ಸಂಗೀತ ಮತ್ತು ಕಲೆಯ ಶ್ರೇಯೋಭಿವೃದ್ದಿಗಾಗಿ ’ವಿಶನ್ ಕೊಂಕಣಿ’ ಕಾರ್ಯಕ್ರಮದ ಮೂಲಕ ಅವಿರತ ಶ್ರಮಿಸುತ್ತಿರುವ ಅನಿವಾಸಿ ಉದ್ಯಮಿ ಮತ್ತು ಸಮಾಜ ಕಲ್ಯಾಣ ಕಾರ್ಯಕರ್ತ ಮೈಕಲ್ ಡಿಸೊಜಾ ಅವರು ನವೆಂಬರ್ 4 ಮತ್ತು 5 ರಂದು ಮಂಗಳೂರಿನ ವಿಶ್ವ ಕೊಂಕಣಿ ಕೇಂದ್ರದ ಆವರಣದಲ್ಲಿ ಬಸ್ತಿ ವಾಮನ ಶೆಣೈ ವೇದಿಕೆಯಲ್ಲಿ ನಡೆಯುವ 25 ನೇ ಅಖಿಲ ಭಾರತೀಯ ಕೊಂಕಣಿ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ನೇತೃತ್ವ ವಹಿಸಲಿದ್ದಾರೆ. ಪ್ರಸ್ತುತ ಅಬುದಾಬಿಯಲ್ಲಿ ನೆಲೆಸಿರುವ ಮೈಕಲ್ ಡಿಸೊಜಾ, […]

ಮಂಗಳೂರು ವಿ.ಕೆ.ಫರ್ನಿಚರ್ ಮತ್ತು ಇಲೆಕ್ಟ್ರಾನಿಕ್ಸ್ ನಲ್ಲಿ ವಿಕೆ ಉತ್ಸವ್ 2023 ಅದ್ದೂರಿ ಚಾಲನೆ: 50% ವರೆಗೆ ದರಕಡಿತ

ಮಂಗಳೂರು: ವಿ.ಕೆ.ಫರ್ನಿಚರ್ ಮತ್ತು ಇಲೆಕ್ಟ್ರಾನಿಕ್ಸ್- ಯೆಯ್ಯಾಡಿ, ಕಲ್ಲಾಪು ತೊಕ್ಕೊಟ್ಟು, ವಾಮಂಜೂರು, ಮತ್ತು ವಿ.ಕೆ.ಲಿವಿಂಗ್ ಕಾನ್ಸೆಪ್ಟ್- ಲೇಡಿಹಿಲ್‌ನಲ್ಲಿ ದಸರಾ ಮತ್ತು ದೀಪಾವಳಿ ಪ್ರಯುಕ್ತ ವಿಕೆ ಉತ್ಸವ್ 2023 ನ್ನು ಹಮ್ಮಿಕೊಳ್ಳಲಾಗಿದ್ದು, ಮಾರುತಿ ಸುಜುಕಿ ಫ್ರಾಂಕ್ಸ್ ಕಾರ್, ಸುಜುಕಿ ಆಕ್ಸೆಸ್ 125 cc ಸ್ಕೂಟರ್, ಜೊತೆಗೆ, ಇನ್ನೂ 7 ಅತ್ಯಾಕರ್ಷಕ ಬಹುಮಾನಗಳಾದ, ಬೆಡ್‌ರೂಂ ಸೆಟ್, ಸೋಫಾ ಸೆಟ್, ಡೈನಿಂಗ್ ಟೇಬಲ್, ಚಿನ್ನ, ಟಿವಿ, ರೆಫ್ರಿಜರೇಟರ್, ವಾಶಿಂಗ್‌ಮೆಶಿನ್, ಗೆಲ್ಲುವ ಅಪೂರ್ವ ಅವಕಾಶವಿದ್ದು ವಿಕೆ ಉತ್ಸವ-2023 ಅನ್ನು ಸಂಸ್ಥೆಯ ಆಡಳಿತ ನಿರ್ದೇಶಕರಾದ ವಿಠ್ಠಲ್ […]

ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ನೀಡುವಂತಿಲ್ಲ: ಕೇಂದ್ರದ ಪ್ರಸ್ತಾವಿತ ಉನ್ನತ ಅಧಿಕಾರ ಸಮಿತಿಗೆ ಜವಾಬ್ದಾರಿ ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ನೀಡುವಂತಿಲ್ಲ ಎಂದು 3-2 ಬಹುಮತದಿಂದ ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಪು ನೀಡಿದೆ. ಸರ್ವೋಚ್ಚ ನ್ಯಾಯಾಲಯವು ನಾಲ್ಕು ತೀರ್ಪುಗಳನ್ನು ನೀಡಿತು ಮತ್ತು ಹಲವಾರು ಅವಲೋಕನಗಳನ್ನು ಮಾಡಿತು. ಮೇ 11 ರಂದು, ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಐದು ನ್ಯಾಯಾಧೀಶರ ಸಂವಿಧಾನ ಪೀಠ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಎಸ್ ರವೀಂದ್ರ ಭಟ್, ಹಿಮಾ ಕೊಹ್ಲಿ ಮತ್ತು ಪಿ ಎಸ್ ನರಸಿಂಹ ಅವರು 10 ದಿನಗಳ ಮ್ಯಾರಥಾನ್ ವಿಚಾರಣೆಯ […]

ಕರ್ನಾಟಕ ನೈರುತ್ಯ ಪದವೀಧರರ, ಶಿಕ್ಷಕರ ಕ್ಷೇತ್ರದ ಮತಾದರರ ನೋಂದಣಿ ನಿಯಮಗಳು

ಉಡುಪಿ: ಕರ್ನಾಟಕ ನೈರುತ್ಯ ಪದವೀಧರರ/ ಶಿಕ್ಷಕರ ಮತ್ತು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಸಂಬಂಧಿಸಿದಂತೆ ಮತದಾರರ ನೋಂದಣಿ ನಿಯಮಗಳು ಈ ಕೆಳಗಿನಂತಿವೆ. ಕರ್ನಾಟಕ ನೈರುತ್ಯ ಶಿಕ್ಷಕರ ಮತ್ತು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತಕ್ಷೇತ್ರಗಳ ಮತದಾರರ ಪಟ್ಟಿ ತಯಾರಿಕೆಗೆ ಮತದಾರರ ನೋಂದಣಿ ನಿಯಮಗಳು 1960 ರ 31(4) ನೇ ನಿಯಮದ ಅನುಸಾರ ಕರ್ನಾಟಕ ನೈರುತ್ಯ ಶಿಕ್ಷಕರ ಮತ್ತು ಕರ್ನಾಟಕ ದಕ್ಷಿಣ ಶಿಕ್ಷಕರ ಮತ ಕ್ಷೇತ್ರಗಳ ಮತದಾರರ ನೋಂದಣಾಧಿಕಾರಿಗಳು ಸಂಬಂಧಿಸಿದ ಶಿಕ್ಷಕರ ಮತ […]