ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂದಿಸುವುದು ಜನತಾ ದರ್ಶನದ ಉದ್ದೇಶ: ಡಾ. ಕೆ ವಿದ್ಯಾಕುಮಾರಿ

ಉಡುಪಿ: ಸಾರ್ವಜನಿಕರು ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಹವಾಲುಗಳನ್ನು ಸಲ್ಲಿಸಿ, ತಮ್ಮ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಕಂಡುಕೊಳ್ಳಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಸೋಮವಾರ ಕಾಪು ಆಡಳಿತ ಸೌಧದಲ್ಲಿ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಉಡುಪಿ, ತಾಲೂಕು ಆಡಳಿತ ತಾಲೂಕು ಪಂಚಾಯತ್ ಹಾಗೂ ಕಾಪು ಪುರಸಭೆ ಇವರ ಸಹಯೋಗದೊಂದಿಗೆ ನಡೆದ ಜನತಾ ದರ್ಶನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನತಾ ದರ್ಶನ ಕಾರ್ಯಕ್ರಮವು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶದಿಂದ ಮಾಡಲಾಗುತ್ತಿದೆ. ಜನರು ಸಲ್ಲಿಸಿದ ಅಹವಾಲುಗಳನ್ನು […]

ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಸಮಸ್ಯೆಗೆ ಪರಿಹಾರ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಸಾರ್ವಜನಿಕರು ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಹವಾಲುಗಳನ್ನು ಸಲ್ಲಿಸಿ, ತಮ್ಮ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಕಂಡುಕೊಳ್ಳಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ಕಾಪು ಆಡಳಿತ ಸೌಧದಲ್ಲಿ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಉಡುಪಿ, ತಾಲೂಕು ಆಡಳಿತ ತಾಲೂಕು ಪಂಚಾಯತ್ ಹಾಗೂ ಕಾಪು ಪುರಸಭೆ ಇವರ ಸಹಯೋಗದೊಂದಿಗೆ ನಡೆದ ಜನತಾ ದರ್ಶನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನತಾ ದರ್ಶನ ಕಾರ್ಯಕ್ರಮವು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶದಿಂದ ಮಾಡಲಾಗುತ್ತಿದೆ. ಜನರು ಸಲ್ಲಿಸಿದ […]

ನವರಾತ್ರಿಯ ಪ್ರಯುಕ್ತ ಶ್ರೀಕೃಷ್ಣನಿಗೆ ರುಕ್ಮಿಣಿ ಅಲಂಕಾರ

ಉಡುಪಿ: ನವರಾತ್ರಿಯ ಪ್ರಯುಕ್ತ ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಸ್ವಾಮೀಜಿಯವರು ಶ್ರೀಕೃಷ್ಣನಿಗೆ ‘ಉಯ್ಯಾಲೆಯಲ್ಲಿ ರುಗ್ಮಿಣೀ’ ವಿಶೇಷ ಅಲಂಕಾರ ಮಾಡಿದರು. ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಸ್ವಾಮೀಜಿ ಮಹಾಪೂಜೆ ನೆರವೇರಿಸಿದರು.

ಕಾರ್ಕಳ: ಐಟಿ ಉದ್ಯೋಗಿ ನೇಣಿಗೆ ಶರಣು

ಕಾರ್ಕಳ: ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಸಾಫ್ಟ್‌ವೇರ್ ಉದ್ಯೋಗಿಯಾಗಿದ್ದ ಯುವತಿಯೋರ್ವಳು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿರುವ ತಾಲೂಕಿನ ಕಲ್ಲೊಟ್ಟೆಯಲ್ಲಿ ನಡೆದಿದೆ. ಕಾರ್ಕಳ ತಾಲೂಕಿನ ಕಲ್ಲೊಟ್ಟೆಯ ಸಂಪತ್ ಕುಮಾರ್ ಎಂಬವರ ಪುತ್ರಿ ಚಾರ್ವಿ (23) ಆತ್ಮಹತ್ಯೆಗೆ ಶರಣಾದ ಯುವತಿ. ಇಂಜಿನಿಯರಿಂಗ್ ಮುಗಿಸಿ ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಚಾರ್ವಿ ಮನೆಯಿಂದಲೇ ಕೆಲಸ ನಿರ್ವಹಣೆ ಮಾಡುತ್ತಿದ್ದು, ಸೋಮವಾರ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ ಎಂದು ವರದಿಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲವಾಗಿದ್ದು, ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ […]

ಮಂಗಳೂರು: ಭಾರೀ ಸಿಡಿಲು ಮಳೆಗೆ ಹಲವೆಡೆ ಹಾನಿ

ಮಂಗಳೂರು: ದ.ಕ ಪರಿಸರದಲ್ಲಿ ಸೋಮವಾರ ಸಂಜೆ ಹೊತ್ತಿಗೆ ಗುಡುಗು-ಸಿಡಿಲು ಸಹಿತ ಧಾರಾಕಾರ ಮಳೆಯಾಗಿದ್ದು ಹಲವೆಡೆ ಹಾನಿಯಾಗಿರುವ ವರದಿಯಾಗಿದೆ. ವಾಮಂಜೂರಿನ ಅಮೃತ ನಗರದಲ್ಲಿ ಸಿಡಿಲಾಘಾತಕ್ಕೆ ಸ್ವಿಚ್ ಬೋರ್ಡ್ ಹಾಗೂ ಮೀಟರ್ ಬಾಕ್ಸ್ ಸ್ಪೋಟಗೊಂಡಿವೆ. ಈ ಸಂದರ್ಭ ಮನೆಯಲ್ಲಿದ್ದ ಮಹಿಳೆ ಹಾಗೂ 5 ವರ್ಷದ ಮಗುವಿನ ಕಿವಿಗೆ ಹಾನಿಯಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಡಬಿದ್ರಿ ಹಾಗೂ ಕಿನ್ನಿಗೋಳಿ ಪರಿಸರದಲ್ಲಿ ಹಲವಾರು ಮನೆಗೆ ಸಿಡಿಲು ಬಡಿದಿದ್ದು ಬಹುತೇಕ ವಿದ್ಯುತ್ ಉಪಕರಣಗಳು ಹಾನಿಗೀಡಾಗಿವೆ. ಘಟನೆಯಿಂದ ಜನರಿಗೆ ಹಾನಿಯಾಗಿರುವ ವರದಿಯಾಗಿಲ್ಲ.