ಬಂಟ್ವಾಳ: ಚಲನಚಿತ್ರ ನಟಿ ರಾಧಿಕಾ ಮನೆ ಕೆಲಸದಾಕೆ ನಾಪತ್ತೆ

ಬಂಟ್ವಾಳ: ಚಲನಚಿತ್ರ ನಟಿ ರಾಧಿಕಾ ಅವರ ಮನೆಯಲ್ಲಿ ಕೂಲಿ ಕೆಲಸದ ಮಹಿಳೆಯೋರ್ವಳು ಕಾಣೆಯಾಗಿದ್ದಾರೆ. ಮೂಲತಃ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮಾದನಗಿರಿ ನಿವಾಸಿ ಮಹಾದೇವ ಮಾರಿಪಟಗಾರ್ ಅವರ ಪತ್ನಿ ನಾಗರತ್ನ (33) ಕಾಣೆಯಾಗಿರುವ ಮಹಿಳೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು‌ ದಾಖಲಾಗಿದೆ. ತಾಲೂಕಿನ‌ ಅಮ್ಟೂರು ಗ್ರಾಮದ ರಾಯಪ್ಪನಕೋಡಿ ಎಂಬಲ್ಲಿ ಚಲನಚಿತ್ರ ನಟಿ ರಾಧಿಕಾ ಅವರ ಎಸ್ಟೇಟ್‌ ನಲ್ಲಿ ಕಳೆದ ಆರು ತಿಂಗಳ ಹಿಂದೆ ನಾಗರತ್ನ ಕೆಲಸಕ್ಕೆ ಸೇರಿದ್ದರು. ನಾಗರತ್ನ ಅವರ […]

ವಿಶ್ವ ಆಹಾರ ದಿನದ ಅಂಗವಾಗಿ ಎಕ್ಸ್‌ ಪರ್ಟ್ ಕಾಲೇಜಿನಲ್ಲಿ ಮಾಸ್ಟರ್‌ ಶೆಫ್ಸ್‌ ಸ್ಪರ್ಧೆ

ಮಂಗಳೂರು: ಜೀವನದಲ್ಲಿ ಸಾಧನೆಯ ಸಾಧ್ಯತೆಗೆ ಅಡುಗೆ ಕೌಶಲವೂ ಪ್ರೇರಣಾದಾಯಕವಾಗಿದೆ. ಸಾಹಿತ್ಯ, ಸಂಗೀತ ಮೊದಲಾದ ಕಲೆಗಳು ಕೆಲವರನ್ನು ಮಾತ್ರ ಸೆಳೆಯಬಹುದು. ಆದರೆ ಉತ್ತಮ ಆಹಾರವನ್ನು ಎಲ್ಲರೂ ಮೆಚ್ಚುತ್ತಾರೆ ಎಂದು ಎಕ್ಸ್‌ಪರ್ಟ್‌ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊ.ನರೇಂದ್ರ ಎಲ್.ನಾಯಕ್‌ ಅವರು ಅಭಿಪ್ರಾಯಪಟ್ಟರು. ಎಕ್ಸ್‌ಪರ್ಟ್‌ ಪದವಿಪೂರ್ವ ಕಾಲೇಜು ಮತ್ತು ಸ್ಪೈಸಸ್‌ ಎನ್ ಶೆಫ್ಸ್‌ ಇದರ ಜಂಟಿ ಸಹಯೋಗದಲ್ಲಿ ವಿಶ್ವ ಆಹಾರ ದಿನದ ಅಂಗವಾಗಿ ಆಯೋಜಿಸಿದ ಎಕ್ಸ್‌ಪರ್ಟ್‌ ಮಾಸ್ಟರ್‌ ಶೆಫ್ಸ್‌ ಸ್ಪರ್ಧೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳ ಸರ್ವಾಂಗೀಣ ಹಿತದೃಷ್ಟಿಯಿಂದ […]

ಇಂದಿನಿಂದ ಮಲ್ಪೆ ಸೈಂಟ್ ಮೆರೀಸ್ ದ್ವೀಪ ಪ್ರವಾಸಿಗರಿಗೆ ಮುಕ್ತ

ಮಲ್ಪೆ: ಮಳೆಗಾಲದ ಹಿನ್ನೆಲೆಯಲ್ಲಿ ನಿಷೇಧ ಹೇರಲಾಗಿದ್ದ ಇಲ್ಲಿನ ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸಿ ಬೋಟ್ ಗಳ ಸಂಚಾರವನ್ನು ಇಂದಿನಿಂದ(ಅ.19) ಪ್ರಾರಂಭಿಸಲಾಗಿದೆ. ಇಲ್ಲಿನ ಸೀ-ವಾಕ್ ಪ್ರದೇಶದ ಬಳಿ 4 ದೋಣಿಗಳು ಎಲ್ಲ ರೀತಿಯ ಸುರಕ್ಷಾ ಸಲಕರಣೆಗಳೊಂದಿಗೆ ಸಜ್ಜಾಗಿ ಪ್ರವಾಸಿಗರ ಸೇವೆಗೆ ಲಭ್ಯವಿದೆ ಎಂದು ಬೋಟ್ ಗಳ ಮುಖ್ಯಸ್ಥ ಗಣೇಶ್ ಮಲ್ಪೆ ತಿಳಿಸಿದ್ದಾರೆ.

ಕುಂದಾಪುರ: ಅರಣ್ಯಕೆ ಇಲಾಖೆ ವಾಹನ ಚಾಲಕನ ಮೇಲೆ ಹಲ್ಲೆ; ಜೀವ ಬೆದರಿಕೆ

ಕುಂದಾಪುರ: ಕುಂದಾಪುರ ಅರಣ್ಯ ಇಲಾಖೆಯ ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಚಾಲಕರೊಬ್ಬರ ಮೇಲೆ ನಾಲ್ವರು ಹಲ್ಲೆ ನಡೆಸಿದ ಘಟನೆ ಬುಧವಾರ ಸಂಜೆ ನಡೆದಿದೆ. ಕುಂದಾಪುರದ ವಲಯ ಅರಣ್ಯಾಧಿಕಾರಿಗಳ ಕಚೇರಿ ಆವರಣದಲ್ಲಿ ಈ ಘಟನೆ ನಡೆದಿದ್ದು ಹಲ್ಲೆಗೊಳಗಾದ ಚಾಲಕ ಕುಂದಾಪುರದ ಕುಂದೇಶ್ವರದ ನಿವಾಸಿ ಅಶೋಕ್ (38) ಆಸ್ಪತ್ರೆಗೆ ದಾಖಲಾಗಿದ್ದಾರೆ. ಬುಧವಾರ ಸಂಜೆ ವೇಳೆಗೆ ವಲಯ ಅರಣ್ಯಾಧಿಕಾರಿಗಳ ಕಚೇರಿ ಆವರಣದೊಳಕ್ಕೆ ನುಗ್ಗಿದ ಆರೋಪಿಗಳಾದ ಇಮ್ತಿಯಾಝ್, ವಿನೋದ್ ಹಾಗೂ ಮತ್ತಿಬ್ಬರು ಅಶೋಕ್ ಅವರ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ […]

ಮಂಗಳೂರು: ಹಿಟ್ ಎಂಡ್ ರನ್ ಪ್ರಕರಣಕ್ಕೆ ಯುವತಿ ಬಲಿ; ನಾಲ್ವರಿಗೆ ಗಾಯ

ಮಂಗಳೂರು: ಮಂಗಳೂರು ನಗರದಲ್ಲಿ ಬುಧವಾರ ಸಂಜೆ ನಡೆದ ಕಾರಿನ ಭೀಕರ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಯುವತಿಯೋರ್ವಳು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದರೆ ಉಳಿದ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ನಗರದ ಲೇಡಿ ಹಿಲ್-ಮಣ್ಣಗುಡ್ಡ ಮುಖ್ಯ ರಸ್ತೆಯ ಈಜುಕೊಳ ಮುಂಭಾಗದಲ್ಲಿ ಈ ದುರ್ಘಟನೆ ಸಂಭವಿಸಿದ್ದು ಮೃತ ಯುವತಿಯನ್ನು ಸುರತ್ಕಲ್ ಬಾಳದ ರೂಪಶ್ರೀ (23) ಎಂದು ಗುರುತ್ತಿಸಲಾಗಿದೆ. ಸ್ವಾತಿ(26) ಹಿತಾನ್ವಿ(16), ಕೃತಿಕಾ(16), ಯತಿಕಾ(12) ಗಂಭೀರ ಗಾಯಗೊಂಡ ಇತರ ನಾಲ್ವರು ಯುವತಿಯರಾಗಿದ್ದು ಇವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬುಧವಾರ ಅಪರಾಹ್ನ […]