125 ಡಿ.ಬಿಗಿಂತ ಅಧಿಕ ಶಬ್ದವನ್ನುಂಟುಮಾಡುವ ಸುಡುಮದ್ದುಗಳ ಬಳಕೆ ನಿಷೇಧ

ಉಡುಪಿ: ಕೇಂದ್ರ ಸರ್ಕಾರವು ಜೋಡಿಸಲಾದ ಸುಡುಮದ್ದುಗಳನ್ನೊಳಗೊಂಡ (ಗಾರ್ಲ್ಯಾಂಡ್) 125 ಡಿ.ಬಿ (ಎ1) ಗಿಂತ ಹೆಚ್ಚು ಮಟ್ಟದಲ್ಲಿ ಶಬ್ದವನ್ನು ಉಂಟು ಮಾಡುವ ಸುಡುಮದ್ದುಗಳ ಉತ್ಪಾದನೆ, ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಿದ್ದು, ಇಂತಹ ಸುಡುಮದ್ದುಗಳ ಉತ್ಪಾದನೆ, ಮಾರಾಟ ಹಾಗೂ ಬಳಕೆಯು ಕಾನೂನು ಬಾಹಿರವಾಗಿರುತ್ತದೆ. ಇದನ್ನು ಉಲ್ಲಂಘಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ದೀಪಾವಳಿ ಹಬ್ಬದ ಆಚರಣೆ ಸಮಯದಲ್ಲಿ ಪ್ರತಿಯೊಬ್ಬರೂ ಸುರಕ್ಷತೆಗಾಗಿ ಈ ಕೆಳಗಿನಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಸುಡುಮದ್ದನ್ನು ಲೈಸೆನ್ಸ್ ಹೊಂದಿರುವ ವಿಶ್ವಾಸಾರ್ಹ ಮರಾಟಗಾರರಿಂದ ಖರೀದಿಸಬೇಕು, ಸುಡುಮದ್ದುಗಳ ಬಳಕೆಯನ್ನು […]