15 ದಿನದಲ್ಲಿ ಶರಣಾಗಲು ಆದೇಶ : ಜಯಪ್ರದಾಗೆ 6 ತಿಂಗಳ ಜೈಲು ಶಿಕ್ಷೆ ಖಚಿತಪಡಿಸಿದ ಮದ್ರಾಸ್ ಹೈಕೋರ್ಟ್
ಚೆನ್ನೈ (ತಮಿಳುನಾಡು): ಕನ್ನಡ, ತೆಲುಗು ಹಾಗೂ ತಮಿಳು ಸೇರಿದಂತೆ ವಿವಿಧ ಭಾಷೆಗಳ ಸಿನಿಮಾಗಳಲ್ಲಿ ಅಭಿನಯಿಸಿರುವ ಜಯಪ್ರದಾ, ಸಂಸತ್ ಸದಸ್ಯರಾಗಿದ್ದರು. ಚೆನ್ನೈನಲ್ಲಿ ರಾಮಕುಮಾರ್, ರಾಜ್ಬಾಬು ಎಂಬವರೊಂದಿಗೆ ಸೇರಿ ಚಿತ್ರಮಂದಿರವನ್ನು ನಡೆಸುತ್ತಿರುವ ಇವರು, ಕಾರ್ಮಿಕರಿಂದ ಸಂಗ್ರಹಿಸಿದ ಇಎಸ್ಐ ಹಣವನ್ನು ರಾಜ್ಯ ವಿಮಾ ನಿಗಮಕ್ಕೆ ಪಾವತಿಸದ ಆರೋಪ ಎದುರಿಸುತ್ತಿದ್ದಾರೆ.ಖ್ಯಾತ ನಟಿ ಜಯಪ್ರದಾ ಅವರಿಗೆ ಕೆಳ ಹಂತದ ನ್ಯಾಯಾಲಯ ವಿಧಿಸಿದ್ದ 6 ತಿಂಗಳ ಜೈಲು ಶಿಕ್ಷೆಯನ್ನು ಮದ್ರಾಸ್ ಹೈಕೋರ್ಟ್ ಇಂದು (ಶುಕ್ರವಾರ) ಖಚಿತಪಡಿಸಿತು.15 ದಿನದಲ್ಲಿ ಎಗ್ಮೋರ್ ಕೋರ್ಟ್‌ಗೆ ಶರಣಾಗುವಂತೆ ಹಾಗೂ 20 ಲಕ್ಷ […]
ದೊಡ್ಡಣ್ಣಗುಡ್ಡೆ: ಶ್ರೀಚಕ್ರ ಪೀಠ ಸುರಪೂಜಿತೆ ಸನ್ನಿಧಾನದಲ್ಲಿ ಜೋಡಿ ಲಲಿತ ಸಹಸ್ರ ಕದಳಿಯಾಗ ಸಂಪನ್ನ
ದೊಡ್ಡಣ್ಣಗುಡ್ಡೆ : ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಲಲಿತಾ ಪಂಚಮಿಯ ಪರ್ವಕಾಲದಲ್ಲಿ ಜೋಡಿ ಲಲಿತಾ ಸಹಸ್ರ ಕದಳಿ ಯಾಗ ಕ್ಷೇತ್ರದ ಧರ್ಮದರ್ಶಿ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ವೇದಮೂರ್ತಿ ಕೃಷ್ಣಮೂರ್ತಿ ತಂತ್ರಿಗಳ ನೇತೃತ್ವದಲ್ಲಿ ಋತ್ವಿಜರ ಸಹಕಾರದೊಂದಿಗೆ ಸೇವಾರ್ಥಿಗಳ ಸಮಕ್ಷಮದಲ್ಲಿ ಸಂಪನ್ನಗೊಂಡಿತು. ದಕ್ಷಿಣ ಭಾರತದಲ್ಲಿಯೇ ಅತಿ ಎತ್ತರವಾದ ಮೇರು ಶ್ರೀ ಚಕ್ರವನ್ನು ಹೊಂದಿರುವ ಕ್ಷೇತ್ರದಲ್ಲಿ ಸಂಪನ್ನಗೊಂಡ ಈ ಮಹಾನಯಾಗವು ಬಹು ಫಲಪ್ರದವಾದದು. ಸಹಸ್ರ ಸಹಸ್ರ ಸಂಖ್ಯೆಯ ಕದಳಿ ಹಣ್ಣನ್ನು ತ್ರಿಮದುರಯುಕ್ತವಾಗಿ ಹೋಮಿಸಿ ಲಲಿತಾ […]
ಮಲ್ಪೆ: ಆಕಾಶ್ ಬೈಜೂಸ್ ನಿಂದ ‘ಜಂಕ್ ದಿ ಪ್ಲಾಸ್ಟಿಕ್’ ಬೀಚ್ ಸ್ವಚ್ಛತಾ ಅಭಿಯಾನ
ಮಲ್ಪೆ: ಸಮಾಜಕ್ಕೆ ಮರಳಿ ನೀಡುವ ತನ್ನ ನಿರಂತರ ಪ್ರಯತ್ನದ ಭಾಗವಾಗಿ ಪರೀಕ್ಷಾ ಪೂರ್ವಸಿದ್ಧತಾ ತರಬೇತಿಯಲ್ಲಿ ಅಗ್ರಾಣಿಯಾಗಿರುವ ಆಕಾಶ್ ಬೈಜೂಸ್(Akash Byjus) ಇಂದು ಉಡುಪಿಯ ಮಲ್ಪೆ ಬೀಚ್‌ನಲ್ಲಿ ಅನಗತ್ಯ ಪ್ಲಾಸ್ಟಿಕ್ ತ್ಯಾಜ್ಯವನ್ನು ತೆಗೆದುಹಾಕುವ ಮೂಲಕ ತನ್ನ “ಜಂಕ್ ದಿ ಪ್ಲಾಸ್ಟಿಕ್” ಅಭಿಯಾನವನ್ನು ಪ್ರಾರಂಭಿಸಿತು. ಜಿಲ್ಲೆಯ ಪ್ರಸಿದ್ಧ ಬೀಚ್ ಇದಾಗಿದ್ದು, ಪ್ಲಾಸ್ಟಿಕ್ ತ್ಯಾಜ್ಯವು ಇಂದು ಪ್ರಮುಖ ಪರಿಸರ ಅಪಾಯವಾಗಿದೆ. ಹೆಚ್ಚಾಗಿ ಮಲ್ಪೆಯಂತಹ ಸ್ಥಳಕ್ಕೆ ಪ್ರತಿದಿನ ನೂರಾರು ಪ್ರವಾಸಿಗರು ಆಗಮಿಸುತ್ತಾರೆ. ಈ ಅಭಿಯಾನವು ಪರಿಸರದ ಮೇಲೆ ಪ್ಲಾಸ್ಟಿಕ್ ಬಳಕೆಯಿಂದ ಉಂಟಾಗುವ ಪರಿಣಾಮಗಳ […]
ಕೃಷ್ಣಮಠದಲ್ಲಿ ನೆಲಭೋಜನ ಹರಕೆ ತೀರಿಸಿದ ಹರಿಪ್ರಿಯಾ ವಸಿಷ್ಠ ಸಿಂಹ ದಂಪತಿಗಳು
ಉಡುಪಿ: ಮುಖ್ಯಪ್ರಾಣದೇವರ ಸನ್ನಿಧಿಯಲ್ಲಿ ನಡೆಯುವ ನೆಲಭೋಜನ ಹರಕೆಯ ಸೇವೆಯನ್ನು ತೀರಿಸಲು ಗುರುವಾರ ಉಡುಪಿಗೆ ಆಗಮಿಸಿದ ಖ್ಯಾತ ನಟರಾದ ವಸಿಷ್ಠ ಸಿಂಹ, ಹರಿಪ್ರಿಯಾ ದಂಪತಿಗಳು ಕೃಷ್ಣದರ್ಶನ ಮಾಡಿದರು. ಈ ಸಂದರ್ಭದಲ್ಲಿ ಮಧೂರು ನಾರಾಯಣ ಶರಳಾಯ ಉಪಸ್ಥಿತರಿದ್ದರು.
ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯಡಿ ಗರ್ಭಿಣಿ ಹಾಗೂ ಬಾಣಂತಿ ಮಹಿಳೆಯರ ನೋಂದಣಿ ಪ್ರಾರಂಭ
ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಜಾರಿಗೊಳಿಸಲಾದ ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯ ಸೌಲಭ್ಯ ಪಡೆಯಲು ಅರ್ಹ ಗರ್ಭಿಣಿ ಹಾಗೂ ಬಾಣಂತಿ ಮಹಿಳೆಯರು ನೋಂದಾಯಿಸಿಕೊಳ್ಳಬಹುದಾಗಿದೆ. ಈ ಯೋಜನೆಯಡಿ ಮೊದಲ ಪ್ರಸವದ ಗರ್ಭಿಣಿ ಹಾಗೂ ಬಾಣಂತಿ ಮಹಿಳೆಯರಿಗೆ 5,000 ರೂ.ಗಳ ಪ್ರೋತ್ಸಾಹಧನ ನೀಡಲಾಗುವುದು. ಎರಡನೇ ಪ್ರಸವದಲ್ಲಿ ಜನಿಸುವ ಹೆಣ್ಣು ಮಗುವಿಗೆ 6,000 ರೂ. ಗಳ ಪ್ರೋತ್ಸಾಹಧನ ನೀಡಲಾಗುವುದು. ಈ ಪ್ರೋತ್ಸಾಹಧನವು ಗರ್ಭಿಣಿ / ಬಾಣಂತಿ ಮಹಿಳೆಯರು ಪೂರಕ ಆಹಾರ ಪಡೆಯಲು ಹಾಗೂ ಆರೋಗ್ಯವಂತ ಮಗುವಿನ ಜನನಕ್ಕೆ […]