ಪ್ರಧಾನಿ ಮೋದಿ ಮಧ್ಯಪ್ರವೇಶಿಸಿ ಎರಡು ರಾಜ್ಯಗಳ ಜತೆ ಮಾತುಕತೆ ನಡೆಸಲಿ ಎಂದು ಕಾವೇರಿ ವಿವಾದದ ಕುರಿತು ಹೇಳಿದ ನಟ ಶಿವರಾಜ್ ಕುಮಾರ್
ಮಂಡ್ಯ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸಂಕಷ್ಟ ಸನ್ನಿವೇಶ ಎದುರಾಗಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶಿಸಿ ಎರಡು ರಾಜ್ಯಗಳ ನಡುವೆ ಮಾತುಕತೆ ನಡೆಸಬೇಕು ಎಂದು ನಟ ಡಾ.ಶಿವರಾಜ್ ಕುಮಾರ್ ತಿಳಿಸಿದ್ದಾರೆ. ಮಂಡ್ಯದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಿದರೆ ಮಾತ್ರ ಸಮಸ್ಯೆಗೆ ಪರಿಹಾರ ಸಿಗಲಿದೆ. ಕಷ್ಟಕಾಲದ ಪರಿಸ್ಥಿತಿಯಲ್ಲಿ ಕರ್ನಾಟಕ ಮತ್ತು ತಮಿಳುನಾಡು ಸರ್ಕಾರಗಳ ನಡುವೆ ಮಾತುಕತೆಗೆ ಮುಂದಾಗಬೇಕು. ಎರಡೂ ಸರ್ಕಾರಗಳ ಜತೆ ಮಾತನಾಡಿದರೆ ಸಂಕಷ್ಟ ಬಗೆಹರಿಯಲಿದೆ ಎಂದರು.ಕಾವೇರಿ ವಿವಾದದಲ್ಲಿ […]
ಜೆಲ್ ಆವಿಷ್ಕಾರ : ಮಧುಮೇಹಿಗಳ ಗಾಯ 3 ಪಟ್ಟು ಬೇಗ ಗುಣಪಡಿಸುವ ಚಿಕಿತ್ಸೆ
ನವದೆಹಲಿ: ಮಧುಮೇಹಿಗಳ ಗಾಯವನ್ನು ಬೇಗನೆ ಗುಣಪಡಿಸುವ ಜೆಲ್ ಒಂದನ್ನು ಸಂಶೋಧಕರು ಅಭಿವೃದ್ಧಿಪಡಿಸಿದ್ದಾರೆ. ಈ ಮೂಲಕ ಅಂಗಛೇದನಗಳ ಪ್ರಮಾಣವನ್ನು ಈ ಜೆಲ್ ಕಡಿಮೆಗೊಳಿಸುವ ಭರವಸೆ ವ್ಯಕ್ತಪಡಿಸಲಾಗಿದೆ.ಈ ಜೆಲ್ ಗಾಯವನ್ನು ಬೇಗನೆ ಗುಣಪಡಿಸುವುದು ಮಾತ್ರವಲ್ಲದೆ ಗಾಯ ಮತ್ತೆ ಮರುಕಳಿಸುವ ಸಾಧ್ಯತೆಯನ್ನು ಕಡಿಮೆಗೊಳಿಸುತ್ತದೆ.ಮಧುಮೇಹಿಗಳ ಗಾಯವನ್ನು ಬೇಗನೆ ಗುಣಪಡಿಸುವ ಚಿಕಿತ್ಸಾ ವಿಧಾನವನ್ನು ವಿಜ್ಞಾನಿಗಳು ಆವಿಷ್ಕರಿಸಿದ್ದಾರೆ. ವೈಜ್ಞಾನಿಕ ಜರ್ನಲ್ ಅಡ್ವಾನ್ಸಡ್ ಮೆಟೀರಿಯಲ್ಸ್ನಲ್ಲಿ ಪ್ರಕಟವಾದ ಸಂಶೋಧನೆಯ ಪ್ರಕಾರ, ಮ್ಯಾಗ್ನೆಟಿಕ್ ಪ್ರಚೋದನೆಯೊಂದಿಗೆ ಸಂಯೋಜಿಸಲಾದ ಚಿಕಿತ್ಸೆಯು ಪ್ರಸ್ತುತ ಸಾಂಪ್ರದಾಯಿಕ ವಿಧಾನಗಳಿಗಿಂತ ಮೂರು ಪಟ್ಟು ವೇಗವಾಗಿ ಮಧುಮೇಹ ಗಾಯಗಳನ್ನು ಗುಣಪಡಿಸುತ್ತದೆ […]
ಉಪೇಂದ್ರ ಪೈ ಮೆಮೋರಿಯಲ್ ಕಾಲೇಜು ವಿದ್ಯಾರ್ಥಿಗಳಿಂದ ಕವಿಗೋಷ್ಠಿ
ಕುಂಜಿಬೆಟ್ಟು: ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಅಕ್ಟೋಬರ್ 21 ರಂದು ಕನ್ನಡ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಉಡುಪಿ ತಾಲೂಕು ಘಟಕದ ಸಹಭಾಗಿತ್ವದಲ್ಲಿ ಕಾಲೇಜು ವಿದ್ಯಾರ್ಥಿಗಳ ಕವಿಗೋಷ್ಠಿಯು ಉದ್ಘಾಟನೆಗೊಂಡು, ಕವಿಗೋಷ್ಠಿಯೊಂದಿಗೆ ಸಂಪನ್ನಗೊಂಡಿತು. ಕಾಲೇಜಿನ ಪ್ರಾಚಾರ್ಯೆ ಆಶಾಕುಮಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಕಲೆ, ಸಾಹಿತ್ಯ, ಸಂಗೀತ, ಕಾವ್ಯ, ನಾಟಕ ಇವುಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳುವುದರಿಂದ ಓದಿನಲ್ಲಿ ಏಕಾಗ್ರತೆ ಮತ್ತು ಶ್ರದ್ಧೆ ಮೂಡುತ್ತದೆ ಎಂದರು. ಕ.ಸಾ.ಪ ಉಡುಪಿ ಜಿಲ್ಲೆಯ ಕೋಶಾಧ್ಯಕ್ಷ ಮನೋಹರ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಭಾಧ್ಯಕ್ಷತೆ ವಹಿಸಿದ್ದ ಉಡುಪಿ ತಾಲ್ಲೂಕಿನ […]
ಅ. 23 ರಂದು ಕೋಟ ಸಹಕಾರಿ ವ್ಯವಸಾಯಕ ಸಂಘ (ನಿ.) ಇದರ ನೂತನ ಶಾಖಾ ಕಟ್ಟಡ, ಗೋದಾಮು ವಸತಿ ಸಂಕೀರ್ಣದ ಉದ್ಘಾಟನಾ ಸಮಾರಂಭ
ಬ್ರಹ್ಮಾವರ: ಕೋಟ ಸಹಕಾರಿ ವ್ಯವಸಾಯಕ ಸಂಘ (ನಿ.) ಇದರ ನೂತನ ಶಾಖಾ ಕಟ್ಟಡ, ಗೋದಾಮು ವಸತಿ ಸಂಕೀರ್ಣದ ಉದ್ಘಾಟನಾ ಸಮಾರಂಭವು ಅಕ್ಟೋಬರ್ 23 ರಂದು ಗಿಳಿಯಾರು ಶಾಖಾ ವಠಾರದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವುದು. ಕಾರ್ಯಕ್ರಮ ಕಟ್ಟಡ ಉದ್ಘಾಟನೆ ಡಾ|ಎಮ್.ಎನ್. ರಾಜೇಂದ್ರ ಕುಮಾರ್ ಅಧ್ಯಕ್ಷರು ಕ.ರಾ.ಸ.ಮಾ.ಮ. ಬೆಂಗಳೂರು ದ.ಕ.ಜಿ.ಕೇ.ಸ. ಬ್ಯಾಂಕ್, ಮಂಗಳೂರು ಅಧ್ಯಕ್ಷತೆ ಜಿ. ತಿಮ್ಮ ಪೂಜಾರಿ ಅಧ್ಯಕ್ಷರು, ಕೋಟ ಸಹಕಾರಿ ವ್ಯವಸಾಯಕ ಸಂಘ (ನಿ.) ಕೋಟ ಗೋದಾಮು ಕಟ್ಟಡ ಉದ್ಘಾಟನೆ ಕಿರಣ್ ಕುಮಾರ್ ಕೊಡ್ಗಿ ಶಾಸಕರು […]
ದೊಡ್ಡಣಗುಡ್ಡೆ: ಇಂದು ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ಗಾಯತ್ರಿ ದೇವಿ ಗುಡಿಯ ಶಿಲಾನ್ಯಾಸ ಕಾರ್ಯಕ್ರಮ
ಉಡುಪಿ: ದೊಡ್ಡಣಗುಡ್ಡೆ ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಶರನ್ನವರಾತ್ರಿ ಮಹೋತ್ಸವ ಪ್ರಯುಕ್ತ ಧರ್ಮದರ್ಶಿ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ, ವೇ.ಮೂ ಕೃಷ್ಣಮೂರ್ತಿ ತಂತ್ರಿಗಳ ನೇತೃತ್ವದಲ್ಲಿ ಅ. 22ರಂದು ಗಾಯತ್ರಿ ಧ್ಯಾನಪೀಠದಲ್ಲಿ ವೇದ ಮಾತೆ ಶ್ರೀ ಗಾಯತ್ರಿ ದೇವಿಯ ನೂತನ ಶಿಲಾಮಯ ಗುಡಿಗೆ ಶಿಲಾ ಮುಹೂರ್ತ ನೆರವೇರಲಿದೆ. ಕ್ಷೇತ್ರದಲ್ಲಿ ಶನಿವಾರ ಜಯಲಕ್ಷ್ಮಿ ಬಾಯರಿ ಹಾಗೂ ದಿ. ನಾರಾಯಣ ಉಪಾಧ್ಯಾಯ ಅವರ ಸೇವಾರ್ಥವಾಗಿ ಜೋಡಿ ಚಂಡಿಕಾಯಾಗ ಸಮರ್ಪಿತಗೊಂಡಿತು. ಉಮಾ ಮಹೇಶ್ವರ ಭಜನ ಮಂಡಳಿ ಹಾಗೂ ತರಂಗಣಿ ಭಜನ […]