ವಿಶ್ವ ಬಂಟರ ಸಮ್ಮೇಳನದ ಹಸಿರು ಹೊರೆ ಕಾಣಿಕೆ ಸಮರ್ಪಣೆ

ಉಡುಪಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅ. 28 29ರಂದು ಜರಗುವ ವಿಶ್ವ ಬಂಟರ ಸಮ್ಮೇಳನ 2023ರ ಪೂರ್ವಭಾವಿಯಾಗಿ ಹಸುರು ಹೊರೆ ಕಾಣಿಕೆ ಸಮರ್ಪಣೆ, ಬುಧವಾರ ವಿಜೃಂಭಣೆಯಿಂದ ನಡೆಯಿತು. ಉಡುಪಿ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಯ 48 ಬಂಟರ ಸಂಘಟನೆಯ ಪ್ರತಿನಿಧಿಗಳು ಈ ಹಸುರು ಹೊರೆ ಕಾಣಿಕೆಯಲ್ಲಿ ಭಾಗವಹಿಸಿದರು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ನಗರದ ಜೋಡುಕಟ್ಟೆಯಲ್ಲಿ ಹೊರೆ ಕಾಣಿಕೆ ಸಮರ್ಪಣೆಗೆ ಚಾಲನೆ ನೀಡಿದರು. ಜೋಡುಕಟ್ಟೆಯಿಂದ ಅಮ್ಮಣ್ಣಿ ರಾಮಣ್ಣ […]

ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ: ರವೀಂದ್ರ (45) ಎಂಬ ಅವಿವಾಹಿತ ವ್ಯಕ್ತಿಯು ಆಗಸ್ಟ್ 30 ರಂದು ರಾತ್ರಿ 10 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು ಎತ್ತರ, ಸಪೂರ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

2 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ : ಚಿಕ್ಕಬಳ್ಳಾಪುರ ರಸ್ತೆ ಅಪಘಾತ: ಮೃತರ ಸಂಖ್ಯೆ 13ಕ್ಕೆ ಏರಿಕೆ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆ ಆಗಿದೆ. ಮೃತರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ಅವರು 2 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.ಚಿಕ್ಕಬಳ್ಳಾಪುರದಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆ ಆಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಪಿ ಎನ್​ ರವೀಂದ್ರ ಅವರು, ಚಿಕ್ಕಬಳ್ಳಾಪುರ ಆರ್​ಟಿಓ ಕಚೇರಿ ಬಳಿ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 13 ಜನ ಸಾವನ್ನಪ್ಪಿದ್ದಾರೆ. 8 ಮಂದಿ ಗಂಡಸರು, 4 […]

ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಆಂಗ್ಲರ ಪಡೆ : ಇದು ವಿಶ್ವಕಪ್‌ ಟೂರ್ನಿಯ ಅತ್ಯಂತ ಮಹತ್ವದ ಪಂದ್ಯ

ಬೆಂಗಳೂರು: ಐಸಿಸಿ ಏಕದಿನ ವಿಶ್ವಕಪ್‌ ಭಾಗವಾಗಿ ಇಂದು ಇಂಗ್ಲೆಂಡ್ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿವೆ. ಟಾಸ್​ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಶ್​ ಬಟ್ಲರ್​ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಲಂಕಾ ಆಟಗಾರರಿಗೆ ಬೌಲಿಂಗ್​ ಮಾಡುವಂತೆ ಆಹ್ವಾನ ನೀಡಿದ್ದಾರೆ. ಉಭಯ ತಂಡಗಳು ತಲಾ ಮೂರು ಪಂದ್ಯಗಳಲ್ಲಿ ಸೋಲು ಅನುಭವಿಸಿರುವುದರಿಂದ ಇಂದಿನ ಕಾದಾಟ ಉಭಯ ತಂಡಗಳಿಗೂ ಬಹಳ ಮಹತ್ವದ್ದಾಗಿದೆ. ಎರಡೂ ತಂಡಗಳು ಗೆಲುವಿನ ನಿರೀಕ್ಷೆಯಲ್ಲಿವೆ.ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಂದು ಇಂಗ್ಲೆಂಡ್ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿದ್ದು ಟಾಸ್​ ಗೆದ್ದ ಆಂಗ್ಲರು […]

ಜೆಡ್ಡಾದಲ್ಲಿ ಮತ್ತೊಂದು ಸುತ್ತಿನ ಶಾಂತಿ ಮಾತುಕತೆ ಆರಂಭ : ಮುಂದುವರಿದ ಸುಡಾನ್​ ಸಂಘರ್ಷ

ಖಾರ್ಟೂಮ್ (ಸುಡಾನ್) : ಸುಡಾನ್​ನಲ್ಲಿ ಸಶಸ್ತ್ರ ಸಂಘರ್ಷ ಮುಂದುವರೆದಿರುವ ಮಧ್ಯೆ, ಸುಡಾನ್ ಸಶಸ್ತ್ರ ಪಡೆಗಳು (ಎಸ್ ಎಎಫ್) ಮತ್ತು ಅರೆಸೈನಿಕ ಕ್ಷಿಪ್ರ ಬೆಂಬಲ ಪಡೆಗಳು (ಆರ್ ಎಸ್ ಎಫ್) ಹೊಸ ಸುತ್ತಿನ ಶಾಂತಿ ಮಾತುಕತೆ ಪುನರಾರಂಭಿಸಲು ಮುಂದಾಗಿವೆ.ಶಾಂತಿ ಮಾತುಕತೆಗಾಗಿ ಎರಡೂ ಕಡೆಗಳ ನಿಯೋಗಗಳು ಸೌದಿ ಅರೇಬಿಯಾದ ಬಂದರು ನಗರ ಜೆಡ್ಡಾಗೆ ಆಗಮಿಸಿವೆ.ಸುಡಾನ್ ಸಂಘರ್ಷ ಕೊನೆಗಾಣಿಸಲು ಸೌದಿ ಅರೇಬಿಯಾದ ಜೆಡ್ಡಾದಲ್ಲಿ ಮತ್ತೊಂದು ಸುತ್ತಿನ ಮಾತುಕತೆಗಳು ಆರಂಭವಾಗಿವೆ. ಏಪ್ರಿಲ್ 15 ರಿಂದ, ಎಸ್‌ಎಎಫ್ ಮತ್ತು ಆರ್​ಎಸ್‌ಎಫ್ ಬಣಗಳು ರಾಜಧಾನಿ ಖಾರ್ಟೂಮ್ […]