ಜಂಬೂಸವಾರಿ: ಮೈಸೂರು ಜಂಬೂಸವಾರಿ ಯಶಸ್ವಿಗೊಳಿಸಿದ ಗಜಪಡೆಗೆ ಸಾಂಪ್ರದಾಯಿಕ ಬೀಳ್ಕೊಡುಗೆ

ಮೈಸೂರು: ಪ್ರಸಿದ್ಧ ದಸರಾಜಂಬೂಸವಾರಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ, ಮಾವುತರು ಹಾಗು ಕಾವಾಡಿಗರನ್ನು ಇಂದು ಸನ್ಮಾನಿಸಲಾಯಿತು. ಈ ಮೂಲಕ ಅರಮನೆಯ ಆಡಳಿತ ಮಂಡಳಿ ಹಾಗೂ ಜಿಲ್ಲಾಡಳಿತ ಆತ್ಮೀಯ ಬೀಳ್ಕೊಡುಗೆ ನೀಡಿತು. ಕಳೆದ 56 ದಿನಗಳಿಂದ ಅರಮನೆ ಆವರಣದಲ್ಲಿ ಗಜಪಡೆ ಹಾಗೂ ಅದರೊಂದಿಗೆ ಬಂದಿದ್ದ ಮಾವುತರು, ಕಾವಾಡಿಗರ ಕುಟುಂಬದವರು ಬೀಡುಬಿಟ್ಟಿದ್ದರು. ಮಾವುತ, ಕಾವಾಡಿಗರಿಗೆ ಗೌರವ ಧನದ ಚೆಕ್ ನೀಡಲಾಯಿತು. ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಅರಣ್ಯ ಅಧಿಕಾರಿಗಳು ಉಪಸ್ಥಿತರಿದ್ದರು.ಐತಿಹಾಸಿಕ ಮೈಸೂರು ದಸರಾ ಜಂಬೂಸವಾರಿ ಮುಕ್ತಾಯಗೊಂಡಿದ್ದು ಇಂದು ಗಜಪಡೆಗಳು ತಮ್ಮ […]

ವಿಶೇಷ ತಂಡ ರಚನೆಗೆ ಸಿದ್ಧತೆ : ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನ

ಬೆಂಗಳೂರು: ವನ್ಯಜೀವಿ ವಸ್ತುಗಳ ಸಂಗ್ರಹ, ಮಾರಾಟ ಪ್ರಕರಣಗಳ ಕುರಿತು ತಂಡವನ್ನ ರಚಿಸುವುದರ ಬಗ್ಗೆ ಅರಣ್ಯ, ಜೀವಶಾಸ್ತ್ರ ಪರಿಸರ ಸಚಿವ ಈಶ್ವರ್ ಖಂಡ್ರೆಯವರಿಗೆ ಅರಣ್ಯ ಇಲಾಖೆಯ ಪ್ರಧಾನ ಸಂರಕ್ಷಣಾಧಿಕಾರಿ ಬ್ರಿಜೇಶ್ ಕುಮಾರ್ ದೀಕ್ಷಿತ್ ಪತ್ರ ಬರೆದಿದ್ದಾರೆ.ರಾಜ್ಯದಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆ ಉಲ್ಲಂಘನೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕಾಯ್ದೆಯನ್ನು ಮತ್ತಷ್ಟು ಕಠಿಣಗೊಳಿಸಲು ಅರಣ್ಯ ಇಲಾಖೆ ಮುಂದಾಗಿದೆ.ವನ್ಯಜೀವಿ ವಸ್ತುಗಳ ಸಂಗ್ರಹ ಮಾರಾಟ ಪ್ರಕರಣಗಳ ಕುರಿತು ತಂಡವನ್ನು ರಚಿಸುವುದರ ಬಗ್ಗೆ ಅರಣ್ಯ ಇಲಾಖೆ ಪ್ರಧಾನ ಸಂರಕ್ಷಣಾಧಿಕಾರಿ ಸಚಿವ ಈಶ್ವರ್​ ಖಂಡ್ರೆಗೆ ಪತ್ರ ಬರೆದಿದ್ದಾರೆ. ಈ ತಂಡವು […]

ಸಂಸತ್ತಿನಲ್ಲಿ ಪಶ್ನೆ ಕೇಳಲು ಲಂಚ ತೆಗೆದುಕೊಂಡ ಆರೋಪ: ಅ.31 ರಂದು ಹಾಜರಾಗುವಂತೆ ಟಿಎಂಸಿ ಸದಸ್ಯೆಗೆ ಲೋಕಸಭೆಯ ನೈತಿಕ ಸಮಿತಿ ಫರ್ಮಾನು

ನವದೆಹಲಿ: ಲೋಕಸಭೆಯ ನೈತಿಕ ಸಮಿತಿಯು ಇಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸದಸ್ಯೆ ಮಹುವಾ ಮೊಯಿತ್ರಾ ಅವರ ವಿರುದ್ಧದ ‘ಪ್ರಶ್ನೆಗಾಗಿ ನಗದು’ ಆರೋಪಗಳಿಗೆ ಸಂಬಂಧಿಸಿದಂತೆ ತನ್ನನ್ನು ತಾನು ಸಮರ್ಥಿಸಿಕೊಳ್ಳಲು ಅಕ್ಟೋಬರ್ 31 ರಂದು ಸಮಿತಿ ಮುಂದೆ ಹಾಜರಾಗುವಂತೆ ಕೇಳಿಕೊಂಡಿದೆ. ಅಧ್ಯಕ್ಷ ವಿನೋದ್ ಕುಮಾರ್ ಸೋಂಕರ್ ನೇತೃತ್ವದ ನೈತಿಕ ಸಮಿತಿಯು ಗೃಹ ವ್ಯವಹಾರಗಳ ಸಚಿವಾಲಯ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದಿಂದ ಮೊಯಿತ್ರಾ ವಿರುದ್ಧದ ಆರೋಪಗಳನ್ನು ತನಿಖೆ ಮಾಡಲು ಸಹಾಯವನ್ನು ಕೋರಿದೆ. ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮತ್ತು […]

ಕರ್ನಾಟಕ ಪರೀಕ್ಷಾ ಪ್ರಾಧಿಕಾರ : ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ

ಬೆಂಗಳೂರು: ಅಕ್ಟೋಬರ್ 28 ಮತ್ತು 29ರಂದು ನಡೆಯಲಿರುವ ವಿವಿಧ ನಿಗಮ ಮಂಡಳಿಗಳ ಪರೀಕ್ಷೆಗೆ ಹಿಜಾಬ್ ಧರಿಸಿ ಹಾಜರಾಗಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಷರತ್ತುಬದ್ಧ ಅನುಮತಿ ನೀಡಿದೆ. ಹಿಜಾಬ್‌ ಧರಿಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಕೊಠಡಿಗೆ ಪ್ರವೇಶ ಕಲ್ಪಸಲು ಸೂಚಿಸಿದ್ದರೂ ಪರೀಕ್ಷೆ ಆರಂಭವಾಗುವುದಕ್ಕೆ ಒಂದು ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್ಲಿ ಅವರು ಹಾಜರಿರಬೇಕು. ಅವರು ಮಹಿಳಾ ಸಿಬ್ಬಂದಿಯಿಂದ ತಪಾಸಣೆಗೆ ಒಳಪಡಬೇಕು. ತಪಾಸಣೆಗೆ ಸೂಚಿಸಿರುವ ಸಮಯ ಮೀರಿದ ನಂತರ ಆಗಮಿಸಿದರೆ ಅವರು ಹಿಜಾಬ್ ಧರಿಸಿ ಪರೀಕ್ಷಾ ಕೇಂದ್ರ ಪ್ರವೇಶಿಸಲು […]

₹109 ಕೋಟಿ ವೆಚ್ಚದ ಅತ್ಯಾಧುನಿಕ ದರ್ಶನ ಹಾದಿ ಉದ್ಘಾಟನೆ : ಶಿರಡಿ ಸಾಯಿಬಾಬಾಗೆ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ

ಅಹ್ಮದ್‌ನಗರ (ಮಹಾರಾಷ್ಟ್ರ): ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಗೆ ಮಹಾರಾಷ್ಟ್ರ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಇಲ್ಲಿನ ಶಿರಡಿ ಕ್ಷೇತ್ರಕ್ಕೆ ಗುರುವಾರ ಭೇಟಿ ನೀಡಿದರು.ಶಿರಡಿ ದೇವಸ್ಥಾನಕ್ಕೆ ಇಂದು ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ, ಸಾಯಿಬಾಬಾಗೆ ಪೂಜೆ ಸಲ್ಲಿಸಿದರು. ಮಹಾರಾಷ್ಟ್ರ ರಾಜ್ಯಪಾಲ ರಮೇಶ್ ಬೈಸ್, ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಇದ್ದರು.ಈ ಸಂದರ್ಭದಲ್ಲಿ ಸಾಯಿಬಾಬಾ ಸಮಾಧಿಗೆ ಪ್ರಾರ್ಥನೆ ಸಲ್ಲಿಸಿದರು. ಭಕ್ತರ ದರ್ಶನ ಹಾದಿಯ ವಿಶೇಷತೆ: ಪ್ರಧಾನಿ ಮೋದಿ ಉದ್ಘಾಟನೆ […]