ವಿಶ್ವ ಬಂಟರ ಕ್ರೀಡಾಕೂಟ ಉದ್ಘಾಟನೆ
ಉಡುಪಿ: ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದ ಶ್ರೀಮತಿ ನಳಿನ ಭೋಜ ಶೆಟ್ಟಿ ವೇದಿಕೆಯನ್ನು ಲೋಕಾರ್ಪಣೆಗೊಳಿಸಲಾಯಿತು. ಈ ಸಂದರ್ಭದಲ್ಲಿ ವಿಶ್ವ ಬಂಟರ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು. ಜಿಲ್ಲಾ ಕ್ರೀಡಾಂಗಣದಲ್ಲಿ ಆಕರ್ಷಕ ಪಥ ಸಂಚಲನ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದು, ಅದಾಗಲೇ ವಿವಿಧ ಕ್ರೀಡೆಗಳು ನಡೆಯುತ್ತಿದೆ.
ವಿಶ್ವ ಬಂಟರ ಸಮ್ಮೆಳನ-2023 ಕ್ಕೆ ವಿದ್ಯುಕ್ತ ಚಾಲನೆ; ಆಕರ್ಷಕ ಮೆರವಣಿಗೆ
ಉಡುಪಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟ(ರಿ) ಆಯೋಜಿಸಿರುವ ವಿಶ್ವ ಬಂಟರ ಸಮ್ಮೆಳನ-2023 ಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್, ಮಾತೃ ಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ, ಬಂಟರ ಸಂಘದ ಪದಾಧಿಕಾರಿಗಳು, ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿಗಳು, ಬಾರ್ಕೂರು ಸಂಸ್ಥಾನದ ಸಂತೋಷ್ ಭಾರತೀ ಸ್ವಾಮಿಗಳು, ಕಟೀಲು ಲಕ್ಷ್ಮೀ ನಾರಾಯಣ ಅಸ್ರಣ್ಣ, ಶಾಸಕ ಯಶ್ ಪಾಲ್ ಸುವರ್ಣ ಮುಂತಾದವರು ಉಪಸ್ಥಿತರಿದ್ದರು. ಉದ್ಘಾಟನೆಗೂ ಮುನ್ನ ಬೋರ್ಡ್ ಹೈಸ್ಕೂಲ್ ನಿಂದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದವರೆಗೆ […]
ಮುಂದಿನ ತಿಂಗಳವರೆಗೆ ಏರುಗತಿಯಲ್ಲಿರಲಿದೆ ಈರುಳ್ಳಿ ಬೆಲೆ: ಡಿಸೆಂಬರ್ ವೇಳೆಗೆ ಇಳಿಕೆ ಸಾಧ್ಯತೆ
ನವದೆಹಲಿ: ಕರ್ನಾಟಕ, ಮಹಾರಾಷ್ಟ್ರ, ದೆಹಲಿ ಸೇರಿದಂತೆ ಇತರೆ ರಾಜ್ಯಗಳಲ್ಲಿ ಈರುಳ್ಳಿ ಬೆಲೆ ಏರಿಕೆಯಾಗುತ್ತಿದೆ. ಬೆಂಗಳೂರಿನ ಯಶವಂತಪುರದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಪ್ರತಿ ಕಿಲೋಗ್ರಾಂಗೆ ₹ 65-70ರಂತೆ ಈರುಳ್ಳಿ ಮಾರಾಟ ಮಾಡಿದೆ. ನವರಾತ್ರಿಯ ಬಳಿಕ ಈರುಳ್ಳಿ ಬೆಲೆಯು ಸತತ ಏರಿಕೆಯ ಹಾದಿ ತುಳಿದಿದ್ದು, ಸರ್ಕಾರದ ಅಂಕಿಅಂಶಗಳ ಪ್ರಕಾರ, ಈರುಳ್ಳಿಯ ಗರಿಷ್ಠ ಬೆಲೆ ಪ್ರತಿ ಕಿಲೋಗ್ರಾಂಗೆ ₹ 70 ರಷ್ಟಿದ್ದು, ಈ ಏರುಮುಖ ಪ್ರವೃತ್ತಿ ಡಿಸೆಂಬರ್‌ವರೆಗೆ ಮುಂದುವರಿಯುವ ಸಾಧ್ಯತೆಯಿದೆ. ಈರುಳ್ಳಿಯ ಒಳಹರಿವು ಕಡಿಮೆಯಾಗಿದ್ದು, ಹೆಚ್ಚಿನ ದರಕ್ಕೆ ಕಾರಣವಾಗುತ್ತದೆ. […]
ನೈಸರ್ಗಿಕವಾಗಿ ಉದುರಿದ ನವಿಲುಗರಿ ಸಂಗ್ರಹಣೆ ಕಾನೂನು ಬಾಹಿರವಲ್ಲ: ಈಶ್ವರ್ ಖಂಡ್ರೆ
ಬೆಂಗಳೂರು: ವನ್ಯ ಜೀವಿ ಸಂರಕ್ಷಣಾ ಕಾಯ್ದೆಯಡಿ ನವಿಲು ಗರಿಗೆ ವಿನಾಯಿತಿ ಇದೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ನವಿಲು ಗರಿಯಿಂದ ತಯಾರಿಸಿದ ವಸ್ತುಗಳನ್ನು ವಿದೇಶಕ್ಕೆ ರಫ್ತು ಮಾಡಲು ನಿಷೇಧವಿದೆ. ಆದರೆ ನವಿಲುಗಳಿಗೆ ಹಿಂಸೆ ನೀಡದೇ ಉದುರಿಬಿದ್ದ ಗರಿಗಳನ್ನು ಸಂಗ್ರಹಿಸಿ ದೇಶದೊಳಗೆ ಮಾರಾಟ ಮಾಡುವುದು ಕಾನೂನು ಬಾಹಿರವಲ್ಲ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಕೇವಲ ಹಿಂದೂ ಸಮಾಜದ ನಂಬಿಕೆಗಳನ್ನು ಗುರಿಯಾಗಿಸಿಕೊಂಡು ಕಾನೂನು ಕ್ರಮ ಜರುಗಿಸುವುದು ಸರಿಯಾದ ಕ್ರಮವಲ್ಲ, ದರ್ಗಾಗಳಲ್ಲಿ ನವಿಲುಗರಿ ಇಡುವ ಬಗ್ಗೆಯೂ ತನಿಖೆ […]
ಇಂಗ್ಲಿಷ್ ಪ್ರಬಂಧ ಸ್ಪರ್ಧೆ: ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ
ಕುಂದಾಪುರ: ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆಗಳು ನಡೆಸಿದ ಕರ್ನಾಟಕ ನಾರ್ಥ್ ಜೋನಲ್ ಲೆವೆಲ್ ಪ್ರಬಂಧ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೀನಿಧಿ ಖಾರ್ವಿ ಇಂಗ್ಲೀಷ್ ಪ್ರಬಂಧದಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾಳೆ. ಈ ಸ್ಪರ್ಧೆಯನ್ನು ಸ್ಥಳೀಯ ಸಂಸ್ಥೆಯಾದ ಕುಂದಾಪುರದ ಶ್ರೀ ಸತ್ಯ ಸಾಯಿ ಸೇವಾ ಸಮಿತಿಯವರು ನಡೆಸಿರುತ್ತಾರೆ. ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.