ಕುಚ್ಚಲಕ್ಕಿ ಬೆಲೆಯಲ್ಲಿ ಭಾರೀ ಹೆಚ್ಚಳ: ಕಂಗಾಲಾದ ಕರಾವಳಿಯ ಜನತೆ
ಮಂಗಳೂರು: ಕುಚ್ಚಲಕ್ಕಿ ದರ ಬಾರಿ ಏರಿಕೆ ಕಂಡಿದ್ದು, ಜನಸಾಮಾನ್ಯರು ತತ್ತರಿಸಿದ್ದಾರೆ. ಕೆ.ಜಿ.ಗೆ 15ರಿಂದ 20 ರೂ. ಹೆಚ್ಚಳವಾಗಿ 48 ರಿಂದ 50 ರೂ. ನಲ್ಲಿ ಮಾರಾಟವಾಗುತ್ತಿರುವ ಹಿನ್ನಲೆಯಲ್ಲಿ ಕರಾವಳಿಯ ಜನರು ಕಂಗಾಲಾಗಿದ್ದಾರೆ. ಕಳೆದ ವರುಷ ಡಿಸೆಂಬರ್ ನಲ್ಲಿ ಒಂದು ಕ್ವಿಂಟಾಲ್ ಕುಚ್ಚಲಕ್ಕಿ ದರ 3200 ರೂ.ನಿಂದ 3300 ರೂ.ವರೆಗೆ ಇತ್ತು. 2023ರ ಮಾರ್ಚ್ -ಏಪ್ರಿಲ್ ನಲ್ಲಿ ಭಾರಿ ಏರಿಕೆ ಖಂಡ ಕುಚಲಕ್ಕಿ ದರ ಕ್ವಿಂಟಾಲ್ ಗೆ 4,200 ರೂ.ವರೆಗೂ ತಲುಪಿತ್ತು. ಕುಚ್ಚಲಕ್ಕಿ ಬೆಲೆಯಲ್ಲಿ ಭಾರೀ ಹೆಚ್ಚಳವಾದರೂ, ಭತ್ತದ […]
ಒಂದೇ ಕುಟುಂಬದ 7 ಜನ ಸಾವು : ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ
ರಾಜಸ್ಥಾನ: ಕಾರು ಮತ್ತು ಟ್ರೋಲಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಏಳು ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಹನುಮಾನ್ಗಡ್ ಜಿಲ್ಲೆಯಲ್ಲಿ ಶನಿವಾರ ಸಂಜೆ ಸಂಭವಿಸಿದೆ. ರಾಜಸ್ಥಾನದ ಹನುಮಾನ್ಗಡ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಹಲವರು ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಹನುಮಾನ್ಗಡ್ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಎಸ್ಪಿ ರಾಜೀವ್ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಕಾರಿನಲ್ಲಿ 9 ಜನ ಪ್ರಯಾಣಿಸುತ್ತಿದ್ದರು. ಇದರಲ್ಲಿ ಏಳು ಜನ […]
‘ಆರಾಮ್ ಅರವಿಂದ್ ಸ್ವಾಮಿ’ ಚಿತ್ರ : ಮುಂದಿನ ವರ್ಷ ತೆರೆ
ಅಭಿಷೇಕ್ ಶೆಟ್ಟಿ ಹಾಗೂ ಅನೀಶ್ ತೇಜೇಶ್ವರ್ ಕಾಂಬಿನೇಷನ್ನಲ್ಲಿ ಮೂಡಿಬರುತ್ತಿರುವ ಈ ಚಿತ್ರದಲ್ಲಿ ಮಿಲನಾ ನಾಗರಾಜ್ ಹಾಗೂ ಹೃತಿಕ ಶ್ರೀನಿವಾಸ್ ನಾಯಕಿಯರಾಗಿ ನಟಿಸಿದ್ದಾರೆ. ಸದ್ದಿಲ್ಲದೇ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ. ಬಹುತೇಕ ಚಿತ್ರೀಕರಣ ಮುಗಿಸಿರುವ ಚಿತ್ರದ ಬಗ್ಗೆ ಸಿನಿಮಾತಂಡ ಕೆಲವೊಂದು ವಿಚಾರಗಳನ್ನು ಹಂಚಿಕೊಂಡಿದೆ.ಕನ್ನಡ ಚಿತ್ರರಂಗದಲ್ಲಿ ಫಸ್ಟ್ ಲುಕ್ ಹಾಗೂ ಪ್ರಮೋಷನಲ್ ವಿಡಿಯೋ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಚಿತ್ರ ‘ಆರಾಮ್ ಅರವಿಂದ್ ಸ್ವಾಮಿ’.ಅಭಿಷೇಕ್ ಶೆಟ್ಟಿ ಹಾಗೂ ಅನೀಶ್ ತೇಜೇಶ್ವರ್ ಕಾಂಬೋದಲ್ಲಿ ಮೂಡಿಬರುತ್ತಿರುವ ‘ಆರಾಮ್ ಅರವಿಂದ್ […]
ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ
ಬ್ರಹ್ಮಾವರ: ಐತಿಹಾಸಿಕ ಮಹಾಕಾವ್ಯ ರಾಮಾಯಣದ ಮೂಲಕ ಜೀವನ ಮೌಲ್ಯಗಳನ್ನು ಜಗತ್ತಿಗೆ ತಿಳಿಸಿದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಕಾಲೇಜಿನ ಸಂಸ್ಥಾಪಕ ಸುಬ್ರಹ್ಮಣ್ಯ ಹಾಗೂ ಕಾಲೇಜಿನ ನಿರ್ದೇಶಕಿ ಮಮತಾ, ಪ್ರಾಂಶುಪಾಲೆ ಡಾ. ಸೀಮಾ ಜಿ ಭಟ್, ಉಪ ಪ್ರಾಂಶುಪಾಲೆ ಸುಜಾತ, ಕನ್ನಡ ವಿಭಾಗದ ಮುಖ್ಯಸ್ಥೆ ಅನುಪಮಾ ಪಿ ಭಟ್, ಉಪನ್ಯಾಸಕರಾದ ಉದಯ್ ಕುಮಾರ್, ರೋಹನ್ ಉಪನ್ಯಾಸಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಹಿಂದಿ ವಿಭಾಗದ ಉಪನ್ಯಾಸಕಿ ರಾಝಿಕಾ ನಿರೂಪಿಸಿದರು.
ರಾಜ್ ಕುಟುಂಬದಿಂದ ‘ಪರಮಾತ್ಮ’ನ ಸ್ಮಾರಕ ನಿರ್ಮಾಣ : ಅಪ್ಪು ನಮ್ಮನ್ನಗಲಿ 2 ವರ್ಷ
ಕನ್ನಡ ಚಿತ್ರರಂಗದ ದೊಡ್ಮನೆಯ ರಾಜಕುಮಾರ, ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ನಮ್ಮನ್ನಗಲಿ ನಾಳೆಗೆ (ಅ.29) ಎರಡು ವರ್ಷ. ನಾಳೆ ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ 2ನೇ ವರ್ಷದ ಪುಣ್ಯಸ್ಮರಣೆ. ಈ ಹಿನ್ನೆಲೆ ಕಂಠೀರ ಸ್ಟುಡಿಯೋದಲ್ಲಿರುವ ಅಪ್ಪು ಸ್ಮಾರಕ ಸಿಂಗಾರಗೊಳ್ಳುತ್ತಿದೆ. ಕಂಠೀರವ ಸ್ಟುಡಿಯೋದಲ್ಲಿ ದೊಡ್ಮನೆ ಕುಟುಂಬ ಡಾ.ರಾಜ್ಕುಮಾರ್, ಪಾರ್ವತಮ್ಮ ರಾಜ್ಕುಮಾರ್ ಸ್ಮಾರಕದ ಬಳಿಯೇ ಪುನೀತ್ ರಾಜ್ಕುಮಾರ್ ಸ್ಮಾರಕವನ್ನು ನಿರ್ಮಾಣ ಮಾಡಿದ್ದಾರೆ. ಬಿಳಿ ಮಾರ್ಬಲ್ಸ್ನಲ್ಲಿ ಅಪ್ಪು ಸಮಾಧಿಯನ್ನು ಕಟ್ಟಲಾಗಿದ್ದು, ಅದರ ಮೇಲೆ ‘ರಾಜಕುಮಾರ’ನ ಫೋಟೋ ಕೂಡ ಇದೆ. ಸ್ಮಾರಕದ ಸುತ್ತಲೂ ಬಿಳಿ ಬಣ್ಣದ […]