ನ.1 ರಂದು ಜಿಲ್ಲೆಯಲ್ಲಿ ವಿಶೇಷ ರೀತಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ
ಉಡುಪಿ: ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆ, ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಜಿಲ್ಲೆಯಲ್ಲಿ ವಿಶೇಷ ರೀತಿಯಲ್ಲಿ ಆಚರಿಸಲು ಉದ್ದೇಶಿಸಲಾಗಿರುತ್ತದೆ. ಆದ್ದರಿಂದ ನವೆಂಬರ್ 1 ರಂದು ಜಿಲ್ಲೆಯ ಎಲ್ಲಾ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಗಳನ್ನು ಬಿಡಿಸಿ, ಕರ್ನಾಟಕ ಸಂಭ್ರಮ-50 "ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ" ಎಂಬ ಘೋಷ ವಾಕ್ಯವನ್ನು ಬರೆಯಬೇಕು. ಅಂದು ಬೆಳಗ್ಗೆ 9 ಗಂಟೆಗೆ ಆಕಾಶವಾಣಿ ಕೇಂದ್ರಗಳಲ್ಲಿ (ರೇಡಿಯೊ) ನಾಡ ಗೀತೆಯನ್ನು ಪ್ರಸಾರ ಮಾಡಲಾಗುತ್ತಿದ್ದು, ಆ […]
ಸಿಸಿಟಿವಿಯಲ್ಲಿ ದೃಶ್ಯ ಸೆರೆ : ಬೆಂಗಳೂರು ಹೊರವಲಯದ ರಸ್ತೆ, ಅಪಾರ್ಟ್ಮೆಂಟ್ಗಳಲ್ಲಿ ಚಿರತೆ ಓಡಾಟ
ಬೆಂಗಳೂರು: ಅರಣ್ಯ ಇಲಾಖೆ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ. ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದ್ದಾರೆ.ನಗರದ ಹೊರವಲಯದಲ್ಲಿರುವ ಬೊಮ್ಮನಹಳ್ಳಿಯ ಸಿಂಗಸಂದ್ರ ಎಇಸಿಎಸ್ ಲೇಔಟ್‌ನಲ್ಲಿ ಚಿರತೆ ಸಂಚಾರದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಂಗಳೂರು ಹೊರವಲಯದಲ್ಲಿ ಚಿರತೆ ಓಡಾಡಿದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮತ್ತೋರ್ವ ಸ್ಥಳೀಯ ನಿವಾಸಿ ಪರಮೇಶ್ ಮಾತನಾಡಿ, “ಚಿರತೆ ಓಡಾಟದ ಬಗ್ಗೆ ಸಿಸಿಟಿವಿಯಲ್ಲಿ ಚೆಕ್ ಮಾಡಿದ್ದಾರೆ. ಡ್ರೋನ್ ಬೇಕು ಅನ್ನುತ್ತಿದ್ದಾರೆ. ಇಲ್ಲಿ ಸಾರ್ವಜನಿಕರು ಜಾಸ್ತಿ ಇದ್ದಾರೆ. ಬೆಳಿಗ್ಗೆ ವಯಸ್ಸಾದವರು ವಾಕ್ಗೆ ಬರುತ್ತಾರೆ. ಹಾಗಾಗಿ ಸ್ಥಳೀಯ ಅಧಿಕಾರಿಗಳು ಸ್ವಲ್ಪ ಕೇರ್ […]
ಇಂದು 330 ಪಾಯಿಂಟ್ ಏರಿಕೆಯಾದ ಸೆನ್ಸೆಕ್ಸ್; 19,100 ದಾಟಿದ ನಿಫ್ಟಿ : ಷೇರು ಮಾರುಕಟ್ಟೆ
ಬೆಂಗಳೂರು: ಸೋಮವಾರ ವಹಿವಾಟಿನ ಅಂತ್ಯಕ್ಕೆ ಎಸ್ &ಪಿ ಬಿಎಸ್‌ಇ ಸೆನ್ಸೆಕ್ಸ್ 330 ಪಾಯಿಂಟ್ಸ್ ಅಥವಾ ಶೇಕಡಾ 0.52ರಷ್ಟು ಏರಿಕೆ ಕಂಡು 64,113ಕ್ಕೆ ತಲುಪಿದೆ. ಮತ್ತೊಂದೆಡೆ, ನಿಫ್ಟಿ50 94 ಪಾಯಿಂಟ್ ಅಥವಾ ಶೇಕಡಾ 0.49ರಷ್ಟು ಏರಿಕೆ ಕಂಡು 19,141ಕ್ಕೆ ಕೊನೆಗೊಂಡಿದೆ. ಜಾಗತಿಕ ಮಾರುಕಟ್ಟೆಗಳಲ್ಲಿನ ಮಂದಗತಿಯ ವಹಿವಾಟಿನ ಕಾರಣದಿಂದ ಸೋಮವಾರ ಇಳಿಕೆಯೊಂದಿಗೆ ವಹಿವಾಟು ಆರಂಭಿಸಿದ ಭಾರತೀಯ ಷೇರು ಸೂಚ್ಯಂಕಗಳು ನಂತರ ರಿಲಯನ್ಸ್ ಇಂಡಸ್ಟ್ರೀಸ್, ಭಾರ್ತಿ ಏರ್ಟೆಲ್, ಐಸಿಐಸಿಐ ಬ್ಯಾಂಕ್, ಎಚ್ಡಿಎಫ್ಸಿ ಬ್ಯಾಂಕ್, ಎಲ್ &ಟಿ ಮತ್ತು ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ […]
ರಂಜುಷಾ ಮೆನನ್ ಮಲಯಾಳಂ ಖ್ಯಾತ ಧಾರಾವಾಹಿ ನಟಿ ಶವವಾಗಿ ಪತ್ತೆ
ತಿರುವನಂತಪುರಂ (ಕೇರಳ): ಮಲಯಾಳಂ ಸಿನಿಮಾ ಮತ್ತು ಧಾರಾವಾಹಿ ನಟಿ ರಂಜುಷಾ ಮೆನನ್ (35) ತಿರುವನಂತಪುರಂನ ಶ್ರೀಕಾರ್ಯಂ ಕರಿಯಂನಲ್ಲಿರುವ ಫ್ಲಾಟ್ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಹಣಕಾಸಿನ ಸಮಸ್ಯೆಯಿಂದ ನಟಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಸಾವಿನ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಮಲಯಾಳಂ ಕಿರುತೆರೆಯ ಖ್ಯಾತ ನಟಿ ರಂಜುಷಾ ಮೆನನ್ ಇಂದು ಶವವಾಗಿ ಪತ್ತೆಯಾಗಿದ್ದಾರೆ ಮೇರಿಕುಂಡೋರು ಕುಂಜಾದ್, ಸಿಟಿ ಆಫ್ ಗಾಡ್, ಲಿಸಮ್ಮಂದೆ ಹೌಸ್, ಬಾಂಬೆ ಮಾರ್ಚ್ 12, ತಲಪ್ಪಾವು, ವಾಧ್ಯಾರ್ ಮುಂತಾದ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದರು. ಕೊಚ್ಚಿ […]
ಸಿಗರೇಟ್ಗಳ ನಾಶ : ವಿದೇಶದಿಂದ ಅಕ್ರಮವಾಗಿ ತಂದ 1.46 ಕೋಟಿ ಮೌಲ್ಯದ 7.3 ಲಕ್ಷ ಸಿಗರೇಟ್
ಬೆಂಗಳೂರು : ವಿದೇಶದಿಂದ ಅಕ್ರಮವಾಗಿ ಸಿಗರೇಟ್ ಸಾಗಿಸುವ ಯತ್ನವನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭೇದಿಸಿದ್ದಾರೆ. ಈ ವೇಳೆ ಪ್ರಯಾಣಿಕರು ಸಿಕ್ಕಿಬಿದ್ದಿದ್ದು, ಅವರಿಂದ ವಶಪಡಿಸಿಕೊಂಡು 1.46 ಕೋಟಿ ಮೌಲ್ಯದ 7.3 ಲಕ್ಷ ಸಿಗರೇಟ್ಗಳನ್ನು ಸುಟ್ಟು ನಾಶ ಮಾಡಲಾಗಿದೆ. ನೆಲಮಂಗಲದ ಬೆಂಗಳೂರು ಇಕೋ ಪ್ರೈವೇಟ್ ಲಿಮಿಟೆಡ್ನಲ್ಲಿರುವ ಇನ್ಸಿನರೇಟರ್ನಲ್ಲಿ ಜಪ್ತಿ ಮಾಡಲಾದ ಸಿಗರೇಟ್ಗಳನ್ನು ಇಡೀ ದಿನ ನಾಶಪಡಿಸಲಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು 1.46 ಕೋಟಿ ಮೌಲ್ಯದ 7.3 ಲಕ್ಷ ಸಿಗರೇಟ್ಗಳನ್ನು ವಶಕ್ಕೆ ಪಡೆದುಕೊಂಡು […]