ಸಂಚಾರ ಪುನಾರಂಭ : ಆಂಧ್ರ ರೈಲು ದುರಂತ: ಹಳಿಗಳ ಮರುಜೋಡಣೆ
ವಿಜಯನಗರ (ಆಂಧ್ರಪ್ರದೇಶ): ನಿರಂತರ ಕಾರ್ಯಾಚರಣೆಯ ಬಳಿಕ ನಾಶವಾಗಿದ್ದ ಹಳಿಗಳನ್ನು ಸೋಮವಾರ ಮರುಜೋಡಿಸಲಾಗಿದೆ. ಸರಕು ಸಾಗಣೆ ರೈಲಿನ ಬಳಿಕ, ಪ್ರಶಾಂತಿ ಎಕ್ಸ್ಪ್ರೆಸ್ ರೈಲು ಸಂಚಾರ ನಡೆಸಿದವು.ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯಲ್ಲಿ ಒಡಿಶಾದ ಬಾಲಾಸೋರ್ ದುರಂತದ ಮಾದರಿ ನಡೆದ ಪ್ಯಾಸೆಂಜರ್ ರೈಲು ಅಪಘಾತದಲ್ಲಿ 14 ಮಂದಿ ಸಾವಿಗೀಡಾಗಿದ್ದು, 100ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ.ಆಂಧ್ರಪ್ರದೇಶ ರೈಲು ದುರಂತದ ಮಾರ್ಗವನ್ನು ಮರುಸ್ಥಾಪಿಸಲಾಗಿದ್ದು, ಸಂಚಾರ ಪುನಾರಂಭವಾಗಿದೆ. ಸಿಎಂ ಜಗನ್ ಮೋಹನ್ ರೆಡ್ಡಿ ವೈಮಾನಿಕ ಸಮೀಕ್ಷೆ ನಡೆಸಿದರು. ವಿಜಯವಾಡದಿಂದ ಅವರು ವಿಶಾಖಪಟ್ಟಣಕ್ಕೆ ವಿಮಾನದಲ್ಲಿ ಬಂದಿಳಿದರು. ಬಳಿಕ ನೇರವಾಗಿ […]
ಕೆಯುಡಿ : ವಿವಿ ಘಟಿಕೋತ್ಸವ ಡಿ.ಕೆ.ಶಿವಕುಮಾರ್ ಹೆಸರಲ್ಲಿ ಚಿನ್ನದ ಪದಕ ಪ್ರದಾನ
ಧಾರವಾಡ: ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೆಸರಲ್ಲಿ ಇದೇ ಮೊದಲ ಬಾರಿಗೆ ಚಿನ್ನದ ಪದಕ ನೀಡಲಾಯಿತು.ಕರ್ನಾಟಕ ವಿಶ್ವವಿದ್ಯಾಲಯದ 73ನೇ ಘಟಿಕೋತ್ಸವ ಸೋಮವಾರ ಇಲ್ಲಿನ ಗಾಂಧಿ ಭವನದಲ್ಲಿ ನಡೆಯಿತು. ಘಟಿಕೋತ್ಸವದಲ್ಲಿ ಇದೇ ಪ್ರಥಮ ಬಾರಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೆಸರಿನಲ್ಲಿ ಒಂದು ಚಿನ್ನದ ಪದಕ ಪ್ರದಾನ ಮಾಡಲಾಯಿತು. ಡಿ.ಕೆ.ಶಿವಕುಮಾರ್ ಹೆಸರಿನಲ್ಲಿ ಈ ವರ್ಷದಿಂದ ಚಿನ್ನದ ಪದಕ ದತ್ತಿ ಇಡಲಾಗಿದೆ.ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ 73ನೇ ಘಟಿಕೋತ್ಸವ ಇಂದು ನಡೆಯಿತು. ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಉನ್ನತ […]
CWRC : ಮತ್ತೆ 15 ದಿನ ತಮಿಳುನಾಡಿಗೆ 2,600 ಕ್ಯೂಸೆಕ್ ನೀರು ಬಿಡುವಂತೆ ಶಿಫಾರಸ್ಸು
ನವದೆಹಲಿ/ಬೆಂಗಳೂರು: ಈ ಹಿಂದೆ ಕಾವೇರಿ ನೀರು ನಿರ್ವಹಣಾ ಮಂಡಳಿ ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ತಿಳಿಸಿತ್ತು. ಅಕ್ಟೋಬರ್ 16ರಿಂದ ಅಕ್ಟೋಬರ್ 31ರ ವರೆಗೆ ನೀರು ಹರಿಸುವಂತೆ ತಿಳಿಸಲಾಗಿತ್ತು.ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಮತ್ತೊಮ್ಮೆ ಆಘಾತ ಎದುರಾಗಿದೆ. ನವೆಂಬರ್ 1 ರಿಂದ 15 ರವರೆಗೆ ಪ್ರತಿದಿನ 2,600 ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣಾ ಸಮಿತಿ ಕರ್ನಾಟಕಕ್ಕೆ ಆದೇಶಿಸಿದೆ.ನವೆಂಬರ್ 1ರಿಂದ ನವೆಂಬರ್ 15ರ ವರೆಗೆ ತಮಿಳುನಾಡಿಗೆ ಪ್ರತಿದಿನ 2,600 ಕ್ಯೂಸೆಕ್ ನೀರು […]
ಎಸ್‌ಇಸಿಎಲ್ ನಿಂದ ದಾಖಲೆಯ 100 ಮಿಲಿಯನ್ ಟನ್ ಕಲ್ಲಿದ್ದಲು ಉತ್ಪಾದನೆ
ನವದೆಹಲಿ: ಛತ್ತೀಸಗಢ ಮೂಲದ ಈ ಕಂಪನಿಯು ಪ್ರಾರಂಭವಾದಾಗಿನಿಂದ ಸಾಧಿಸಿದ ಅತ್ಯಂತ ವೇಗದ 100 ಮೆಟ್ರಿಕ್ ಟನ್ ಕಲ್ಲಿದ್ದಲು ಉತ್ಪಾದನೆ ಇದಾಗಿದೆ ಎಂದು ಸೋಮವಾರ ಬಿಡುಗಡೆ ಮಾಡಿದ ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.ಕೋಲ್ ಇಂಡಿಯಾದ ಅಂಗಸಂಸ್ಥೆಯಾದ ಸೌತ್ ಈಸ್ಟರ್ನ್ ಕೋಲ್ ಫೀಲ್ಡ್ಸ್ ಲಿಮಿಟೆಡ್ (ಎಸ್‌ಇಸಿಎಲ್) 2023-24ರ ಹಣಕಾಸು ವರ್ಷದಲ್ಲಿ ದಾಖಲೆಯ 100 ದಶಲಕ್ಷ ಟನ್ ಕಲ್ಲಿದ್ದಲು ಉತ್ಪಾದನೆ ಮಾಡಿದೆ.ಸೌತ್ ಈಸ್ಟರ್ನ್ ಕೋಲ್ ಫೀಲ್ಡ್ಸ್ ಲಿಮಿಟೆಡ್ ದಾಖಲೆಯ 100 ಮಿಲಿಯನ್ ಟನ್ ಕಲ್ಲಿದ್ದಲು ಉತ್ಪಾದಿಸಿದೆ. ಕೊರ್ಬಾ ಜಿಲ್ಲೆಯಲ್ಲಿರುವ ಎಸ್ಇಸಿಎಲ್ನ ಮೆಗಾ ಯೋಜನೆಗಳಾದ […]
ನಾಳೆ ಕಾಪು ಶ್ರೀ ಹಳೇ ಮಾರಿಗುಡಿ ದೇವಸ್ಥಾನದಲ್ಲಿ ಚಂಡಿಕಾಯಾಗ, ಅನ್ನಸಂತರ್ಪಣೆ
ಕಾಪು: ಕಾಪು ಶ್ರೀ ಹಳೆ ಮಾರಿಯಮ್ಮ ದೇವಸ್ಥಾನದಲ್ಲಿ ವರ್ಷಂಪ್ರತಿಯಂತೆ ಶ್ರೀ ಶರನ್ನವರಾತ್ರಿ ಮಹೋತ್ಸವದ ಪ್ರಯುಕ್ತ ಜರಗುವ ಚಂಡಿಕಾಯಾಗ ಪೂರ್ಣಾಹುತಿಯು ಅ. 31ರಂದು ನಡೆಯಲಿದೆ. ಮಂಗಳವಾರ ಬೆಳಗ್ಗೆ 8 ಗಂಟೆಗೆ ಪ್ರಾರ್ಥನೆ, 11.30ಕ್ಕೆ ಚಂಡಿಕಾಯಾಗ ಪೂರ್ಣಾಹುತಿ, ಮಧ್ಯಾಹ್ನ 12ಗಂಟೆಗೆ ಅನ್ನಸಂತರ್ಪಣೆ, ಸಂಜೆ 3ಗಂಟೆಗೆ ದರ್ಶನ ಸೇವೆ ನಡೆಯಲಿದೆ ಎಂದು ಕಾಪು ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಪ್ರಸಾದ್ ಜಿ. ಶೆಣೈ ಮತ್ತು ಕಾಪು ಪೇಟೆಯ ಹತ್ತು ಸಮಸ್ತರ ಜಂಟಿ ಪ್ರಕಟನೆ ತಿಳಿಸಿದೆ