ಐಟಿ ದಾಳಿ: ಉಡುಪಿ ಮತ್ತು ಮಂಗಳೂರಿನ ‘ಆಭರಣ’ ಚಿನ್ನದ ಮಳಿಗೆ
ಮಂಗಳೂರು : ಕರಾವಳಿಯ ಅನೇಕ ಭಾಗಗಳಲ್ಲಿ ತನ್ನ ಶೋರೂಮ್ ಹೊಂದಿರುವ ಪ್ರಸಿದ್ಧ ಚಿನ್ನದ ಮಳಿಗೆ ಇದಾಗಿದ್ದು, ಹೊರ ಜಿಲ್ಲೆಗಳಲ್ಲೂ ಕೂಡ ಶಾಖೆಗಳನ್ನು ಹೊಂದಿದೆ.ಕರಾವಳಿಯ ಪ್ರಸಿದ್ಧ ‘ಆಭರಣ’ ಚಿನ್ನದ ಮಳಿಗೆಗಳ ಮೇಲೆ ಇಂದು ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕರಾವಳಿಯ ಪ್ರಸಿದ್ಧ ಆಭರಣ ಮಳಿಗೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳೂರಿನ ಕದ್ರಿ ಬಳಿಯ ಶಿವಭಾಗ್ನ ಆಭರಣ ಜ್ಯುವೆಲ್ಲರಿಯಲ್ಲಿ ಐಟಿ ಅಧಿಕಾರಿಗಳು ಬೆಳಗ್ಗೆಯಿಂದ ತಪಾಸಣೆ ನಡೆಸುತ್ತಿದ್ದಾರೆ. ಐದಾರು ಜನರ ಐಟಿ ಅಧಿಕಾರಿಗಳ […]
ಭಾರತದಲ್ಲಿ ಶೇ 10ರಷ್ಟು ಹೆಚ್ಚಳ : ವಿಶ್ವದಲ್ಲಿ ಚಿನ್ನಕ್ಕೆ ಬೇಡಿಕೆ ಕುಸಿತ
ನವದೆಹಲಿ: 2023ರ ಮೂರನೇ ತ್ರೈಮಾಸಿಕದಲ್ಲಿ ಜಾಗತಿಕವಾಗಿ ಚಿನ್ನದ ಬೇಡಿಕೆಯು ಶೇ 6ರಷ್ಟು ಕುಸಿದು 1,147.5 ಟನ್ಗಳಿಗೆ ತಲುಪಿದೆ ಎಂದು ವರ್ಲ್ಡ್ ಗೋಲ್ಡ್ ಕೌನ್ಸಿಲ್ (ಡಬ್ಲ್ಯುಜಿಸಿ) ಮಂಗಳವಾರ ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿಸಿದೆ. ಚಿನ್ನದ ಗಟ್ಟಿಗಳು ಮತ್ತು ನಾಣ್ಯಗಳ ಬೇಡಿಕೆ ಕಡಿಮೆಯಾಗಿರುವುದು ಮತ್ತು ಕೇಂದ್ರೀಯ ಬ್ಯಾಂಕುಗಳಿಂದ ಖರೀದಿ ಕಡಿಮೆಯಾದ ಹಿನ್ನೆಲೆಯಲ್ಲಿ ಚಿನ್ನಕ್ಕೆ ಬೇಡಿಕೆ ಇಳಿಮುಖವಾಗಿದೆ. 2023ರ ಮೂರನೇ ತ್ರೈಮಾಸಿಕದಲ್ಲಿ ವಿಶ್ವದಲ್ಲಿ ಚಿನ್ನದ ಬೇಡಿಕೆ ಕಡಿಮೆಯಾಗಿದೆ. ಜಾಗತಿಕವಾಗಿ ಚಿನ್ನದ ಗಟ್ಟಿ ಮತ್ತು ನಾಣ್ಯಗಳ ಬೇಡಿಕೆ ಮೂರನೇ ತ್ರೈಮಾಸಿಕದಲ್ಲಿ ಶೇಕಡಾ 14ರಷ್ಟು […]
ಈದ್ಗಾ ಮೈದಾನ : ಬೆಂಗಳೂರಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಹೈಕೋರ್ಟ್ ಷರತ್ತುಬದ್ಧ ಅನುಮತಿ
ಬೆಂಗಳೂರು: ರಾಜಧಾನಿ ಬೆಂಗಳೂರು ನಗರದ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಚಾಮರಾಜಪೇಟೆ ನಾಗರಿಕರ ಒಕ್ಕೂಟದಿಂದ ನವೆಂಬರ್ 1ರಿಂದ 3 ದಿನಗಳ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಹೈಕೋರ್ಟ್ ಷರತ್ತುಬದ್ಧ ಅನುಮತಿ ಕೊಟ್ಟಿದೆ.ಅಲ್ಲದೆ, ಈದ್ಗಾ ಮೈದಾನ ಬಳಕೆ ಮಾಡಲು ಒಂದು ವೇಳೆ ಕಾನೂನು ಅಡಚಣೆಗಳು ಉಂಟಾದಲ್ಲಿ ಅರ್ಜಿದಾರರ ಒಕ್ಕೂಟದಿಂದ ರಾಜ್ಯೋತ್ಸವ ಆಚರಣೆ ಮಾಡಲು ಜಿಲ್ಲಾಡಳಿತದಿಂದ ಪರ್ಯಾಯ ಮೈದಾನ ಒದಗಿಸಬೇಕು ಎಂದು ಆದೇಶದಲ್ಲಿ ನ್ಯಾಯಪೀಠ ಸ್ಪಷ್ಟ ನಿರ್ದೇನ ನೀಡಿದೆ. ಬೆಂಗಳೂರು ನಗರದ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ನವೆಂಬರ್ 1ರಿಂದ 3ರವರೆಗೆ ಕರ್ನಾಟಕ ರಾಜ್ಯೋತ್ಸವ […]
ರಾಜ್ಯೋತ್ಸವ ಪ್ರಶಸ್ತಿ: ಇಸ್ರೋ ಅಧ್ಯಕ್ಷ ಸೋಮನಾಥ್, ನಟರಾದ ಡಿಂಗ್ರಿ ನಾಗರಾಜ್, ಬ್ಯಾಂಕ್ ಜನಾರ್ದನ ಸೇರಿ 68 ಸಾಧಕರು
ಬೆಂಗಳೂರು: ಕನ್ನಡ ರಾಜ್ಯೋತ್ಸವದ ನಿಮಿತ್ತ ರಾಜ್ಯ ಸರ್ಕಾರದಿಂದ ಕೊಡ ಮಾಡುವ ರಾಜ್ಯೋತ್ಸವ ಪ್ರಶಸ್ತಿಗೆ ಈ ಬಾರಿ ಕಲೆ, ಸಾಹಿತ್ಯ, ವಿಜ್ಞಾನ, ಸಿನಿಮಾ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 68 ಸಾಧಕರಿಗೆ ಮತ್ತು 10 ಸಂಘ ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ತೀರ್ಮಾನ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ ತಿಳಿಸಿದ್ದಾರೆ. ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿನ 68 ಮಂದಿ ಸಾಧಕರು […]
ಮಿಜಾರುಗುತ್ತು ಆನಂದ ಆಳ್ವರು ೧೦೬ನೇ ವಯಸ್ಸಿನಲ್ಲಿ ವಿಧಿವಶ
ಮೂಡಬಿದಿರೆ : ವಿದ್ಯಾಗಿರಿಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಮೋಹನ್ ಆಳ್ವರ ತಂದೆ ಮಿಜಾರುಗುತ್ತು ಆನಂದ ಆಳ್ವ (106) ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ನಡೆಯುವ ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲೂ ಮುಂಚೂಣಿಯಲ್ಲಿ ಭಾಗವಹಿಸುವ ಕೆಲವೇ ಮಂದಿಗಳಲ್ಲಿ ಆನಂದ ಆಳ್ವರೂ ಒಬ್ಬರಾಗಿದ್ದಾರೆ. ಆನಂದ ಆಳ್ವ ಇಳಿ ವಯಸ್ಸಿನಲ್ಲೂ ಅತ್ಯಂತ ಕ್ರೀಯಾಶೀಲರಾಗಿ ಗುರುತಿಸಿಕೊಂಡಿದ್ದರು. ಪ್ರಗತಿಪರ ರೈತರೂ ಆಗಿದ್ದು 1979 ರಿಂದ 1989 ರವರೆಗೆ ತಮ್ಮ ವಿಶಾಲವಾದ ಭತ್ತದ ಗದ್ದೆಯಲ್ಲಿ ಕಂಬಳವನ್ನು ಪ್ರವೇಶ ಟಿಕೆಟ್‌ಗಳೊಂದಿಗೆ ಆಯೋಜಿಸಿದ್ದ ಕೀರ್ತಿ […]