ಹೈಕೋರ್ಟ್: ತೀರ್ಪು ಕಾಯ್ದಿರಿಸಿದ್ದು, ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ ಪೂರ್ಣ

ಬೆಂಗಳೂರು: ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿ ಒಂದು ವರ್ಷಕ್ಕಿಂತ ಹೆಚ್ಚಿನ ಸಮಯದಿಂದ ಜೈಲಿನಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶರಣರ ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್, ತೀರ್ಪು ಕಾಯ್ದಿರಿಸಿದೆ.ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶರಣರ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಹೈಕೋರ್ಟ್​ ತೀರ್ಪು ಕಾಯ್ದಿರಿಸಿತು.ಜಾಮೀನು ಕೋರಿ ಶಿವಮೂರ್ತಿ ಶರಣರು ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಧಾರವಾಡ ಪೀಠ ತೀರ್ಪು ಕಾಯ್ದಿರಿಸಿತು. […]

ಇಬ್ಬರು ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ: ಒಬ್ಬರು ಸಾಹಿತಿ, ಇನ್ನೊಬ್ಬರು ವಿಜ್ಞಾನಿ : ಚಾಮರಾಜನಗರ

ಚಾಮರಾಜನಗರ: ನವೆಂಬರ್ 1ರಂದು 50ನೇ ವರ್ಷದ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು,ಚಾಮರಾಜನಗರದ ಇಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದರೆ, ಕೊಪ್ಪಳ ಜಿಲ್ಲೆಯಲ್ಲಿ ಮೂವರು, ಬೆಳಗಾವಿ ಜಿಲ್ಲೆಯ ಇಬ್ಬರು, ವಿಜಯನಗರ ಜಿಲ್ಲೆಯಲ್ಲಿ ಒಬ್ಬರಿಗೆ ಪ್ರಶಸ್ತಿ ಸಿಕ್ಕಿದೆ. ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಗಣ್ಯರ ವಿವರ ಹೀಗಿದೆ.ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಇಂದು ಬೆಂಗಳೂರಿನಲ್ಲಿ ಘೋಷಿಸಿದರು.ಗಡಿಜಿಲ್ಲೆ ಚಾಮರಾಜನಗರದ ಇಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದರೆ, ಕೊಪ್ಪಳ ಜಿಲ್ಲೆಯಲ್ಲಿ ಮೂವರು, ಬೆಳಗಾವಿಯ […]

ಮಹತ್ವದ ಸಭೆ : ಬೆಂಗಳೂರು ಬಿಜೆಪಿ ಶಾಸಕರೊಂದಿಗೆ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಸಂಘಟನಾತ್ಮಕ ಹೋರಾಟ ಹಾಗೂ ಬರ ಅಧ್ಯಯನ ಪ್ರವಾಸದ ರೂಪುರೇಷೆ ಸಿದ್ಧಪಡಿಸುವ ಕುರಿತು ಪಕ್ಷದ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಸಲಾಯಿತು.ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟ ಹಾಗೂ ಬರ ಅಧ್ಯಯನ ಪ್ರವಾಸದ ರೂಪುರೇಷೆ ಸಿದ್ಧಪಡಿಸಲು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಪಾಲ್ಗೊಳ್ಳಲು ಯಡಿಯೂರಪ್ಪ ಬಿಜೆಪಿ ಕಚೇರಿಗೆ ಆಗಮಿಸುತ್ತಿದ್ದಂತೆಯೇ ಕಾರಿನ ಬಳಿಯೇ ಬಂದು ಬಿಜೆಪಿ ಶಾಸಕರು ಸ್ವಾಗತಿಸಿದರು. ಶಾಸಕ ಉದಯ್ ಗರುಡಾಚಾರ್ ಬಿಎಸ್​ವೈ ಕಾಲು ಮುಟ್ಟಿ […]

ಮಂಗಳೂರು: ನ.3 ರಂದು ಫಿಝಾ ನೆಕ್ಸಸ್ ಮಾಲ್ ನಲ್ಲಿ ಹರ್ಷದ ನೂತನ ಮಳಿಗೆ ಶುಭಾರಂಭ

ಮಂಗಳೂರು: ಮಂಗಳೂರಿನಲ್ಲಿ ಈಗಾಗಲೇ ಜನಮನ್ನಣೆಯನ್ನು ಪಡೆದಿರುವ ಹೆಸರಾಂತ ಶೋರೂಂ ಹರ್ಷ ಕಂಪೆನಿಯ ಮೂರನೇ ಮಳಿಗೆ ನಗರದ ಪಾಂಡೇಶ್ವರದಲ್ಲಿರುವ ಫಿಝಾ ನೆಕ್ಸಸ್ ಮಾಲ್‌ನಲ್ಲಿ ನ. 3ರಂದು ಶುಭಾರಂಭಗೊಳ್ಳಲಿದೆ. ಮಂಗಳೂರಿನಲ್ಲಿ ಗ್ರಾಹಕರ ಮನೆ ಮಾತಾಗಿರುವ ಹರ್ಷ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಹಲವು ಕಡೆಗಳಲ್ಲಿ ತನ್ನ ಶಾಖೆಯನ್ನು ವಿಸ್ತರಿಸಿಕೊಂಡಿದ್ದು, ಮಂಗಳೂರಿನಲ್ಲೇ ಮೂರನೇ ಮಳಿಗೆ ಶುಭಾರಂಭಗೊಳ್ಳುತ್ತಿದೆ. ನೂತನ ಮಳಿಗೆಯನ್ನು ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್ ಉದ್ಘಾಟಿಸಲಿದ್ದಾರೆ. ಶಾಸಕ ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ವಿನಯ್ […]

ಮಂಗಳೂರು: ಕಾರ್ಮೆಲ್ ಮ್ಯಾಟ್ರಿಮೋನಿಯಲ್ ಅಪ್ಲಿಕೇಶನ್ ಉದ್ಘಾಟನೆ

ಮಂಗಳೂರು: ಆಫ್ ಲೈನ್ ನಲ್ಲಿ ಲಭ್ಯವಿದ್ದ ಕಾರ್ಮೆಲ್ ಮ್ಯಾಟ್ರಿಮೋನಿಯಲ್ ಅಪ್ಲಿಕೇಶನ್ ಇದೀಗ ಆನ್ ಲೈನ್ ನಲ್ಲಿ ಲಭ್ಯವಿದೆ. ಅಕ್ಟೋಬರ್ 25 ಕಾರ್ಮೆಲ್ ಹಿಲ್‌ನ ಇನ್‌ಫಾಂಟ್ ಜೀಸಸ್ ಶ್ರೈನ್‌ ನ ಓಯಸಿಸ್ ರಿಟ್ರೀಟ್‌ನಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಎಮೆರಿಟಸ್ ಡಾ ಅಲೋಶಿಯಸ್ ಪಾವ್ಲ್ ಡಿ’ಸೋಜಾ ಅವರು ಅಪ್ಲಿಕೇಶನ್ ಅನ್ನು ಅಧಿಕೃತವಾಗಿ ಉದ್ಘಾಟಿಸಿದರು. ಗೂಗಲ್ ಪ್ಲೇ ನಲ್ಲಿ ಈ ಅಪ್ಲಿಕೇಶನ್ ಲಭ್ಯವಿದೆ. ಸಂತ ಜೋಸೆಫರ ಮಠದ ಸುಪೀರಿಯರ್ ಫಾ. ಮೆಲ್ವಿನ್ ಡಿ’ಕುನ್ಹಾ, ಇನ್ಫೆಂಟ್ ಜೀಸಸ್ ಶ್ರೈನ್ ನ ನಿರ್ದೇಶಕ ಫಾ. […]