ನಾಳೆಯಿಂದ ಭಕ್ತರಿಗೆ ದರ್ಶನಭಾಗ್ಯ: ಇಂದು ಮಧ್ಯಾಹ್ನ ಹಾಸನಾಂಬೆ ದೇವಸ್ಥಾನದ ಬಾಗಿಲು ಓಪನ್

ಹಾಸನ: ಇಂದು ಮಧ್ಯಾಹ್ನ 12 ಗಂಟೆಗೆ ದೇವಸ್ಥಾನದ ಬಾಗಿಲು ತೆರೆಯಲಿದ್ದು, ಜಿಲ್ಲಾಡಳಿತ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಈ ವರ್ಷ ಒಟ್ಟು 14 ದಿನ ದೇಗುಲದ ಬಾಗಿಲು ತೆರೆದಿರಲಿದೆ. ಮೊದಲ ಹಾಗೂ ಕೊನೆಯ ದಿನವನ್ನು ಹೊರತುಪಡಿಸಿ ಉಳಿದ 12 ದಿನಗಳ ಕಾಲ 24 ಗಂಟೆಯೂ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.ವರ್ಷಕ್ಕೊಮ್ಮೆ ಬಾಗಿಲು ತೆರೆದು ಭಕ್ತರಿಗೆ ದರ್ಶನ ಭಾಗ್ಯ ಕರುಣಿಸುವ ಹಾಸನದ ಅಧಿದೇವತೆ ಮಾತೆ ಶ್ರೀ ಹಾಸನಾಂಬೆ ದರ್ಶನೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ.ಮಧ್ಯಾಹ್ನ 12 ಗಂಟೆಗೆ ಶ್ರೀ ಹಾಸನಾಂಬೆ ದೇವಸ್ಥಾನದ […]
ಗ್ಯಾಂಗ್ಲಿಯಾ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಗೆ ಪ್ರತಿಷ್ಠಿತ ಪ್ರಾಮಿಸಿಂಗ್ ಅಂಡ್ ಇನ್ನೋವೆಟಿವ್ ಟೆಕ್ನಾಲಜಿ ಕಂಪನಿ ಪ್ರಶಸ್ತಿ ಗರಿ

ಮಣಿಪಾಲ: ಕರ್ನಾಟಕ ಸರಕಾರ-ಬಯೋ ಇನ್ಕುಬೇಟರ್ ನಲ್ಲಿನ ಗ್ಯಾಂಗ್ಲಿಯಾ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಗೆ “ಫ್ಯೂಚರಿಸ್ಟಿಕ್ ಪ್ರಾಡಕ್ಟ್ ಡೆವಲಪ್‌ಮೆಂಟ್ ಮತ್ತು ರಿಸರ್ಚ್” ವಿಭಾಗದಲ್ಲಿ ಪ್ರತಿಷ್ಠಿತ “ಪ್ರಾಮಿಸಿಂಗ್ ಅಂಡ್ ಇನ್ನೋವೆಟಿವ್ ಟೆಕ್ನಾಲಜಿ ಕಂಪನಿ- 2023″ ಎಂಬ ವಿಶಿಷ್ಟ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಉದ್ಯಮಶೀಲತೆ, ನಾವೀನ್ಯತೆ ಮತ್ತು ವಾಣಿಜ್ಯ ಹಾಗೂ ವ್ಯಾಪಾರ ಕ್ಷೇತ್ರಗಳಲ್ಲಿ ನಾಯಕತ್ವ, ಮತ್ತು ಶ್ರೇಷ್ಠತೆಯನ್ನು ಗುರುತಿಸುವ “ದಿ ಗ್ರೇಟ್ ಇಂಡಿಯನ್ ಎಂಟರ್ ಪ್ರೆನ್ಯೂರ್‌ಶಿಪ್, ಡಿಸೈನ್, ಬ್ಯುಸಿನೆಸ್ ಎಂಡ್ ಸ್ಟಾರ್ಟ್ ಅಪ್ ಅವಾರ್ಡ್ಸ್ ಮತ್ತು ಕಾನ್ಫರೆನ್ಸ್ 2023 ರ 22ನೇ ಆವೃತಿಯಲ್ಲಿ […]
ನ.4-5 ರಂದು ನಡೆಯುವ ಅಖಿಲ ಭಾರತ ಕೊಂಕಣಿ ಸಮ್ಮೇಳನಾಧ್ಯಕ್ಷರಾಗಿ ಹೇಮಾ ನಾಯಕ್ ಆಯ್ಕೆ

ಮಂಗಳೂರು: ನವೆಂಬರ್ 4 ಮತ್ತು 5 ರಂದು ವಿಶ್ವ ಕೊಂಕಣಿ ಕೇಂದ್ರ, ಶಕ್ತಿನಗರ ಇಲ್ಲಿ 25 ನೇ ಅಖಿಲ ಭಾರತೀಯ ಕೊಂಕಣಿ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಎರಡೂ ದಿನ ಪರಿಸಂವಾದ, ಸಾಹಿತ್ಯ ಸಾದರೀಕರಣ, ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಕೊಂಕಣಿ ಭಾಷೆ ಮತ್ತು ಸಾಹಿತ್ಯದ ಹಬ್ಬ ನಡೆಯಲಿದೆ. ಖ್ಯಾತ ಹಿಂದಿ ಕವಿ, ವಿಮರ್ಷಕ ವಿದ್ವಾಂಸ ಉದಯನ್ ವಾಜಪೇಯಿ 4 ರಂದು ಪೂರ್ವಾಹ್ನ 10 ಕ್ಕೆ ಸಮ್ಮೇಳನ ಉದ್ಘಾಟಿಸಿ ‘ಸಾಹಿತ್ಯ ಮತ್ತು ಬದುಕು’ ಈ ಕುರಿತು ಶಿಖರೋಪನ್ಯಾಸ ನೀಡಲಿದ್ದಾರೆ ಎಂದು ಸಮ್ಮೇಳನದ […]
ತನಿಖಾ ಸಂಸ್ಥೆಯ ಮುಂದೆ ಹಾಜರಾಗಲು ಅರವಿಂದ್ ಕೇಜ್ರಿವಾಲ್ ನಕಾರ

ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗುವುದಿಲ್ಲ ಮತ್ತು ಚುನಾವಣಾ ಪ್ರಚಾರಕ್ಕಾಗಿ ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ. ಆಮ್ ಆದ್ಮಿ ಪಕ್ಷದ ಮೂಲಗಳ ಪ್ರಕಾರ ಕೇಜ್ರಿವಾಲ್ ಇಡಿಗೆ ಪತ್ರ ಬರೆದಿದ್ದು, ತನಿಖಾ ಸಂಸ್ಥೆಯು ವಿಚಾರಣೆಗೆ ಕರೆದಿರುವ ತನ್ನ ನೋಟಿಸ್ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ. ಇದು ಕಾನೂನುಬಾಹಿರ ಮತ್ತು ರಾಜಕೀಯ ಪ್ರೇರಿತ ಎಂದು ಹೇಳಿದ್ದಾರೆ. ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯವು ಕೇಜ್ರಿವಾಲ್ ಅವರನ್ನು ಕರೆಸಿತ್ತು. […]
ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ವಾರ್ಷಿಕ ಮಹಾಸಭೆ

ಮಂಗಳೂರು: ಭೂ ಸಂಪನ್ಮೂಲದ ಸದ್ಭಳಕೆ ಮಾಡಿಕೊಳ್ಳುವಂತೆ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷೆ ಹಾಗೂ ಬ್ಯಾಂಕ್ ಆಫ್ ಬರೋಡದ ಮಂಗಳೂರು ವಲಯದ ಮುಖ್ಯಸ್ಥೆ ಗಾಯತ್ರಿ ಆರ್ ಕರೆ ನೀಡಿದರು. ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ)ದ 32 ನೇ ಸದಸ್ಯರ ವಾರ್ಷಿಕ ಮಹಾಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಭಾರತ ದೇಶದಲ್ಲಿ ಅತ್ಯಂತ ವಿಸ್ತೀರ್ಣವಾದ ಕೃಷಿ ಭೂಮಿ ಇದ್ದು ನಮ್ಮ ಹಿರಿಯ ಕೃಷಿಕರಾಗಿದ್ದ ಹಿಂದಿನ ತಲೆಮಾರಿನವರಾದ ಕೃಷಿಕ ಬಳಗದವರು ಆರೋಗ್ಯಪೂರ್ಣವಾದ ಆಹಾರ ಪದಾರ್ಥಗಳನ್ನು ಬೆಳೆಸುತ್ತಿದ್ದು ಭಾರತೀಯರು ಆರೋಗ್ಯವಂತರಾಗಿರಲು ಇದೇ ಮುಖ್ಯ […]