ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಅಧ್ಯಕ್ಷ ಶ್ರೀಕಾಂತ್ ಎಂ.ಭಂಡಿವಾಡ್ ಕೃಷ್ಣ ಮಠಕ್ಕೆ ಭೇಟಿ

ಉಡುಪಿ: ರಾಷ್ಟ್ರದ ಪ್ರಮುಖ ಗ್ರಾಮೀಣ ಬ್ಯಾಂಕ್ ಆದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಅಧ್ಯಕ್ಷ ಶ್ರೀಕಾಂತ್ ಎಂ ಭಂಡಿವಾಡ್ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನ ಪಡೆದರು. ಪರ್ಯಾಯ ಶ್ರೀ ಕೃಷ್ಣಾಪುರ ಮಠದ ದಿವಾನ ವರದರಾಜ ಭಟ್ ಅಧ್ಯಕ್ಷರಿಗೆ ಶಾಲು ಹೊದಿಸಿ, ಪ್ರಸಾದ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಬ್ಯಾಂಕಿನ ಕೇಂದ್ರ ಕಛೇರಿಯ ಮುಖ್ಯ ಪ್ರಬಂಧಕ ಉಲ್ಲಾಸ್ ಗುನಗಾ ಹಾಗೂ ಉಡುಪಿ ಶಾಖೆಯ ಪ್ರಬಂಧಕ ರಾಘವೇಂದ್ರ ಉಪಾಧ್ಯ ಉಪಸ್ಥಿತರಿದ್ದರು.

ನ.5 ರಂದು ಕಾರ್ಕಳ ಜೋಡುರಸ್ತೆಯಲ್ಲಿ A1 ಸೂಪರ್ ಮಾರ್ಕೆಟ್ ಶುಭಾರಂಭ

ಕಾರ್ಕಳ: ಇಲ್ಲಿನ ಜೋಡುರಸ್ತೆಯಲ್ಲಿರುವ ದುರ್ಗಾ ಪ್ರಸಾದ್ ಕಾಂಪ್ಲೆಕ್ಸ್ ನಲ್ಲಿ ನ.5 ರಂದು ಬೆಳಿಗ್ಗೆ10 ಗಂಟೆಗೆ A1 ಸೂಪರ್ ಮಾರ್ಕೆಟ್ ಶುಭಾರಂಭಗೊಳ್ಳಲಿದ್ದು, ಗೃಹ ಬಳಕೆಯ ಅತ್ಯುತ್ತಮ ಗುಣಮಟ್ಟದ ವಸ್ತುಗಳು ಒಂದೇ ಸೂರಿನಡಿ ಲಭ್ಯವಾಗಲಿದೆ. ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸೂಪರ್ ಮಾರ್ಕೆಟ್ ಅನ್ನು ಉದ್ಘಾಟಿಸಲಿದ್ದು, ತುಳು ಚಿತ್ರನಟ ಅರ್ಜುನ್ ಕಾಪಿಕಾಡ್, ಕುಕ್ಕುಂದೂರು ಗ್ರಾ.ಪಂ ಅಧ್ಯಕ್ಷೆ ಉಷಾ ಕೆ, ಉದ್ಯಮಿಗಳಾದ ನವೀನ ಚಂದ್ರ ಶೆಟ್ಟಿ ಮುಂಬೈ, ಮುನಿಯಾಲು ಗಣೇಶ್ ನಾಯಕ್ ಹಾಗೂ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಕಾರ್ಕಳ ಶಾಖೆಯ […]

ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಜಿಲ್ಲೆಗೆ ನೀಡಿರುವ ಅನುದಾನವನ್ನು ಪೂರ್ಣಪ್ರಮಾಣದಲ್ಲಿ ಅನುಷ್ಠಾನಗೊಳಿಸಿ: ಡಾ. ಎಂ.ಟಿ. ರೇಜು

ಉಡುಪಿ: ಸರಕಾರ ಜನ ಸಾಮಾನ್ಯರ ಶ್ರೇಯೋಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಜಿಲ್ಲೆಗೆ ನೀಡಿರುವ ಅನುದಾನವನ್ನು ಸಮರ್ಪಕವಾಗಿ ಪೂರ್ಣ ಪ್ರಮಾಣದಲ್ಲಿ ಬಳಸಿ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ ರೇಜು ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಕೆ.ಡಿ.ಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸ್ತುತ ಸಾಲಿನ ಬಜೆಟ್‌ನಲ್ಲಿ ಘೋಷಿಸಿರುವ ಅಭಿವೃದ್ಧಿ ಕಾರ್ಯಗಳು, ಯೋಜನೆಗಳು ಹಾಗೂ ಕಾರ್ಯಕ್ರಮಗಳ ಕ್ರಿಯಾ […]

ನ.4 ರಂದು ಮಣಿಪಾಲ್ ಮಹಿಳಾ ಸಮಾಜದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿವಿಧ ಕಾರ್ಯಕ್ರಮ ಉದ್ಘಾಟನೆ

ಮಣಿಪಾಲ: ನ.4 ರಂದು ಎಂಜಿಎಂ ಕಾಲೇಜಿನ ಗೀತಾಂಜಲಿ ಹಾಲ್ ನಲ್ಲಿ ಬೆಳಗ್ಗೆ 10 ಗಂಟೆಗೆ ಮಣಿಪಾಲ್ ಮಹಿಳಾ ಸಮಾಜದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿವಿಧ ಕಾರ್ಯಕ್ರಮ ಉದ್ಘಾಟನೆ. ಮಣಿಪಾಲ್ ಮಹಿಳಾ ಸಮಾಜದ ಅಧ್ಯಕ್ಷೆ ಡಾ. ಗಿರಿಜಾ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ, ಗೌರವ ಅತಿಥಿಗಳಾಗಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಎಂಜಿಎಂ ಕಾಲೇಜಿನ ಪ್ರಾಶುಂಪಾಲ ಪ್ರೊ.ಲಕ್ಷ್ಮೀ ನಾರಾಯಣ ಕಾರಂತ್, ಆದರ್ಶ್ ಆಸ್ಪತ್ರೆಯ ನಿರ್ದೇಶಕಿ ವಿಮಲಾ ಚಂದ್ರಶೇಖರ್ ಭಾಗವಹಿಸಲಿದ್ದಾರೆ. ನ.5 ರಂದು ಸಂಜೆ 6.30 […]

ಕಾರ್ಕಳ: ವ್ಯಕ್ತಿ ನಾಪತ್ತೆ

ಉಡುಪಿ: ಕಾರ್ಕಳ ನಿವಾಸಿ ರಮೇಶ್ ಪೂಜಾರಿ (65) ಎಂಬ ವ್ಯಕ್ತಿಯು ಅಕ್ಟೋಬರ್ 16 ರಂದು ಮನೆಯಿಂದಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.