ಅಂಗಡಿಮಾರ್ ಕೃಷ್ಣ ಭಟ್ ನಿಧನ

ಉಡುಪಿ: ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರ ಪೂರ್ವಾಶ್ರಮದ ತಂದೆ ಅಂಗಡಿಮಾರ್ ಕೃಷ್ಣ ಭಟ್ ಅವರು ಇಹಲೋಕ ತ್ಯಜಿಸಿದ್ದಾರೆ. ಶತಾಯುಷಿಗಳಾಗಿದ್ದ ಇವರು ಸಾಂಪ್ರದಾಯಿಕ ಕೃಷಿ, ವೈದಿಕ ವಿದ್ವಾಂಸ, ತುಳು ಲಿಪಿಕಾರ ಹಾಗೂ ಪಂಚಾಂಗಕರ್ತರಾಗಿ ಸಾರಸ್ವತಲೋಕಕ್ಕೆ ಅಪೂರ್ವ ಕೊಡುಗೆ ನೀಡಿದ್ದರು. ತಮ್ಮ ಜೀವಮಾನ ಸಾಧನೆಗಾಗಿ ಅನೇಕಾನೇಕ ಗೌರವಾಭಿನಂದನೆಗಳಿಗೆ ಪಾತ್ರರಾಗಿದ್ದರು. ಪೇಜಾವರ ಮಠದ ಪೂಜ್ಯ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸೇರಿದಂತೆ 5 ಮಂದಿ ಪುತ್ರರು, 7 ಮಂದಿ ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

ಡಿಸೆಂಬರ್ 14 ರಿಂದ 17ರ ವರೆಗೆ ಆಳ್ವಾಸ್ ವಿರಾಸತ್– 2023 ಆಯೋಜನೆ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ‘ಆಳ್ವಾಸ್ ವಿರಾಸತ್– 2023’ ಡಿಸೆಂಬರ್ 14 ರಿಂದ 17ರ ವರೆಗೆ ಮೂಡಬಿದಿರೆಯಲ್ಲಿ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಅವರು ಸೋಮವಾರದಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಆಳ್ವಾಸ್ ವಿರಾಸತ್‌ಗೆ 29 ವರ್ಷಗಳಾಗಿದ್ದು, ಅಪೂರ್ವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಿ, ಸಂಸ್ಕೃತಿ ಪ್ರಿಯರಿಗೆ ರಸದೌತಣ ನೀಡಲು ಯೋಚಿಸಲಾಗಿದೆ. ಇದಕ್ಕಾಗಿ ಸಿದ್ಧತೆ ನಡೆಯುತ್ತಿದೆ. ಪ್ರತಿದಿನ ಸಂಜೆ 6 ಗಂಟೆಯಿಂದ ರಾತ್ರಿ 9.30ರ ವರೆಗೆ ಕಾರ್ಯಕ್ರಮ ನಡೆಯಲಿದೆ. ಸಭಾಂಗಣದಲ್ಲಿ ಸುಮಾರು 50 […]

ಮನೆ ಮಹಡಿಯಿಂದ ಬಿದ್ದು ಬಾಲಕಿ ಮೃತ್ಯು

ಉಡುಪಿ: ಮಣಿಪಾಲ ಸರಳೇಬೆಟ್ಟುವಿನಲ್ಲಿರುವ ಖಾಸಗಿ ಅಪಾರ್ಟ್ ಮೆಂಟಿನ ಮಹಡಿಯಿಂದ ಬಿದ್ದು ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಹೆರ್ಗ ಗ್ರಾಮದ ಕೃತಿಕಾ ಎಂಬುವವರ ಮಗಳು ಪ್ರಜ್ಞಾ (13) ಮೃತಪಟ್ಟ ಬಾಲಕಿ. ಭಾನುವಾರ ಸಾಯಂಕಾಲ ಮನೆ ಮಹಡಿಯಿಂದ ಬಿದ್ದವಳನ್ನು ಚಿಕಿತ್ಸೆಗಾಗಿ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿರುತ್ತಾಳೆ. ಈ ಬಗ್ಗೆ ಮಣಿಪಾಲ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಣಿ-ಭೂವಿಜ್ಞಾನ ಇಲಾಖಾಧಿಕಾರಿ ಹತ್ಯೆ ಪ್ರಕರಣ: ಘಟನೆಗೂ ತನಗೂ ಸಂಬಂಧವಿಲ್ಲ ಎಂದು ಶಾಸಕ ಮುನಿರತ್ನ ಸ್ಪಷ್ಟನೆ

ಬೆಂಗಳೂರು: ಶನಿವಾರ ರಾತ್ರಿ ಬೆಂಗಳೂರಿನ ನಿವಾಸದಲ್ಲಿ ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಪ್ರಕರಣ ರಾಜ್ಯದಲ್ಲಿ ಚರ್ಚೆ ಹುಟ್ಟುಹಾಕಿದೆ. ರಿಯಲ್ ಎಸ್ಟೇಟ್ ಮಾಫಿಯಾ ಸೇರಿದಂತೆ ರಾಜಕಾಲುವೆ ಒತ್ತುವರಿ ವಿಚಾರಗಳು ಇದೀಗ ಮುನ್ನಲೆಗೆ ಬರುತ್ತಿವೆ. ಇದೀಗ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರ ಹೆಸರು ಪ್ರಕರಣಕ್ಕೆ ಥಳಕು ಹಾಕಿಕೊಂಡಿದೆ. ಪ್ರಕರಣದಲ್ಲಿ ಮುನಿರತ್ನ ಅವರ ವಿಚಾರಣೆ ಮಾಡಬೇಕು ಎಂದು ಕೆಪಿಸಿಸಿ ಕಾನೂನು ಘಟಕದ ಮುಖಂಡ ಸೂರ್ಯ ಮುಕುಂದರಾಜ್ ಆಗ್ರಹಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ […]

ನ.8 ರಂದು ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

ಉಡುಪಿ : ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ನವೆಂಬರ್ 8 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಉಡುಪಿ ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ ನಡೆಸಲಿದ್ದಾರೆ. ಉಳಿದ ದಿನಗಳಲ್ಲಿಯೂ ಸಹ ಸಾರ್ವಜನಿಕರು ಅಹವಾಲುಗಳಿದ್ದಲ್ಲಿ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರುದೂ.ಸಂಖ್ಯೆ: 0820-2958881, ಮೊ.ನಂ: 9364062581, ಪೊಲೀಸ್ ನಿರೀಕ್ಷಕರು-1 ದೂ.ಸಂಖ್ಯೆ: 0820-2536661,ಮೊ.ನಂ: 9364062695 ಹಾಗೂ ಪೊಲೀಸ್ […]