ಠಾಣಾ ವಿಚಾರಣೆಗೆ ಹಾಜರಾದ ನಟ ದರ್ಶನ್ : ಮಹಿಳೆಗೆ ಸಾಕು ನಾಯಿ ಕಚ್ಚಿದ ಪ್ರಕರಣ
ಬೆಂಗಳೂರು: ದರ್ಶನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡ ಬಳಿಕ ಮೂರು ದಿನದೊಳಗೆ ಠಾಣೆಗೆ ಬಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ತಿಳಿಸಿದ್ದರು. ಆದರೆ ದರ್ಶನ್ ಹಾಜರಾಗಿರಲಿಲ್ಲ. ಬಳಿಕ ಎರಡನೇ ಬಾರಿ ನೋಟಿಸ್ ಜಾರಿ ಮಾಡಿದ್ದು ಇಂದು ಬೆಳಿಗ್ಗೆ 11.30ಕ್ಕೆ ಠಾಣೆಗೆ ಬರುವಂತೆ ಸೂಚಿಸಿದ್ದರು.ಮಹಿಳೆಗೆ ಸಾಕುನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಸೂಚಿಸಿ ಆರ್.ಆರ್.ನಗರ ಠಾಣೆ ಪೊಲೀಸರು ನಟ ದರ್ಶನ್ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಇಂದು ಅವರು ಹಾಜರಾದರು.ಮಹಿಳೆಗೆ ಸಾಕು ನಾಯಿ ಕಚ್ಚಿದ ಪ್ರಕರಣ ಸಂಬಂಧ ನಟ […]
ರಾಜ್ಯ ಬಿಜೆಪಿ ನೊಗ ಹೊತ್ತ ವಿಜಯೇಂದ್ರ : ಯುವ ನಾಯಕನಿಗೆ ಹಿರಿಯರ ಬೆಂಬಲ
ಬೆಂಗಳೂರು: ರಾಜ್ಯ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಶಿಕಾರಿಪುರ ಕ್ಷೇತ್ರದ ಶಾಸಕ ಹಾಗು ರಾಜ್ಯ ಬಿಜೆಪಿಯ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪನವರ ಪುತ್ರ ಬಿ.ವೈ.ವಿಜಯೇಂದ್ರ ಇಂದು ಅಧಿಕಾರ ಸ್ವೀಕರಿಸಿದರು. ಈ ಮೂಲಕ ರಾಜ್ಯ ಬಿಜೆಪಿಗೆ ಯುವ ನೇತಾರನ ಸಾರಥ್ಯ ಸಿಕ್ಕಿದೆ. ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಿತು. ರಾಜ್ಯಾಧ್ಯಕ್ಷರ ಕಚೇರಿಯಲ್ಲಿ ಹಿರಿಯರ ಆಶೀರ್ವಾದ ಪಡೆದು, ನಳೀನ್ ಕುಮಾರ್ ಕಟೀಲ್ ಅವರಿಂದ ವಿಜಯೇಂದ್ರ ಅಧಿಕಾರ ಸ್ವೀಕರಿಸಿದರು.ನಿಕಟಪೂರ್ವ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಂದ ಅಧಿಕಾರ ಸ್ವೀಕರಿಸಿ […]
ಐಶ್ವರ್ಯಾ ರೈ, ಅನುಷ್ಕಾ ಶೆಟ್ಟಿ ಭಾಗಿ : ಬೆಂಗಳೂರು ಕಂಬಳಕ್ಕೆ ದಿನಗಣನೆ
ಬೆಂಗಳೂರು: ಕಂಬಳ ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಕರಾವಳಿಯ ಸಮಸ್ತ ಸಮುದಾಯದವರು ಒಂದೆಡೆ ಒಗ್ಗಟ್ಟಾಗಿ ಸೇರುವ ಬೃಹತ್ ವೇದಿಕೆ ಇದಾಗಲಿದೆ. ಕರಾವಳಿಯ ವಿವಿಧ ಭಾಷೆ – ಜಾತಿಗಳ 50ಕ್ಕೂ ಅಧಿಕ ಸಂಘಟನೆಗಳು ತಯಾರಿ ನಡೆಸುತ್ತಿವೆ. ಬೆಂಗಳೂರು ಕಂಬಳ ಬೆಂಗಳೂರಿನ ಅರಮನೆ ಮೈದಾನದ 70 ಎಕರೆ ಜಾಗದಲ್ಲಿ ನಡೆಯಲಿದೆ. ‘ಬೆಂಗಳೂರು ಕಂಬಳ ನಮ್ಮ ಕಂಬಳ’ ಎಂಬ ಥೀಮ್ ಸಾಂಗ್ ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗಿದೆ. ಈ ಥೀಮ್ ಸಾಂಗ್ಗೆ ವಿ.ಮನೋಹರ್ ಸಾಹಿತ್ಯ, ಗುರುಕಿರಣ್ ಸಂಗೀತ ಸಂಯೋಜನೆ, ಮಣಿಕಾಂತ್ ಕದ್ರಿ ಪ್ರೋಗ್ರಾಮಿಂಗ್‌ನಲ್ಲಿ ಮೂಡಿ […]
ಶ್ರೀನಗರದಲ್ಲಿ ಬೃಹತ್ ಕಂದಕಕ್ಕೆ ಉರುಳಿದ ಬಸ್ 36 ಜನ ಸಾವು, 19 ಮಂದಿಗೆ ಗಾಯ
ಶ್ರೀನಗರ (ಜಮ್ಮು ಮತ್ತು ಕಾಶ್ಮೀರ) : ಅಪಘಾತದಲ್ಲಿ ಕನಿಷ್ಠ 36 ಸಾವನ್ನಪ್ಪಿದ್ದು, 19 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದ ಕಾರಣ ಇನ್ನೂ ತಿಳಿದುಬಂದಿಲ್ಲ. ಓವರ್‌ಲೋಡ್‌ನಿಂದ ಅಪಘಾತ ಸಂಭವಿಸಿದೆಯೇ ಅಥವಾ ಚಾಲಕನ ಅತಿಯಾದ ವೇಗದಿಂದ ನಿಯಂತ್ರಣ ಕಳೆದುಕೊಂಡು ಅವಘಡ ನಡೆದಿದೆಯಾ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್ಸೊಂದು ಕಂದಕಕ್ಕೆ ಉರುಳಿರುವ ಘಟನೆ ಜಮ್ಮು ಮತ್ತು ಕಾಶ್ಮೀರದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ. ಇಲ್ಲಿನ ದೋಡಾ ಜಿಲ್ಲೆಯ ಅಸ್ಸರ್ ಎಂಬಲ್ಲಿ ಬಸ್ ಕಂದಕಕ್ಕೆ ಉರುಳಿದ್ದು, 55 ಮಂದಿ ಪ್ರಯಾಣಿಸುತ್ತಿದ್ದರು […]
ಕೋಟದಲ್ಲಿ ದ್ವಿತೀಯ ದಿನದ ಜಿಲ್ಲಾ ಸಹಕಾರಿ ಸಪ್ತಾಹ ಮತ್ತು ಉಡುಪಿxpress ‘ಸಹಕಾರ ಸೌರಭ‘ ವಿಶೇಷ ಸಂಚಿಕೆ ಬಿಡುಗಡೆ
ಕೋಟದಲ್ಲಿ ದ್ವಿತೀಯ ದಿನದ ಜಿಲ್ಲಾ ಸಹಕಾರಿ ಸಪ್ತಾಹ ಕಾರ್ಯಕ್ರಮ ವ್ಯಕ್ತಿತ್ವ ವಿಕಸನ ಶಿಬಿರ, ಸಾಲೇತರ ಸಹಕಾರಿ ಸಂಸ್ಥೆಗಳ ಪುನಶ್ಚೇತನ ಕುರಿತು ಕಾರ್‍ಯಗಾರ ಕೋಟ, ನ.೧೫: ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರಿ ಯೂನಿಯನ್, ಜಿಲ್ಲಾ ಸಹಕಾರಿ ಇಲಾಖೆ, ಕೋಟ ಸಹಕಾರಿ ವ್ಯಾವಸಾಯಿಕ ಸಂಘ ಆಶ್ರಯದಲ್ಲಿ, ಸಹಕಾರಿ ಸಪ್ತಾಹ ಪ್ರಯುಕ್ತ ದ್ವಿತೀಯ ದಿನದ ಉಡುಪಿ ಜಿಲ್ಲಾ ಮಟ್ಟದ ಕಾರ್‍ಯಕ್ರಮ ಕೋಟ ಸಹಕಾರಿ ವ್ಯಾವಸಾಯಿಕ ಸಂಘದಲ್ಲಿ ನ.೧೫ರಂದು ಜರಗಿತು. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಕಾರ್ಯಕ್ರಮ […]