ಹೆಮ್ಮಾಡಿ: ಜನತಾ ಕಾಲೇಜು ವಿದ್ಯಾರ್ಥಿನಿ ಛಾಯಾ ಸಿ. ಪೂಜಾರಿ ರಾಷ್ಟ್ರ ಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆ

ಹೆಮ್ಮಾಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿಪೂರ್ವ ಶಿಕ್ಷಣ ವಿಭಾಗ)ಯು ಚಾಮರಾಜನಗರದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದು ವಿಜೇತಳಾದ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಛಾಯಾ ಸಿ.ಪೂಜಾರಿ ತಮಿಳುನಾಡು ರಾಜ್ಯದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ. ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

ನೇಜಾರು ಹತ್ಯೆ ಪ್ರಕರಣ: ಉನ್ನತ ಮಟ್ಟದ ತನಿಖೆಗೆ ಮುಖ್ಯಮಂತ್ರಿಗಳಿಗೆ ಮನವಿ

ಉಡುಪಿ: ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ಕು ಜನರ ಹತ್ಯೆ ಪ್ರಕರಣದಲ್ಲಿ ಉನ್ನತ ಮಟ್ಟದ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲು ವಿಧಾನ ಪರಿಷತ್ ಸದಸ್ಯರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಿಗೆ ಉಡುಪಿಯ ಕಾಂಗ್ರೆಸ್ ಮುಖಂಡರು ಕೆ.ಪಿ.ಸಿ.ಸಿ ಅಲ್ಪಸಂಖ್ಯಾತ ರಾಜ್ಯ ಕಾರ್ಯದರ್ಶಿಗಳಾದ ಫಾರೂಕ್ ಚಂದ್ರನಗರ ಹಾಗೂ ಹಸನ್ ಶೇಕ್ ಮಣಿಪುರ ಕೆ.ಪಿ.ಸಿ.ಸಿ ಕಚೇರಿ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಅಲ್ಪ ಸಂಖ್ಯಾತ ಸಭೆಯಲ್ಲಿ ನಿರ್ಣಯಿಸಿದ್ದಾರೆ. ಆರೋಪಿಯ ಕೃತ್ಯವು ಸಮಾಜವನ್ನು ಬೆಚ್ಚಿ ಬೀಳಿಸುವಂತಾಗಿದೆ. ಆರೋಪಿಯ […]

ನ. 22 ರಿಂದ 28 ರವರೆಗೆ ಈಶಾ ವತಿಯಿಂದ 7 ದಿನಗಳ ಇನ್ನರ್ ಇಂಜಿನಿಯರಿಂಗ್ ಕಾರ್ಯಕ್ರಮ

ಉಡುಪಿ: 7 ದಿನಗಳ ಇನ್ನರ್ ಇಂಜಿನಿಯರಿಂಗ್ ಕಾರ್ಯಕ್ರಮವನ್ನು ನ. 22 ರಿಂದ 28 ರವರೆಗೆ ಬೆಳಿಗ್ಗೆ 6 ರಿಂದ 9 ರವರೆಗೆ ಅಥವಾಸಂಜೆ 6 ರಿಂದ 9 ರವರೆಗೆ, ಭಾನುವಾರದಂದು ಬೆಳಿಗ್ಗೆ 7 ರಿಂದ 5 ರವರೆಗೆ ಅಜ್ಜರಕಾಡು ಮಹಿಳಾ ಸಮಾಜ ಹಾಲ್ ನಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮವು ಕನ್ನಡದಲ್ಲಿರಲಿದೆ. ನೋಂದಾವಣೆ:bit.ly/ieudupi ಹೆಚ್ಚಿನ ವಿವರಗಳಿಗೆ ಕರೆ ಮಾಡಿ: +91 8277164555+91 8548027807

ಕುಂಬಳೆ: ಅನಂತ ಪದ್ಮನಾಭ ದೇವಸ್ಥಾನದಲ್ಲಿ ಮರಿ ಮೊಸಳೆ ಪ್ರತ್ಯಕ್ಷ ಹಿನ್ನೆಲೆ ನ.17 ರಂದು ಮಕರ ಸಂಭ್ರಮ

ಕುಂಬಳೆ: ಇಲ್ಲಿನ ಬಹು ಪ್ರಸಿದ್ದ ಅನಂತಪುರ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಸರೋವರದಲ್ಲಿ ಮರಿ ಮೊಸಳೆ ಪ್ರತ್ಯಕ್ಷವಾಗಿದ್ದು, ಈ ಪ್ರಯುಕ್ತ ನ.17 ರಂದು ಬೆಳಿಗ್ಗೆ 10 ಗಂಟೆಗೆ ಕ್ಷೇತ್ರದ ಸಭಾಂಗಣದಲ್ಲಿ ಮಕರ ಸಂಭ್ರಮ ಕಾರ್ಯಕ್ರಮ ಜರಗಲಿದೆ. ಬಳಿಕ ಭಕ್ತರ ಜೊತೆ ಸಮಾಲೋಚನೆ ನಡೆಯಲಿದೆ ಎಂದು ಕ್ಷೇತ್ರದ ಕಾರ್ಯನಿರ್ವಹಣಾಧಿಕಾರಿ ಎಂ.ಪಿ. ರಾಮನಾಥ್ ಶೆಟ್ಟಿ ತಿಳಿಸಿರುವುದಾಗಿ ಮಾಧ್ಯಮ ವರದಿಯಾಗಿದೆ. ಈ ಹಿಂದೆ ಬಬಿಯಾ ಮೊಸಳೆ ಇಲ್ಲಿನ ಆಕರ್ಷಣೆಯ ಕೇಂದ್ರವಾಗಿದ್ದು, ವರುಷದ ಹಿಂದೆ ಮೊಸಳೆಯು ದೈವಾಧೀನವಾಗಿತ್ತು. ಆದರೆ ಇದೀಗ ಮರಿ ಮೊಸಳೆಯೊಂದು […]

ವಿಶ್ವ ಕಪ್ ಪಂದ್ಯಾಟದಲ್ಲಿ ಕಳಪೆ ಪ್ರದರ್ಶನ: ನೈತಿಕ ಹೊಣೆ ಹೊತ್ತು ತಂಡದ ನಾಯಕ ಸ್ಥಾನದಿಂದ ಕೆಳಗಿಳಿದ ಬಾಬರ್ ಆಜಂ

ಕರಾಚಿ: ಭಾರತದ ಆತಿಥ್ಯದಲ್ಲಿ ನಡೆದ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಪಾಕಿಸ್ತಾನ ತಂಡದ ಕಳಪೆ ಪ್ರದರ್ಶನಕ್ಕೆ ನೈತಿಕ ಹೊಣೆ ಹೊತ್ತು ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕತ್ವಕ್ಕೆ ಬಾಬರ್​ ಆಜಂ ರಾಜೀನಾಮೆ ನೀಡಿದ್ದಾರೆ. ಭಾರತದ ಆತಿಥ್ಯದಲ್ಲಿ ನಡೆದ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲಬಹುದಾದ ಪ್ರಮುಖ ತಂಡಗಳಲ್ಲಿ ಒಂದಾಗಿ ಸ್ಪರ್ಧೆಗಿಳಿದಿದ್ದ ಪಾಕಿಸ್ತಾನ ತಂಡ ಆಡಿದ 9 ಪಂದ್ಯಗಳಲ್ಲಿ 4 ರಲ್ಲಿ ಗೆದ್ದು, 5 ರಲ್ಲಿ ಸೋತಿದೆ. ಇದು ಪಾಕ್ ಮಾಜಿ ಆಟಗಾರರ, ಕ್ರಿಕೆಟ್ ಆಡಳಿತ ಮಂಡಳಿಯ ಹಾಗೂ ಪಾಕ್ ಅಭಿಮಾನಿಗಳ […]