ಪಿಂಚಣಿ ಪಾವತಿ ಖಾತೆಗೆ ಆಧಾರ್ ಜೋಡಣೆ ಕಡ್ಡಾಯ
ಉಡುಪಿ: ಜಿಲ್ಲೆಯಲ್ಲಿ ವಿವಿಧ ಸಾಮಾಜಿಕ ಭದ್ರತಾ ಯೋಜನೆಯಡಿ ಒಟ್ಟು 1,49,724 ಪಿಂಚಣಿದಾರರು ಮಾಸಿಕ ವೇತನ ಪಡೆಯುತ್ತಿದ್ದು, ಇವರುಗಳಲ್ಲಿ 1,47,371 ಪಿಂಚಣಿದಾರರ ಪಿಂಚಣಿ ಪಾವತಿ ಖಾತೆಗೆ ಆಧಾರ್ ಜೋಡಣೆ ಮತ್ತು ಎನ್.ಪಿ.ಸಿ.ಐ ಮ್ಯಾಪಿಂಗ್ ಮಾಡಲಾಗಿದ್ದು, ಬಾಕಿ ಉಳಿದ ಪಿಂಚಣಿದಾರರು ಆಧಾರ್ ಜೋಡಣೆ ಮತ್ತು ಎನ್.ಪಿ.ಸಿ.ಐ ಮ್ಯಾಪಿಂಗ್ ಮಾಡಿರುವುದಿಲ್ಲ. ಪಿಂಚಣಿ ಪಾವತಿ ಖಾತೆಗೆ ಆಧಾರ್ ಜೋಡಣೆ ಮತ್ತು ಎನ್.ಪಿ.ಸಿ.ಐ ಮ್ಯಾಪಿಂಗ್ ಮಾಡದೇ ಇರುವ ಪಿಂಚಣಿದಾರರ ಖಾತೆಗೆ ನವೆಂಬರ್ ಮಾಹೆಯಿಂದ ಪಿಂಚಣಿ ಪಾವತಿಯನ್ನು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಈ ಕೂಡಲೇ ಪಿಂಚಣಿ ಪಾವತಿ […]
ಪಿರಾನಾ ಹಂಟರ್ಸ್ ತೆಕ್ಕೆಗೆ ಸಿಪಿಎಲ್ 2023 ಕ್ರಿಕೆಟ್ ಟ್ರೋಫಿ
ಮಂಗಳೂರು: ಮಂಗಳೂರಿನ ಉರ್ವಾ ಮುನ್ಸಿಪಲ್ ಕ್ರೀಡಾಂಗಣದಲ್ಲಿ ನವಂಬರ್ 11 ಮತ್ತು 12 ರಂದು ಮಂಗಳೂರು ಪ್ರಾಂತ್ಯದ ಕಥೊಲಿಕ್ ಕ್ರಿಶ್ಚಿಯನ್ನರ ಕ್ರಿಕೆಟ್ ಕ್ರೀಡಾಕೂಟವು ನಡೆಯಿತು. ಮೊದಲನೆ ದಿನ ವಂದನೀಯ ಬೆಂಜಮಿನ್ ಪಿಂಟೋ ಆಶೀರ್ವಚಿಸಿ ಎಲ್ಲಾ ಆಟಗಾರರಿಗೆ ಶುಭ ಹಾರೈಸಿದರು. ಮುಖ್ಯ ಅಥಿತಿಗಳಾದ ಶಾಸಕ ಉಮಾನಾಥ ಕೋಟ್ಯಾನ್ ಮಾತಾನಾಡಿ, ಇಂತಹ ಪಂದ್ಯಾಟದಿಂದ ಆಟಗಾರರ ದೈಹಿಕ, ಮಾನಸಿಕ ಸಾಮರ್ಥ್ಯವು ವೃದ್ಧಿಯಾಗಿ ಸಮಾಜದಲ್ಲಿ ಅನ್ಯೋನ್ಯತೆಯಿಂದ ಬಾಳಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು. ಸಂಪತ್ ಶೆಟ್ಟಿ, ಸಿಎ ಕೊಲಿನ್ ರೊಡ್ರಿಗಸ್, ಫ್ರಾನ್ಸಿಸ್ ಡಿಸೋಜ ಅಥಿತಿಗಳಾಗಿ ಆಗಮಿಸಿದ್ದರು. […]
ಗಂಗೊಳ್ಳಿ ಬೋಟ್ ಅಗ್ನಿ ದುರಂತಕ್ಕೊಳಗಾದವರಿಗೆ 10 ಕೋಟಿ ಪರಿಹಾರಕ್ಕಾಗ್ರಹಿಸಿ ಮುಖ್ಯಮಂತ್ರಿಗಳಿಗೆ ಮನವಿ
ಗಂಗೊಳ್ಳಿ: ಸೋಮವಾರದಂದು ಇಲ್ಲಿ ಬೆಂಕಿಗಾಹುತಿಯಾದ ಮೀನುಗಾರಿಕಾ ಬೋಟುಗಳಿಗೆ ನಷ್ಟ ಪರಿಹಾರ ನೀಡುವಂತೆ ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ, ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಹಾಗೂ ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಬುಧವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದ್ದಾರೆ. ಅಗ್ನಿದುರಂತದಲ್ಲಿ ಸುಮಾರು 8 ದೋಣಿಗಳು ಸಂಪೂರ್ಣವಾಗಿ ಹಾನಿಯಾಗಿದ್ದು, 2 ದೋಣಿಗಳು ಭಾಗಶಃ ಹಾನಿಯಾಗಿವೆ. 2 ಡಿಂಗಿ ಹಾಗೂ ಮೀನುಗಾರಿಕೆ ಬಲೆಗಳು ಹಾನಿಗೀಡಾಗಿವೆ. ಈ ಅವಘಡದಿಂದ ಮೀನುಗಾರರು ಆಘಾತಕ್ಕೊಳಗಾಗಿದ್ದಾರೆ. ಈಗಾಗಲೇ ಸೈಕ್ಲೋನ್ […]