ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಅತಿಥಿ ಉಪನ್ಯಾಸಕರ ಹುದ್ದೆ ಖಾಲಿ

ಉಡುಪಿ: ಉಪ್ಪೂರು ಕೊಳಲಗಿರಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ಹಾಗೂ ಡಿಪ್ಲೋಮಾ ಇನ್ ಮೆಕೆಟ್ರಾನಿಕ್ಸ್ ತರಗತಿಗಳನ್ನು ನಡೆಸಲು ಎಂ.ಟೆಕ್ / ಬಿ.ಇ ಹಾಗೂ ಎಂ.ಎಸ್ಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಸರ್ಕಾರಿ ಪ್ರೌಢಶಾಲೆ ಹತ್ತಿರ, ಕೊಳಲಗಿರಿ, ಉಪ್ಪೂರು ಉಡುಪಿ, ದೂರವಾಣಿ ಸಂಖ್ಯೆ: 0820-2950101, […]

ನ. 18 ರಂದು ವಿವಿಧೆಡೆಗಳಲ್ಲಿ ವಿದ್ಯುತ್ ವ್ಯತ್ಯಯ

ಉಡುಪಿ: 110/33/11ಕೆವಿ ವಿದ್ಯುತ್ ಉಪಕೇಂದ್ರ ಹಿರಿಯಡ್ಕದಲ್ಲಿ 110 ಕೆ.ವಿ ಬಸ್ ಬಾರ್ ಮತ್ತು ಇದಕ್ಕೆ ಸಂಬಂಧಿಸಿದ ಉಪಕರಣಗಳ ತ್ರೈಮಾಸಿಕ ನಿರ್ವಹಣೆಯ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ 33 ಕೆವಿ ಹೆಬ್ರಿ ಫೀಡರ್‌ನಲ್ಲಿ ವಿದ್ಯುತ್ ಅಡಚಣೆಯಾಗುವುದರಿಂದ 33/11ಕೆವಿ ಹೆಬ್ರಿ ಉಪಕೇಂದ್ರದಿಂದ ಸರಬರಾಜು ಆಗುವ ಬೇಳೆಂಜೆ, ಕಳ್ತೂರು, ಸಂತೆಕಟ್ಟೆ, ಕರ್ಜೆ, ಮುಂಡಾಡಿಜೆಡ್ಡು, ಕುರ್ಪಾಡಿ, ಚಾರ, ಶಿವಪುರ, ಕನ್ಯಾನ, ನಾಡ್ಪಾಲು, ಸೋಮೇಶ್ವರ, ಸೀತಾನದಿ, ಮಡಾಮಕ್ಕಿ, ಕಾಸನಮಕ್ಕಿ, ಮುದ್ರಾಡಿ, ವರಂಗ, ಮುನಿಯಾಲು, ಕಬ್ಬಿನಾಲೆ, ಕೆರೆಬೆಟ್ಟು, ಹೊಸುರು, ಬಚ್ಚಾಪ್ಪು, ಹೆಬ್ರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಾಗೂ 110/33/11ಕೆವಿ […]

ಶಬರಿಮಲೆ ಮಕರವಿಳಕ್ಕು ಯಾತ್ರೆ ಪ್ರಾರಂಭ: ದೇಗುಲ ಯಾತ್ರೆ ಕೈಗೊಂಡ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ತಿರುವನಂತಪುರ: ಮಂಡಳ-ಮಕರವಿಳಕ್ಕು ಯಾತ್ರೆ ಪ್ರಾರಂಭವಾದ ಹಿನ್ನೆಲೆಯಲ್ಲಿ ದಕ್ಷಿಣ ಭಾರತ ಅತ್ಯಂತ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆ ಆಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆರೆಯಲಾಗಿದೆ. ಇನ್ನು ಎರಡು ತಿಂಗಳ ಕಾಲ ಶಬರಿಮಲೆ ದೇವರ ದರ್ಶನಕ್ಕೆ ಅವಕಾಶ ಸಿಗಲಿದೆ. ಏತನ್ಮಧ್ಯೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. 2024ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕೆಂದು ದೇವರಲ್ಲಿ ಬೇಡಿಕೊಂಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲೆಯ ಬೀಚ್ ಗಳಲ್ಲಿ ಜೀವ ರಕ್ಷಕರ ಹುದ್ದೆಗಾಗಿ ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯ ವಿವಿಧ ಪ್ರಮುಖ ಕಡಲ ತೀರಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದು, ಬೀಚ್‌ನಲ್ಲಿ ಯಾವುದೇ ರೀತಿಯ ಅವಘಡಗಳು ಸಂಭವಿಸಿದಲ್ಲಿ ಹಾಗೂ ಪ್ರವಾಸಿಗರ ಜೀವ ರಕ್ಷಣೆಗಾಗಿ ಜೀವರಕ್ಷಕರನ್ನು ನಿಯೋಜಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜೀವರಕ್ಷಕ (ಲೈಫ್ ಗಾರ್ಡ್) ತರಬೇತಿ ಪಡೆದು, ಚಾಲ್ತಿಯಲ್ಲಿರುವ ಪ್ರಮಾಣ ಪತ್ರವನ್ನು ಹೊಂದಿರುವ ಜಿಲ್ಲೆಯ ಅಭ್ಯರ್ಥಿಗಳು ಸೂಕ್ತ ದಾಖಲಾತಿಗಳೊಂದಿಗೆ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, ಎ ಬ್ಲಾಕ್, ಎರಡನೇ ಮಹಡಿ, ಕೊಠಡಿ ಸಂಖ್ಯೆ: 303, ರಜತಾದ್ರಿ, ಮಣಿಪಾಲ, ಉಡುಪಿ […]

ನ. 19 ರಂದು ಹಿರಿಯ ಕೊಂಕಣಿ ಸಾಹಿತಿ ಎಡ್ವಿನ್ ಡಿ’ಸೊಜಾ ನುಡಿನಮನ ಕಾರ್ಯಕ್ರಮ

ಮಂಗಳೂರು: ತಮ್ಮ ‘ಕಾಳೆಂ ಭಾಂಗಾರ್’ ಕಾದಂಬರಿಗೆ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿದ್ದ ಇತ್ತೀಚೆಗಷ್ಟೇ ನಿಧನರಾದ ಹಿರಿಯ ಕೊಂಕಣಿ ಸಾಹಿತಿ ಎಡ್ವಿನ್ ಜೆ. ಎಫ್. ಡಿ’ ಸೊಜಾ ಇವರಿಗೆ ಸಂತ ಎಲೋಶಿಯಸ್ ಕಾಲೇಜು(ಸ್ವಾಯತ್ತ) ಕೊಂಕಣಿ ಸಂಸ್ಥೆಯ ನೇತೃತ್ವದಲ್ಲಿ ಸಾಹಿತ್ಯ ಅಕಾಡೆಮಿ ಹೊಸ ದೆಹಲಿ, ವಿಶ್ವ ಕೊಂಕಣಿ ಕೇಂದ್ರ ಶಕ್ತಿನಗರ, ಮೈಕಲ್ ಡಿ ಸೊಜಾ ವಿಶನ್ ಕೊಂಕಣಿ ಮತ್ತು ರಾಕ್ಣೊ ವಾರಪತ್ರಿಕೆ ಸಹಯೋಗದಲ್ಲಿ ಕೊಂಕಣಿ ಸಂಘಟನೆಗಳ ವತಿಯಿಂದ ನ. 19 ರಂದು ಬೆಳಗ್ಗೆ 10 ಗಂಟೆಗೆ ಸಂತ […]