ಸಾಹಿತ್ಯ ಲೋಕಕ್ಕೆ ಕನ್ನಡ ಲೇಖಕರ ಕೊಡುಗೆ ಅಮೂಲ್ಯ: ಪ್ರೊ ಮುರಳೀಧರ ಉಪಾಧ್ಯ
ಉಡುಪಿ: ಕನ್ನಡದಲ್ಲಿ ಹಲವು ಲೇಖಕರು ಅತ್ಯುತ್ತಮ ಕಥೆಗಳನ್ನು ಬರೆದು ನಾಡಿನ ಬೇರೆ ಬೇರೆ ಭಾಷೆಗಳಿಗೆ ಭಾಷಾಂತರಗೊಳಿಸಿ, ಕನ್ನಡಕ್ಕೆ ಬಹುದೊಡ್ಡ ಕೊಡುಗೆಯನ್ನು ನೀಡಿದ್ದಾರೆ ಎಂದು ಪ್ರೊ ಮುರಳೀಧರ ಉಪಾಧ್ಯ ಹೇಳಿದರು. ಗುರುವಾರ ಎಂ.ಜಿ.ಎಂ ಕಾಲೇಜು,ಕನ್ನಡ ಸಾಹಿತ್ಯ ಸಂಘ, ಐಕ್ಯೂಎಸಿ ಮತ್ತು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಯೋಗದೊಂದಿಗೆ ಎಂ.ಜಿ.ಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ಜಿಲ್ಲೆಯ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಕಥಾ ಕಮ್ಮಟ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಮಾಸ್ತಿ, ಶಿವರಾಮ ಕಾರಂತರು, […]
ಉಡುಪಿ ತಾಲೂಕು 14ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಎಚ್ ಶಾಂತರಾಜ ಐತಾಳ್ ಆಯ್ಕೆ
ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ 14ನೇ ಕನ್ನಡ ಸಾಹಿತ್ಯ ಸಮ್ಮೇಳನವು ಡಿ. 30 ರಂದು ಮಣಿಪಾಲದ ಶಿವಪಾಡಿ ಉಮಾಮಹೇಶ್ವರ ದೇವಸ್ಥಾನದ ಶ್ರೀ ರಮಾನಂದ ಸ್ಮೃತಿ ಮಂಟಪದಲ್ಲಿ ನಡೆಯಲಿದೆ. ಈ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ, ಸಂಘಟಕ, ವಿಮರ್ಶಕ, ಸಾಮಾಜಿಕ ಕಳಕಳಿಯ ಎಚ್. ಶಾಂತರಾಜ ಐತಾಳ್ ಆಯ್ಕೆಯಾಗಿದ್ದಾರೆಂದು ಉಡುಪಿ ತಾಲೂಕು ಅಧ್ಯಕ್ಷ ರವಿರಾಜ ಎಚ್.ಪಿ ಅವರ ಉಪಸ್ಥಿತಿಯಲ್ಲಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಘೋಷಿಸಿದ್ದಾರೆಂದು ತಾಲೂಕು ಕಾರ್ಯದರ್ಶಿ ಜನಾರ್ದನ್ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ.19 ರಂದು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ v/s ಆಸ್ಟ್ರೇಲಿಯಾ ವರ್ಲ್ಡ್ ಕಪ್ ಫೈನಲ್: ಎಲ್ಲರ ಚಿತ್ತ ಭಾರತದತ್ತ
ಗುರುವಾರ ಈಡನ್ ಗಾರ್ಡನ್‌ನಲ್ಲಿ ನಡೆದ 2023 ರ ವಿಶ್ವಕಪ್‌ನ ಎರಡನೇ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾವು ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಭಾರತದ ವಿರುದ್ಧ ಫೈನಲ್ ಪ್ರಶಸ್ತಿ ಹಣಾಹಣಿಗೆ ಸಿದ್ದವಾಗಿದೆ. ನವೆಂಬರ್ 19 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಫೈನಲ್ ಪಂದ್ಯ ನಡೆಯಲಿದೆ. ಆಸ್ಟ್ರೇಲಿಯಾ ತಂಡವು 3 ವಿಕೆಟ್ ಮತ್ತು 2.4 ಓವರ್‌ಗಳು ಉಳಿದಿರುವಂತೆಯೇ 213 ರನ್‌ಗಳನ್ನು ಬೆನ್ನಟ್ಟುವ ಮೂಲಕ ರೋಮಾಂಚಕವಾಗಿ ಮೇಲುಗೈ ಸಾಧಿಸಿತು. ಐದು ಬಾರಿ ಟೂರ್ನಿ ಗೆದ್ದಿರುವ ಆಸ್ಟ್ರೇಲಿಯಾಕ್ಕೆ ಇದು 8ನೇ ಏಕದಿನ ವಿಶ್ವಕಪ್. ಭಾರತವು ಎರಡು […]
ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕ್ರತಿಕ ಪ್ರತಿಷ್ಠಾನದ 6ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಏತದ್ಧಿ ರಾಮಾಯಣಂ ಯಕ್ಷಗಾನ ಪ್ರದರ್ಶನ
ಉಡುಪಿ: ಪರ್ಯಾಯ ಶ್ರೀ ಕೃಷ್ಣಾಪುರ ಮಠ, ಉಡುಪಿ ಹಾಗೂ ಸೋದೆ ವಾದಿರಾಜ ಮಠ, ಉಡುಪಿ ಇವರ ಆಶ್ರಯದಲ್ಲಿ ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕ್ರತಿಕ ಪ್ರತಿಷ್ಠಾನದ ವತಿಯಿಂದ ನಡೆಯುತ್ತಿರುವ ತೆಂಕುತಿಟ್ಟು ಯಕ್ಷಗಾನ ಅಧ್ಯಯನ ಕೇಂದ್ರ ಇದರ 6ನೇ ವರ್ಷದ ವಾರ್ಷಿಕೋತ್ಸವವು ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ನ. 18 ರಂದು ಮಧ್ಯಾಹ್ನ 3 ಗಂಟೆಯಿಂದ ಜರಗಲಿದೆ. ಈ ಪ್ರಯುಕ್ತ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪ್ರಸಿದ್ಧ ಭಾಗವತ ರಾಮಕೃಷ್ಣ ಮಯ್ಯ ಸಿರಿಬಾಗಿಲು, ಶ್ರೀ ನಾಟ್ಯಾಂಜಲಿ ಕಲಾ ಅಕಾಡೆಮಿ […]
ನೇಜಾರು ಹತ್ಯೆ ಪ್ರಕರಣದ ಆರೋಪಿಯನ್ನು ಕ್ಷಿಪ್ರವಾಗಿ ಬಂಧಿಸಿದ ಪೊಲೀಸರ ಕಾರ್ಯ ಶ್ಲಾಘನೀಯ: ವೆರೋನಿಕಾ ಕರ್ನೆಲಿಯೋ
ಉಡುಪಿ: ಜಿಲ್ಲೆಯ ಇತಿಹಾಸದಲ್ಲೇ ನೇಜಾರು ತೃಪ್ತಿ ಲೇಔಟ್ ನಲ್ಲಿ ಅತ್ಯಂತ ಕ್ರೂರ ರೀತಿಯಲ್ಲಿ ನಡೆದ ಒಂದೇ ಕುಟುಂಬದ ನಾಲ್ಕು ಮಂದಿಯ ಅಮಾನುಷ ಹತ್ಯೆ ನಾಗರಿಕ ಸಮಾಜವನ್ನು ಬೆಚ್ಚಿ ಬೀಳಿಸಿದ್ದು, ಪ್ರಕರಣವನ್ನು ಪೊಲೀಸ್ ಇಲಾಖೆ ಸವಾಲಾಗಿ ಸ್ವೀಕರಿಸಿ ಸಿಸಿ ಟಿವಿ ಹಾಗೂ ಇನ್ನಿತರ ಮೂಲಗಳ ಜಾಡು ಹಿಡಿದು ಕೊಲೆ ಆರೋಪಿಯನ್ನು ಬಂಧಿಸಿರುವುದು ಶ್ಲಾಘನೀಯ ಎಂದು ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೋ ಹೇಳಿದ್ದಾರೆ. ಇಡೀ ಕರಾವಳಿಯನ್ನು ಬೆಚ್ಚಿ ಬೀಳಿಸಿದ ಪ್ರಕರಣದಿಂದಾಗಿ ಜನತೆ ಭಯದಲ್ಲಿ ಬದುಕುವ ವಾತಾವರಣವನ್ನು ಸೃಷ್ಟಿಯಾಗಿತ್ತು. ಜಿಲ್ಲೆಯ ದಕ್ಷ […]