ದಿಗ್ಗಜ ಗುಂಡಪ್ಪ ವಿಶ್ವನಾಥ್: ವಿರಾಟ್ ಶ್ರೇಷ್ಠ ಕ್ರಿಕೆಟರ್, ರೋಹಿತ್ ವಿಶ್ವಕಪ್ ಬೆಸ್ಟ್ ಪ್ಲೇಯರ್

ಹೈದರಾಬಾದ್ (ತೆಲಂಗಾಣ): ವಿಶ್ವಕಪ್​ನಲ್ಲಿ ರೋಹಿತ್ ಶರ್ಮಾ ಆಟ ಮತ್ತು ನಾಯಕತ್ವವನ್ನು ಅತ್ಯುತ್ತಮವಾಗಿ ನಿಭಾಯಿಸುತ್ತಿದ್ದಾರೆ. ಪ್ರಸಕ್ತ ಕಾಲಘಟ್ಟದಲ್ಲಿ ವಿರಾಟ್ ಕೊಹ್ಲಿ ಒಬ್ಬ ಶ್ರೇಷ್ಠ ಆಟಗಾರ ಎಂದು ಭಾರತದ ಲೆಜೆಂಡ್ ಆಟಗಾರ ಗುಂಡಪ್ಪ ವಿಶ್ವನಾಥ್ ಹೇಳಿದ್ದಾರೆ.ಭಾರತದ ವೇಗದ ಬೌಲಿಂಗ್ ಉತ್ತಮವಾಗಿದ್ದು, ವಿಶ್ವಕಪ್ ಗೆಲ್ಲುವ ಫೇವರಿಟ್ ತಂಡವಾಗಿದೆ ಎಂದು ಭಾರತ ತಂಡದ ಮಾಜಿ ದಿಗ್ಗಜ ಆಟಗಾರ ಹಾಗೂ ಸ್ಟಾರ್ ಸ್ಪೋರ್ಟ್ಸ್ ಕನ್ನಡದ ಕ್ರಿಕೆಟ್​ ವಿಶ್ಲೇಷಕ ಗುಂಡಪ್ಪ ವಿಶ್ವನಾಥ್ ಹೇಳಿದ್ದಾರೆ. 2023ರ ವಿಶ್ವಕಪ್​ನಲ್ಲಿ ಭಾರತ ತಂಡ ಆಟದ ಬಗ್ಗೆ ಮಾತನಾಡಿದ ವಿಶ್ವನಾಥ್, “ನಾ […]

ಕಾರ್ಕಳ: ಈಶ್ಚರೀಯ ವಿಶ್ವ ವಿದ್ಯಾಲಯದಲ್ಲಿ ದೀಪಾವಳಿ ಆಚರಣೆ

ಕಾರ್ಕಳ : ದೀಪಾವಳಿ ಹಬ್ಬದ ಆಧ್ಯಾತ್ಮಿಕ ರಹಸ್ಯ ಕಾರ್ಯಕ್ರಮವು ನಗರದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ಚರೀಯ ವಿಶ್ವ ವಿದ್ಯಾಲಯದಲ್ಲಿ ನವಂಬರ್ 16ರಂದು ಜರಗಿತು. ರಾಜಯೋಗಿನಿ ಬ್ರಹ್ಮಾಕುಮಾರಿ ವಸಂತಿ ಇವರು ತಮ್ಮ ಪ್ರವಚನದಲ್ಲಿ ದೀಪಾವಳಿ ಎಂದರೆ ಮನೆ, ಅಂಗಡಿಯನ್ನು ಸ್ವಚ್ಚ ಮಾಡುತ್ತಾರೆ, ಅದರೆ ಮನಸ್ಸನ್ನು ಸ್ವಚ್ಚ ಮಾಡಬೇಕು. ದೀಪ ಬೆಳಗಿಸುತ್ತಾರೆ ಆದರೆ ವರ್ತಮಾನ ಸಮಯದಲ್ಲಿ ಪರಮಾತ್ಮ ಶಿವ ಅವತರಿತನಾಗಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ಆತ್ಮದ ದೀಪ ಬೆಳಗಿಸುತ್ತಾರೆ. ಮನುಷ್ಯರು ಮನೆಯನ್ನು ಶೃಂಗಾರ ಮಾಡುತ್ತಾರೆ, ನಿಜವಾಗಿ ಮನುಷ್ಯರಲ್ಲಿ ದೈವಿಗುಣವನ್ನು ತುಂಬಿಸಬೇಕಾಗಿದೆ. ಮಾನವೀಯ […]

ಮಕ್ಕಳ ಪೌಷ್ಟಿಕ ಆಹಾರ ಸರಬರಾಜಿನಲ್ಲಿ ಅಕ್ರಮ ಆರೋಪ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ದ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಕ್ಕಳ ಪೌಷ್ಟಿಕ ಆಹಾರ ಸರಬರಾಜಿನಲ್ಲಿ 600 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಭ್ರಷ್ಟಾಚಾರದ ನಡೆದಿದೆ ಎಂದು ಆರೋಪಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸೇರಿದಂತೆ ಇತರರ ವಿರುದ್ಧ ಲೋಕಾಯುಕ್ತ ಸಂಸ್ಥೆಯಲ್ಲಿ ದೂರು ದಾಖಲಾಗಿದೆ. ವಕೀಲ ನಟರಾಜ್ ಶರ್ಮಾ ಎಂಬುವವರು ದೂರು ನೀಡಿದ್ದು, ಅನರ್ಹ ಸಹಕಾರ ಸಂಘಗಳಿಗೆ ಮಕ್ಕಳ ಪೌಷ್ಟಿಕ ಆಹಾರವನ್ನು ಸರಬರಾಜಿಗೆ ಗುತ್ತಿಗೆ ನೀಡಲಾಗುತ್ತಿದೆ. ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ. ಶಿವಮೊಗ್ಗದ […]

ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ಅವಕಾಶ

ಉಡುಪಿ: ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2024 ಕ್ಕೆ ಸಂಬಂಧಿಸಿದಂತೆ, ನವೆಂಬರ್ 18 ಮತ್ತು 19 ಹಾಗೂ ಡಿಸೆಂಬರ್ 2 ಮತ್ತು 3 ರಂದು ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಅಂಗವಾಗಿ ವಿಶೇಷ ಆಂದೋಲನಾ ಆಯೋಜಿಸುವಂತೆ ಚುನಾವಣಾ ಆಯೋಗವು ನಿರ್ದೇಶಿಸಿರುತ್ತದೆ. ಈ ಹಿನ್ನೆಲೆ, ಜಿಲ್ಲಾ ವ್ಯಾಪ್ತಿಯಲ್ಲಿ ಬರುವ 1112 ಮತಗಟ್ಟೆಗಳಲ್ಲಿ ನವೆಂಬರ್ 18 ಮತ್ತು 19 ಹಾಗೂ ಡಿಸೆಂಬರ್ 2 ಮತ್ತು 3 ರಂದು ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಹಾಗೂ ಮತಗಟ್ಟೆ ಮಟ್ಟದ ಅಧಿಕಾರಿಗಳ […]

ಹೆಬ್ರಿ: ಸರ್ಕಾರಿ ಗೋಶಾಲಾ ವ್ಯವಸ್ಥಾಪಕರ ಹುದ್ದೆಗಾಗಿ ಅರ್ಜಿ ಆಹ್ವಾನ

ಹೆಬ್ರಿ : ಜಿಲ್ಲೆಯ ಹೆಬ್ರಿ ತಾಲೂಕಿನ ಶಿವಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆರೆಬೆಟ್ಟು ಗ್ರಾಮದ ಸ.ನಂ. 79/2 ರಲ್ಲಿ ಸರ್ಕಾರಿ ಗೋಶಾಲೆಯ ನಿರ್ವಹಣೆಯನ್ನು ಸರ್ಕಾರಿ ಖಾಸಗಿ ಸಹಭಾಗಿತ್ವದಲ್ಲಿ ನಡೆಸುವ ಕುರಿತು ಆಸಕ್ತಿಯುಳ್ಳ ಗೋಶಾಲಾ ವ್ಯವಸ್ಥಾಪಕರನ್ನು ನೇಮಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 4 ಕೊನೆಯ ದಿನ. ಆಸಕ್ತಿಯುಳ್ಳವರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಪಶುಪಾಲನಾ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2534024 ಅನ್ನು ಅಥವಾ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.