ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರಾಗಿ ಮಹೇಶ್ ಠಾಕೂರ್ ಆಯ್ಕೆ

ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ 14ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ಮಣಿಪಾಲ ಸರಳಬೆಟ್ಟು ಶಿವಪ್ಪಾಡಿ ಉಮಾಮಹೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನೆರವೇರಿತು. ಊರಿನ ಹಿರಿಯರು, ಸಾಹಿತ್ಯಾಭಿಮಾನಿಗಳು, ಸಾಹಿತಿಗಳು, ಕಲಾವಿದರು, ಭಾಗವಹಿಸಿದ್ದ ಈ ಸಭೆಯಲ್ಲಿ ಸಮ್ಮೇಳನದ ಸ್ವಾಗತ ಸಮಿತಿಯನ್ನು ರಚಿಸಲಾಯಿತು. ಕಸಾಪ ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಹೆಚ್. ಪಿ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷರಾಗಿ ಮಹೇಶ್ ಠಾಕೂರ್ ಅವರನ್ನು ಸರ್ವಾನುಮತದಿಂದ ಆಯ್ಕೆ […]

ನ. 22 ರಿಂದ 44ನೇ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆ; 12 ದಿನಗಳಲ್ಲಿ 12 ತಂಡಗಳಿಂದ ನಾಟಕ ಪ್ರದರ್ಶನ

ಉಡುಪಿ: ರಂಗಭೂಮಿ ಉಡುಪಿ ಇದರ ವತಿಯಿಂದ 44ನೇ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆ ನವೆಂಬರ್ 22ರಿಂದ ಡಿಸೆಂಬರ್ 3 ರವರೆಗೆ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ನ.22ರಂದು ಸಂಜೆ 6 ಗಂಟೆಗೆ ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಪ್ರೊ. ಲಕ್ಷ್ಮೀನಾರಾಯಣ ಕಾರಂತ್ ನಾಟಕ ಸ್ಪರ್ಧೆಗೆ ಚಾಲನೆ ನೀಡಲಿದ್ದಾರೆ ಎಂದರು. ರಂಗಭೂಮಿಯ ಗೌರವಾಧ್ಯಕ್ಷ ಡಾ. ಎಚ್‌.ಎಸ್‌ ಬಲ್ಲಾಳ್ ಅಧ್ಯಕ್ಷತೆ […]

ಮಂಗಳೂರು ಬನ್ಸ್, ಮೈಸೂರು ಮಸಾಲೆ ದೋಸೆ ರುಚಿಗೆ ಮಾರುಹೋದ ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಜಾಂಟಿ ರೋಡ್ಸ್!!

ಬೆಂಗಳೂರು: ಬೆಂಗಳೂರಿನಲ್ಲಿ ಮಂಗಳೂರಿನ ನೆಚ್ಚಿನ ಖಾದ್ಯ ಮಂಗಳೂರು ಬನ್ಸ್, ಮೈಸೂರು ಮಸಾಲೆ ದೋಸೆ ಮತ್ತು ಮಸಲಾಚಾಯ್ ಸವಿರುಚಿಗೆ ತಲೆದೂಗಿರುವ ಅವರು ಈ ಬಗ್ಗೆ X ನಲ್ಲಿ ಬರೆದುಕೊಂಡಿದ್ದಾರೆ. ತನ್ನ ಕಾರು ಚಾಲಕನ ಮಾತಿಗೆ ಬೆಲೆಕೊಟ್ಟು ಆತನ ಮೆಚ್ಚಿನ ರೆಸ್ಟೋರೆಂಟ್ ನಲ್ಲಿ ಚಹಾ ಸವಿಯುವ ಸಲಹೆಗೆ ಮನ್ನಣೆ ನೀಡಿ ಒಳ್ಳೆಯ ಕೆಲಸ ಮಾಡಿದೆ ಎಂದು ಅವರು ಹೇಳಿದ್ದಾರೆ. ಉದ್ಯಮ ಕ್ಷೇತ್ರಕ್ಕೆ ಕಾಲಿಟ್ಟಿರುವ ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ, ಆಧುನಿಕ ಕ್ರಿಕೆಟ್‌ನ ಶ್ರೇಷ್ಠ ಫೀಲ್ಡರ್‌ಗಳಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿರುವ ಜಾಂಟಿ ರೋಡ್ಸ್, […]

ಕುಂದಾಪುರ: ಹೆರಿಗೆ ಸಂದರ್ಭ ಹಸುಗೂಸು ಮೃತ; ಸರ್ಕಾರಿ ಆಸ್ಪತ್ರೆ ನಿರ್ಲಕ್ಷ್ಯ ವಿರುದ್ದ ಸಾರ್ವಜನಿಕರಿಂದ ಧರಣಿ

ಕುಂದಾಪುರ: ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಸಂದರ್ಭ ಹುಸುಗೂಸು ಮೃತಪಟ್ಟ ಘಟನೆ ವರದಿಯಾಗಿದೆ. ನವೆಂಬರ್ 17ರಂದು ರಾತ್ರಿ ಗಂಗೊಳ್ಳಿಯ ಗುಡ್ಡದಕೇರಿಯ ದಾವನಮನೆ ಶ್ರೀನಿವಾಸ ಖಾರ್ವಿ ಎಂಬವರ ಪತ್ನಿ ಹೆರಿಗೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದು, ಸೋಮವಾರ ಬೆಳಗ್ಗೆ ಹೆರಿಗೆ ಮಾಡಿಸಿದ ವೈದ್ಯರು ಮಗು ಮೃತಪಟ್ಟಿರುವುದಾಗಿ ಮನೆಯವರಿಗೆ ಮಾಹಿತಿ ನೀಡಿದ್ದಾರೆ. ವೈದ್ಯರ ನಿರ್ಲಕ್ಷ್ಯ ದಿಂದಲೇ ಮಗು ಮೃತಪಟ್ಟಿದೆ ಎಂದು ಮನೆಯವರು ಹಾಗೂ ಗ್ರಾಮಸ್ಥರು ಆರೋಪಿಸಿ ಸರಕಾರಿ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ ಘಟನೆ ನಿನ್ನೆ ಸಂಜೆ ನಡೆದಿದೆ. ಪ್ರಕರಣದ ವಿವರ: […]

ಗಿರಿಜನ ಉಪಯೋಜನೆಯಡಿ ಮಿಶ್ರ ತಳಿ ಹಸು ಘಟಕ ಅನುಷ್ಠಾನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹಾಲು ಉತ್ಪಾದಕರಿಗೆ ಉತ್ತೇಜನ ಕಾರ್ಯಕ್ರಮದಡಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ (ಹೈನು ಘಟಕ) ಒಂದು ಮಿಶ್ರ ತಳಿ ಹಾಲು ಕರೆಯುವ ಹಸು ಘಟಕ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ವರ್ಗದ ಅರ್ಹ/ಆಸಕ್ತ ಹಾಲು ಉತ್ಪಾದಕ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 5 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕಾಪು, ಬ್ರಹ್ಮಾವರ, ಕುಂದಾಪುರ, […]