ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ರಾಜ್ಯ ಮಟ್ಟದ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ

ಮಂಗಳೂರು: ಇಲ್ಲಿನ ಉರ್ವ ಕ್ರಿಕೆಟ್ ಮೈದಾನದಲ್ಲಿ ಜರಗಿದ 70 ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಗುರುತಿಸಿ ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘ.ನಿ. ಬ್ರಹ್ಮಾವರ ಸಂಘಕ್ಕೆ ರಾಜ್ಯ ಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ ಲಭಿಸಿದೆ. ಈಗಾಗಲೇ 2013-14ನೇ ಸಾಲಿನಿಂದ ಸತತವಾಗಿ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಶಸ್ತಿ, 2018-19ನೇ ಸಾಲಿನಿಂದ ಸತತವಾಗಿ ಪ್ರತಿಷ್ಠಿತ ರಾಜ್ಯ ಅಪೆಕ್ಸ್ ಬ್ಯಾಂಕಿನ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿಗೆ ಭಾಜನವಾಗಿದೆ. ಸಂಘದ ಅಧ್ಯಕ್ಷ […]

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶ್ರೀ ವೆಂಕಟರಮಣ ಪ.ಪೂ ಕಾಲೇಜು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ) ಉಡುಪಿ ಹಾಗೂ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಕ್ರೀಡಾಕೂಟ 2023-24 ರ ಕ್ರೀಡಾಕೂಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸಿನನ್ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ, ಶ್ರವಣ್ 800 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆಯುವುದರ ಮೂಲಕ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳನ್ನು ಕಾಲೇಜಿನ […]

ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥ ರುದ್ರಯಾಗ ಸಂಪನ್ನ

ಬನ್ನಂಜೆ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೋಮವಾರದಂದು ಲೋಕ ಕಲ್ಯಾಣಾರ್ಥವಾಗಿ ದೇವರ ಸನ್ನಿಧಿಯಲ್ಲಿ ಶಶಿಕಾಂತ್ ತಂತ್ರಿಗಳ ನೇತೃತ್ವದಲ್ಲಿ ಶತರುದ್ರಾಭಿಷೇಕ, ನವಕ ಪ್ರಧಾನ ಪೂರ್ವಕ ರುದ್ರಯಾಗ ಜರಗಿತು. ಬೆಳ್ಳಿಗೆ 8 ಗಂಟೆಗೆ ಸಾಮೂಹಿಕ ಪ್ರಾರ್ಥನೆ, ಶತರುದ್ರಾಭಿಷೇಕ, ನವಕ ಪ್ರಧಾನ ಹೋಮ 11 ಗಂಟೆಗೆ ಪೂರ್ಣಾಹುತಿ, ಪಲ್ಲಪೂಜೆ , ಮಹಾಪೂಜೆ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆದು ನೂರಾರು ಭಕ್ತರು ಭೋಜನ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ರಾಮ್ ಬನ್ನಂಜೆ, ಉಡುಪಿ ಶಾಸಕ ಯಶಪಾಲ್ ಸುವರ್ಣ, […]

ಮಂಗಳೂರು: ಲಯನ್ ಜಿಲ್ಲಾ ಮಟ್ಟದ ‘ಲಯನ್ಸ್ ಸಿಂಗಿಂಗ್ ಸ್ಟಾರ್ಸ್’

ಮಂಗಳೂರು: ಲಯನ್ ಜಿಲ್ಲಾ ಮಟ್ಟದ ಲಯನ್ಸ್ ಸಿಂಗಿಂಗ್ ಸ್ಟಾರ್ಸ್ ಕಾರ್ಯಕ್ರಮ ಲಯನ್ ಸೇವಾ ಮಂದಿರದಲ್ಲಿ ಯಶಸ್ವಿಯಾಗಿ ಇತ್ತೀಚೆಗೆ ನೆರವೇರಿತು. 130 ಸದಸ್ಯರು ಈ ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಹಾಡಿನ ಮೂಲಕ ವ್ಯಕ್ತಪಡಿಸಿದರು. ಸಭಾ ಕಾರ್ಯಕ್ರಮದಲ್ಲಿ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ ಯುವ ಪ್ರತಿಭೆ ಅಪೇಕ್ಷಾ ಪೈ ಹಾಗೂ ತನುಶ್ರೀ ಇವರಿಗೆ ಸನ್ಮಾನ ಪತ್ರದ ಜೊತೆ 5000 ರೂ. ಪ್ರತಿಭಾ ಪುರಸ್ಕಾರ ನೀಡಲಾಯಿತು. ಕಾರ್ಯಕ್ರಮದಲ್ಲಿ ಲಯನ್ ಜಿಲ್ಲಾ ಗವರ್ನರ್ ಲ| ಡಾ| ಮೆಲ್ವಿನ್ ಡಿಸೋಜಾ ದಂಪತಿಗಳು, ಕಾರ್ಯಕ್ರಮದ […]

ಉತ್ತರಕಾಶಿ ಸುರಂಗದಲ್ಲಿ ಒಂಬತ್ತು ದಿನಗಳಿಂದ ಸಿಲುಕಿರುವ ಕಾರ್ಮಿಕರ ಮೊದಲ ಚಿತ್ರ ಸೆರೆ ಹಿಡಿದ ಎಂಡೋಸ್ಕೋಪಿಕ್ ಕ್ಯಾಮರಾ

ದೆಹರಾದೂನ್: ಉತ್ತರಾಖಂಡದ ಉತ್ತರಕಾಶಿಯಲ್ಲಿ ಕುಸಿದ ಸಿಲ್ಕ್ಯಾರಾ ಸುರಂಗದೊಳಗೆ ಸಿಲುಕಿರುವ ಕಾರ್ಮಿಕರ ಮೊದಲ ದೃಶ್ಯಾವಳಿಗಳು ಮಂಗಳವಾರ ಬೆಳಗ್ಗೆ ಹೊರಬಿದ್ದಿವೆ. ರಕ್ಷಣಾ ಕಾರ್ಯಕರ್ತರು ಕುಸಿದ ಸಿಲ್ಕ್ಯಾರಾ ಸುರಂಗದ ಅವಶೇಷಗಳ ಮೂಲಕ ಆರು ಇಂಚಿನ ಅಗಲದ ಪೈಪ್‌ಲೈನ್ ಅನ್ನು ಅಳವಡಿಸಿದ ಒಂದು ದಿನದ ನಂತರ ಪ್ರಮುಖ ಬೆಳವಣಿಗೆಯು ಕಂಡು ಬಂದಿದೆ. ಇದು ಕಳೆದ ಒಂಬತ್ತು ದಿನಗಳಿಂದ ಒಳಗೆ ಸಿಲುಕಿರುವ 41 ಕಾರ್ಮಿಕರಿಗೆ ಹೆಚ್ಚಿನ ಪ್ರಮಾಣದ ಆಹಾರವನ್ನು ಪೂರೈಸಲು ಸಹಾಯ ಮಾಡಲಿದೆ. ಪರ್ಯಾಯ ಆರು ಇಂಚಿನ ಆಹಾರ ಪೈಪ್‌ಲೈನ್ ಮೂಲಕ ಕಳುಹಿಸಲಾದ ಎಂಡೋಸ್ಕೋಪಿಕ್ […]