ಅಮೃತ ಮಹೋತ್ಸವದ ಸಂಭ್ರಮದಲ್ಲಿ ಕಸ್ತೂರ್ಬಾ ಮೆಡಿಕಲ್ ಕಾಲೇಜು
ಮಣಿಪಾಲ: ಮಾಹೆಯ ಪ್ರತಿಷ್ಠಿತ ಘಟಕವಾಗಿರುವ ಕಸ್ತೂರ್ಬಾ ಮೆಡಿಕಲ್ ಕಾಲೇಜು ತನ್ನ 70 ನೆಯ ವರ್ಷಾಚರಣೆಯನ್ನು ಸಂಭ್ರಮೋಲ್ಲಾಸದಿಂದ ಆಚರಿಸಿತು. ಈ ಅರ್ಥಪೂರ್ಣ ಕಾರ್ಯಕ್ರಮವು ವೈದ್ಯಕೀಯ ಶಿಕ್ಷಣಕ್ಕೆ ಮತ್ತು ಆರೋಗ್ಯ ಪಾಲನೆಯ ಸೇವೆಗಳಿಗೆ ಕೆಎಂಸಿಯ ದೀರ್ಘಕಾಲೀನ ಬದ್ಧತೆಯ ಪ್ರತೀಕವಾಗಿದ್ದು, ಇದರಲ್ಲಿ ಗಣ್ಯರು, ಪ್ರಾಧ್ಯಾಪಕರು, ವಿದ್ಯಾರ್ಥಿಗಳು, ಪ. ಪೂರ್ವ ವಿದ್ಯಾರ್ಥಿಗಳು ಪಾಲ್ಗೊಂಡರು. ಕೆನಡಾದ ಬ್ರಿಟಿಷ್ ಕೊಲಂಬಿಯಾ ವಿಶ್ವವಿದ್ಯಾನಿಲಯದ ಮೂಳೆ ಚಿಕಿತ್ಸಾ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರಾಗಿರುವ, ಕೆಎಂಸಿಯ ಅಭಿಮಾನದ ಪೂರ್ವವಿದ್ಯಾರ್ಥಿಯಾಗಿರುವ ಡಾ. ಕಿಶೋರ್ ಮುಲುಪುರಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಡಾ. […]
ಕೊಡವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ರಾಜ್ಯಮಟ್ಟದ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ
ಮಂಗಳೂರು: ಕೊಡವೂರು ವ್ಯವಸಾಯ ಸೇವಾ ಸಹಕಾರಿ ಸಂಘವು ಸಾಧಿಸಿರುವ ಸಾಧನೆಯನ್ನು ಪರಿಗಣಿಸಿ ಮಂಗಳೂರಿನಲ್ಲಿ ನಡೆದ 70 ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯ ಮಟ್ಟದ ಆಚರಣೆಯ ಸಂದರ್ಭದಲ್ಲಿ “ಅತ್ಯುತ್ತಮ ಸಹಕಾರ ಸಂಘ” ಪ್ರಶಸ್ತಿ ಪಡೆದಿದೆ. ಸಂಘದ ಅಧ್ಯಕ್ಷ ಕೆ.ನಾರಾಯಣ ಬಲ್ಲಾಳ್ ಗಣ್ಯರ ಸಮಕ್ಷಮ ಪ್ರಶಸ್ತಿ ಸ್ವೀಕರಿಸಿದರು. ಸಹಕಾರ ಸಚಿವ ಕೆ.ಎನ್.ರಾಜಣ್ಣ, ಸಂಸದ ನಳಿನ್ ಕುಮಾರ್ ಕಟೀಲು, ಶಾಸಕರಾದ ವೇದವ್ಯಾಸ ಕಾಮತ್, ಯಶ್‌ಪಾಲ್ ಸುವರ್ಣ, ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷ ಜಿ.ಟಿ.ದೇವೇಗೌಡ, ರಾಜ್ಯ ಸಹಕಾರ ಮಾರಾಟ ಮಹಾಮಂಡಲ […]
ಡಿ.1 ರಂದು ಐತಿಹಾಸಿಕ ಬಿಲ್ಲಾಡಿ ದೊಡ್ಮನೆ ಕಂಬಳ
ಬಿಲ್ಲಾಡಿ: ಬಿಲ್ಲಾಡಿ ದೊಡ್ಮನೆ ಶ್ರೀ ಉದ್ಭವ ಮಹಾಗಣಪತಿ ಕೇಚರಾಹುತ ಬಿಲ್ಲಾಡಿ ಕಂಬಳವು ಡಿ.1 ರಂದು ಬೆಳಿಗ್ಗೆ 10 ಗಂಟೆಯಿಂದ ನಡೆಯಲಿದ್ದು, ಪರಂಪರೆಯಂತೆ ಬಿಲ್ಲಾಡಿ ದೊಡ್ಮನೆಯ ಹೆಬ್ಬಾಗಿಲಿನಿಂದ ಮನೆಯ ಕೋಣಗಳು ಸಿಂಗಾರಗೊಂಡು ಕುಟುಂಬಿಕರ ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ ಪುರಮೆರವಣಿಗೆಯ ಮೂಲಕ ಕಂಬಳಗದ್ದೆವರೆಗೆ ಸಾಗಿ ಕಂಬಳದ ಯಜಮಾನರಿಂದ ಸಂಪ್ರದಾಯಬದ್ದವಾಗಿ ಚಾಲನೆ ದೊರೆಯಲಿದೆ. ಸಂಜೆ 4.30 ಕ್ಕೆ ಕೋಣಗಳ ಸ್ಪರ್ಧೆ ಆರಂಭವಾಗಲಿದ್ದು, 8.30 ಕ್ಕೆ ಬಹುಮಾನ ವಿತರಣೆ ಸಮಾರಂಭ ನಡೆಯಲಿದೆ.
ಬೈಂದೂರು: 70ನೇ ಅಖಿಲ ಭಾರತ ಸಹಕಾರಿ ಸಪ್ತಾಹ ಸಮಾರೋಪ ಸಮಾರಂಭ
ಬೈಂದೂರು: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಉಪ್ಪುಂದ ಇವರ ಆಶ್ರಯದಲ್ಲಿ 70ನೇ ಅಖಿಲ ಭಾರತ ಸಹಕಾರಿ ಸಪ್ತಾಹ ಸಮಾರೋಪ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ, ಸನ್ಮಾನ, ಗೌರವ ಧನ ವಿತರಣಾ ಕಾರ್ಯಕ್ರಮ ನಾಗೂರು ಶ್ರೀ ಕೃಷ್ಣಲಲಿತ ಕಲಾಮಂದಿರದಲ್ಲಿ ಸೋಮವಾರ ಜರಗಿತು. ಮಾಜಿ ಶಾಸಕರಾದ ಗೋಪಾಲ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸಹಕಾರಿ ಸಂಸ್ಥೆಗಳು ರಾಷ್ಟ್ರೀಕೃತ ಬ್ಯಾಂಕುಗಳಿಗಿಂತ ಉತ್ತಮ ಸೇವೆ ನೀಡುತ್ತಿವೆ. ಸಾಲ ಸೌಲಭ್ಯವನ್ನು ನೀಡುವುದರ ಜೊತೆಗೆ ಶಿಕ್ಷಣ ಹಾಗೂ ಸಾಮಾಜಿಕ ವಲಯಕ್ಕೂ ನೆರವು ನೀಡುವ ಮೂಲಕ […]
ಕುಂದಾಪುರ ತಾಲೂಕು ಆಸ್ಪತ್ರೆಯಲ್ಲಿ ಹೆರಿಗೆ ಸಂದರ್ಭ ಮಗು ಮೃತಪಟ್ಟ ಪ್ರಕರಣ; ಜಿಲ್ಲಾಧಿಕಾರಿ ಮಧ್ಯಪ್ರವೇಶದಿಂದ ಧರಣಿ ತಾತ್ಕಾಲಿಕ ಅಂತ್ಯ
ಕುಂದಾಪುರ: ಇಲ್ಲಿನ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ ನವಜಾತ ಶಿಶು ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಅಹೋರಾತ್ರಿ ಧರಣಿಯನ್ನು ಮಂಗಳವಾರದಂದು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ. ವೈದ್ಯರ ನಿರ್ಲಕ್ಷದಿಂದಾಗಿ ಮಗು ಸಾವನ್ನಪ್ಪಿದೆ ಎಂದು ಆರೋಪಿಸಿ ಸೋಮವಾರ ಸಂಜೆ ಆಸ್ಪತ್ರೆ ಎದುರು ಜಮಾಯಿಸಿದ ಸಂತ್ರಸ್ತರು ಹಾಗೂ ಗ್ರಾಮಸ್ಥರು ಆಕ್ರೋಶ ಹೊರಹಾಕಿದರು. ಸ್ಥಳಕ್ಕೆ ಡಿಎಚ್‍ಓ, ಡಿಸಿ ಬಾರದೇ ಸ್ಥಳ ಬಿಟ್ಟು ಕದಲುವುದಿಲ್ಲ ಎಂದು ಪಟ್ಟು ಹಿಡಿದ ಪ್ರತಿಭಟನಾಕಾರರ ಜೊತೆ ಬೈಂದೂರಿನ ಶಾಸಕ ಗುರುರಾಜ್ ಗಂಟಿಹೊಳೆ ನಿಂತು ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಉಪವಿಭಾಗಾಧಿಕಾರಿ, ಡಿಎಚ್‍ಓ ಹಾಗೂ […]