ಕಾಂಗ್ರೆಸ್ನಿಂದ ಪೊಲೀಸರಿಗೆ ದೂರು: ರಾಹುಲ್ ಗಾಂಧಿ ವಿರುದ್ಧ “ಆಕ್ಷೇಪಾರ್ಹ” ಪೋಸ್ಟ್
ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಬಳಕೆದಾರರೊಬ್ಬರು ರಾಹುಲ್ ಗಾಂಧಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರೊಬ್ಬರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ರಾಜಸ್ಥಾನದಲ್ಲಿ ನಾಳೆ ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.
ಕಾರ್ಮಿಕರ ರಕ್ಷಣಾ ಕಾರ್ಯ ಸ್ಥಗಿತ : ಉತ್ತರಕಾಶಿ: ಮತ್ತೊಂದು ತಾಂತ್ರಿಕ ದೋಷ
ಉತ್ತರಕಾಶಿ (ಉತ್ತರಾಖಂಡ): ಗುರುವಾರ ರಾತ್ರಿ ತಾಂತ್ರಿಕ ದೋಷ ಕಾಣಿಸಿಕೊಂಡು ಹಲವು ಗಂಟೆಗಳ ಕಾಲ ಸ್ಥಗಿತಗೊಂಡಿದ್ದ ಸಿಲ್ಕ್ಯಾರಾ ಸುರಂಗದೊಳಗೆ ಸಿಲುಕಿಕೊಂಡಿರುವ 41 ಕಾರ್ಮಿಕರ ರಕ್ಷಣಾ ಕಾರ್ಯಕ್ಕೆ ತಂಡ ತಯಾರಿ ಮಾಡಿಕೊಂಡಿತ್ತು. ಆದರೆ ಡ್ರಿಲ್ಲಿಂಗ್ ಪ್ರಾರಂಭಿಸುವ ಹೊತ್ತಿಗೆ ಮತ್ತೆ ಯಂತ್ರದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ.ದುರಸ್ತಿಗೊಂಡಿದ್ದ ಅಗರ್ ಯಂತ್ರದಲ್ಲಿ ಇದೀಗ ಮತ್ತೊಮ್ಮೆ ತಾಂತ್ರಿಕ ದೋಷ ಎದುರಾಗಿದ್ದು, ಡ್ರಿಲ್ಲಿಂಗ್ ಅನ್ನು ಸ್ಥಗಿತಗೊಳಿಸಿ, ಯಂತ್ರವನ್ನು ಹೊರತರಲಾಗುತ್ತಿದೆ.ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಕಾರ್ಯಾಚರಣೆಯನ್ನು ಪರಿಶೀಲಿಸಿದ್ದು, ರಕ್ಷಣಾ ಕಾರ್ಯಾಚರಣೆಯ ಕೊನೆಯ ಹಂತವನ್ನು ತ್ವರಿತ ಗತಿಯಲ್ಲಿ ಹಾಗೂ ಸಂಪೂರ್ಣ […]
ಮೆಸ್ಕಾಂ ವ್ಯಾಪ್ತಿಯ ಉಡುಪಿ ಪಟ್ಟಣದ ಪ್ರದೇಶಗಳಲ್ಲಿ ನ.26 ರ ವರೆಗೆ ಆನ್‌ಲೈನ್ ಸೇವೆ ತಾತ್ಕಾಲಿಕ ಸ್ಥಗಿತ
ಉಡುಪಿ: ಮಾಹಿತಿ ತಂತ್ರಜ್ಞಾನ ಸೇವೆಗೆ ಸಂಬಂಧಿಸಿದಂತೆ, ತಂತ್ರಾಂಶ ಹಾಗೂ ಹಾರ್ಡ್ವೇರ್ ಉನ್ನತೀಕರಿಸಲಾಗುತ್ತಿದ್ದು, ಮೆಸ್ಕಾಂ ವ್ಯಾಪ್ತಿಯ ಉಡುಪಿ ಪಟ್ಟಣದ ಪ್ರದೇಶಗಳಲ್ಲಿ ನವೆಂಬರ್ 26 ರ ವರೆಗೆ ಆನ್‌ಲೈನ್ ಆಧಾರಿತ ಸೇವೆ ಸ್ಥಗಿತಗೊಳಿಸಲಾಗುತ್ತಿರುವುದರಿಂದ ನಗದು ಪಾವತಿ ಕೌಂಟರ್‌ಗಳಲ್ಲಿ ಆನ್‌ಲೈನ್ ಸೇವೆಗಳಾದ ಹೊಸ ವಿದ್ಯುತ್ ಸಂಪರ್ಕ, ಹೆಸರು –ಲೋಡ್ ಬದಲಾವಣೆ, ನಗದು ಪಾವತಿ, ಆನ್‌ಲೈನ್ ಮೂಲಕ ವಿದ್ಯುತ್ ಬಿಲ್ ಪಾವತಿ ಇತ್ಯಾದಿ ಸೇವೆಗಳು ಇರುವುದಿಲ್ಲ. ಈ ಅವಧಿಯಲ್ಲಿ ವಿದ್ಯುತ್ ಸರಬರಾಜು ಸೇವೆಗಳಲ್ಲಿ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.
ಕುಂದಾಪುರ: ಮದ್ಯ ಮಾರಾಟ ನಿಷೇಧ
ಉಡುಪಿ: ಕುಂದಾಪುರ ತಾಲೂಕು ಕೋಟೇಶ್ವರ ಗ್ರಾಮದ ಮಹತೋಬಾರ ಶ್ರೀ ಕೋಟಿಲಿಂಗೇಶ್ವರ ರಥೋತ್ಸವ ಕಾರ್ಯಕ್ರಮವು ನವೆಂಬರ್ 26 ರಿಂದ 28 ರ ವರೆಗೆ ನಡೆಯಲಿರುವ ಹಿನ್ನೆಲೆ, ರಥೋತ್ಸವ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ಹಿತದೃಷ್ಠಿಯಿಂದ, ಕುಂದಾಪುರ ತಾಲೂಕಿನ ಕೋಟೇಶ್ವರ, ಹಂಗಳೂರು ಹಾಗೂ ಗೋಪಾಡಿ ಗ್ರಾಮಗಳ ವ್ಯಾಪ್ತಿಯಲ್ಲಿ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ & ರೆಸ್ಟೋರೆಂಟ್ ಮತ್ತು ವೈನ್‌ಶಾಪ್‌ಗಳಲ್ಲಿ ಮದ್ಯ ಮಾರಾಟವನ್ನು ನವೆಂಬರ್ 27 ರ ಬೆಳಗ್ಗೆ 6 ರಿಂದ ನವೆಂಬರ್ 28 ರ […]
ಡಿಸೆಂಬರ್ 10 ಮಂಗಳೂರಿನಲ್ಲಿ ಅಂತರ್ ಧರ್ಮೀಯ ಸೌಹಾರ್ದ ಕ್ರೀಡಾಕೂಟ
ಮಂಗಳೂರು: ಕಥೊಲಿಕ್ ಸಭಾ ಮಂಗಳೂರು ಪ್ರದೇಶ (ರಿ), ಆಂಜೆಲೊರ್ ಘಟಕ ಮತ್ತು ಅಂತರ್‌ಧರ್ಮೀಯ ಸಂವಾದ ಆಯೋಗ, ಆಂಜೆಲೊರ್ ಚರ್ಚ್ ವತಿಯಿಂದ ಪುರುಷರಿಗೆ ವಾಲಿಬಾಲ್ ಹಾಗೂ ಮಹಿಳೆಯರಿಗೆ ತ್ರೋಬಾಲ್ ಪಂದ್ಯಾವಳಿಯನ್ನು ಡಿಸೆಂಬರ್ 10 ರಂದು ಬೆಳಿಗ್ಗೆ 8.45 ಕ್ಕೆ ಕಪಿತಾನಿಯೊ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದೆ. ಸರ್ವ ಧರ್ಮದವರು ಕಟ್ಟಿ ಬೆಳೆಸಿದ ಮಂಗಳೂರು ಸೌಹಾರ್ದತೆಯಿಂದ ಕೂಡಿ ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದೆ. ಈ ಲಯವನ್ನು ಇನ್ನೂ ಉತ್ತಮ ರೀತಿಯಲ್ಲಿ ಬೆಳೆಸಲು ಈ ಕ್ರೀಡಾ ಪಂದ್ಯಾವಳಿಯನ್ನು ಕಥೊಲಿಕ್ ಸಭಾ(ರಿ) ಆಂಜೆಲೊರ್ ಘಟಕದ […]