ತೆಂಕಪೇಟೆ ಶ್ರೀಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ವಿಶ್ವರೂಪ ದರ್ಶನ
ಉಡುಪಿ: ತೆಂಕಪೇಟೆ ಶ್ರೀಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಜಿ ಎಸ್ ಬಿ ಸಮಾಜ, ಯುವಕ ಹಾಗೂಮಹಿಳಾ ಮಂಡಳಿಯ ಆಶ್ರಯದಲ್ಲಿ, ಕಾರ್ತಿಕ ಮಾಸದ ಏಕಾದಶಿ ಅಂಗವಾಗಿ ಗುರುವಾರ ಭಜನಾ ಕಾರ್ಯಕ್ರಮ ಹಾಗೂ ಶುಕ್ರವಾರ ಮುಂಜಾನೆ ಶ್ರೀ ದೇವರ ಸನ್ನಿಧಿಯಲ್ಲಿ ಸಾವಿರಾರು ಹಣತೆಗಳ ದೀಪಗಳಿಂದ ಅಲಂಕೃತವಾದ ವಿಶ್ವ ರೂಪ ದರ್ಶನ ನೆರವೇರಿತು. ಈ ಬಾರಿಯ ವಿಶೇಷ ಆಕರ್ಷಣೆಯಾಗಿ ಶ್ರೀರಾಮ ದರ್ಶನ, ವೀರ ವಿಠಲ, ಶ್ರೀ ಕೃಷ್ಣ, ಗಜವದನ, ಈಶ್ವರ, ಮುಖ್ಯಪ್ರಾಣ ಹಾಗೂ ರಂಗೋಲಿಯಲ್ಲಿ ವಿವಿಧ ಬಗೆಯ ಚಿತ್ತಾರ, ಹೂಗಳಿಂದ ರಚಿಸಿದ ರಂಗೋಲಿ, […]
ನೇಪಾಳದಲ್ಲಿ ರಾಜಪ್ರಭುತ್ವವನ್ನು ಮರುಸ್ಥಾಪಿಸುವಂತೆ ಪ್ರತಿಭಟನಾಕಾರರಿಂದ ಪ್ರತಿಭಟನೆ; ಬೀದಿಯಲ್ಲಿ ಗುಂಪು ಘರ್ಷಣೆ
ಕಠ್ಮಂಡು: ರಾಜಪ್ರಭುತ್ವವನ್ನು ಮರುಸ್ಥಾಪಿಸುವ ಮತ್ತು ‘ವೆಚ್ಚದ ಒಕ್ಕೂಟ ವ್ಯವಸ್ಥೆಯನ್ನು’ ರದ್ದುಪಡಿಸುವ ಪರವಾಗಿ ನೇಪಾಳದಲ್ಲಿ ಪ್ರತಿಭಟನೆಗಳು ಪ್ರಾರಂಭವಾಗಿವೆ. ಉದ್ಯಮಿ ಮತ್ತು ಮಾಜಿ ಮಾವೋವಾದಿ ಕಾರ್ಯಕರ್ತ ದುರ್ಗಾ ಪ್ರಸಾಯಿ ನೇತೃತ್ವದಲ್ಲಿ ರಾಜಪ್ರಭುತ್ವದ ಪರ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುತ್ತಾ ಬೀದಿಗಿಳಿದಿದ್ದಾರೆ. ಇದರಿಂದ ಪೊಲೀಸರು ಮತ್ತು ಪ್ರತಿಭಟನಾ ಗುಂಪುಗಳ ಮಧ್ಯೆ ಸಂಘರ್ಷ ಉಂಟಾಗಿದೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಬಳಸಿದ್ದಾರೆ. ಸಂಘರ್ಷ ತಾರಕ್ಕೇರದಂತೆ ನೇಪಾಳ ಸೇನೆಯನ್ನೂ ಕಾಯ್ದಿರಿಸಲಾಗಿದೆ. ಆದಾಗ್ಯೂ, ಸೇನೆಯನ್ನು ಬಳಸುವ ಅಗತ್ಯ ಬಂದಿಲ್ಲ ಎಂದು ಗೃಹ ಸಚಿವಾಲಯದ ಹಿರಿಯ ಅಧಿಕಾರಿ […]
ಜಮ್ಮು ಮತ್ತು ಕಾಶ್ಮೀರದಲ್ಲಿ ಹುತಾತ್ಮರಾದ ಯೋಧರಿಗೆ ಅಂತಿಮ ನಮನ ಸಲ್ಲಿಕೆ
ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರೊಂದಿಗಿನ ಗುಂಡಿನ ಕಾಳಗದಲ್ಲಿ ಹುತಾತ್ಮನಾದ ಕ್ಯಾಪ್ಟನ್ ಎಂ ವಿ ಪ್ರಾಂಜಲ್ ಅವರ ಪಾರ್ಥಿವ ಶರೀರವನ್ನು ಇಂದು ಸಂಜೆ ಬೆಂಗಳೂರಿಗೆ ಕರೆತರಲಾಗುವುದು ಎಂದು ರಕ್ಷಣಾ ಇಲಾಖೆಯ ಮೂಲಗಳು ಮಾಹಿತಿ ನೀಡಿವೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದಿದ್ದ ಗುಂಡಿನ ಚಕಮಕಿಯಲ್ಲಿ 66RR ಬೆಟಾಲಿಯನ್ ಕ್ಯಾಪ್ಟನ್ ಎಂವಿ ಪ್ರಾಂಜಲ್ ಅವರು ಹುತಾತ್ಮರಾಗಿದ್ದಾರೆ. ತಮ್ಮ ಏಕೈಕ ಪುತ್ರನ ಸಾವಿನಿಂದಾಗಿ ಆಹತರಾಗಿರುವ ತಂದೆ ವೆಂಕಟೇಶ್ ಮತ್ತು ತಾಯಿ […]
ಸಕ್ಷಮ ಪ್ರಾಧಿಕಾರದಲ್ಲಿ ಜನನ-ಮರಣ ನೋಂದಣಿ ಕಡ್ಡಾಯ: ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್
ಉಡುಪಿ: ಪ್ರತಿಯೊಬ್ಬರೂ ಸಕ್ಷಮ ಪ್ರಾಧಿಕಾರದಲ್ಲಿ ಜನನ –ಮರಣ ನೋಂದಣಿಯನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಹೇಳಿದರು. ಗುರುವಾರದಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜನನ ಮರಣ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನನ-ಮರಣ ಪ್ರಮಾಣ ಪತ್ರವು ಮಾನವನ ಪ್ರತಿಯೊಂದು ವಿಶೇಷ ಹಂತಗಳಲ್ಲಿ ಅತ್ಯವಶ್ಯವಾಗಿದೆ. ಜನನ-ಮರಣ ಮತ್ತು ನಿರ್ಜೀವ ಜನನಗಳನ್ನು ನೋಂದಾಯಿಸುವುದು ಕಡ್ಡಾಯವಾಗಿದ್ದು, 20 ದಿನಗಳ ಒಳಗಾಗಿ ನಿಶುಲ್ಕವಾಗಿ ನೋಂದಾಯಿಸಬಹುದಾಗಿದೆ. 21 ದಿನದ ನಂತರ 30 ದಿನದ […]
ಶ್ರೀಕೃಷ್ಣ ಮಠದಲ್ಲಿ ತುಳಸಿ ಪೂಜೆ
ಉಡುಪಿ: ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಉತ್ಥಾನ ದ್ವಾದಶಿಯ ಪ್ರಾತಃಕಾಲ ತುಳಸಿ ಪೂಜೆಯನ್ನು ನೆರವೇರಿಸಿದರು.