ಕರ್ನಾಟಕ ಬ್ಯಾಂಕ್ ಕುಂದಾಪುರ ಶಾಖೆಯ ನವೀಕೃತ ಪ್ರಾಂಗಣ ಮತ್ತು ಎಟಿಎಂ ಮಿನಿ ಈ-ಲಾಬಿಯ ಉದ್ಘಾಟನಾ ಸಮಾರಂಭ
ಕುಂದಾಪುರ: ಕರ್ನಾಟಕ ಬ್ಯಾಂಕ್ ಕುಂದಾಪುರ ಶಾಖೆಯ ನವೀಕೃತ ಪ್ರಾಂಗಣ ಮತ್ತು ಎಟಿಎಂ ಮಿನಿ ಈ- ಲಾಬಿಯ ಉದ್ಘಾಟನಾ ಸಮಾರಂಭವು ನವೆಂಬರ್ 24ರಂದು ಜರಗಿತು. ಕಾರ್ಯಕ್ರಮದಲ್ಲಿ ಬ್ಯಾಂಕಿನ ಚೀಫ್ ಬಿಸಿನೆಸ್ ಆಫೀಸರ್ ಗೋಕುಲ್ ದಾಸ್, ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬ್ಯಾಂಕಿನ ಮಾಜಿ ನಿರ್ದೇಶಕ ಡಾ। ಹೆಚ್ ರಾಮ್ ಮೋಹನ್, ಉಡುಪಿ ವಲಯದ ಸಹಾಯಕ ಮಹಾಪ್ರಬಂಧಕ ರಾಜಗೋಪಾಲ್ ಬಿ., ವೇದಮೂರ್ತಿ ಬಾಲಚಂದ್ರ ಭಟ್, ಉದ್ಯಮಿಗಳಾದ ಆನಂದ ಸಿ. ಕುಂದರ್, ಸೀತಾರಾಮ ನಗತ್ತಾಯ, ಬ್ಯಾಂಕಿನ ಗ್ರಾಹಕರು ಹಾಗೂ ಸಿಬ್ಬಂದಿ ವರ್ಗದವರು […]
ಉಪ್ಪುಂದ: ನ.28 ರಂದು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವ
ಉಪ್ಪುಂದ: ಇಲ್ಲಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮನ್ಮಹಾರಥೋತ್ಸವವು ನ.೨೮ ರಂದು ಜರಗಲಿರುವುದು. ನ.28 ರಿಂದ 30 ರವರೆಗೆ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿರುವುದು. ನ.29 ರಂದು ಸಂಜೆ 6 ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿರುವುದು. ಮನ್ಮಹಾರಥೋತ್ಸವದ ಸಂದರ್ಭದಲ್ಲಿ ಪ್ರತಿ ಮನೆ ಹಾಗೂ ಅಂಗಡಿಗಳಲ್ಲಿ ದೀಪಾಲಂಕಾರದಿಂದ ಶೃಂಗರಿಸಲು ದೇವಳದ ಪ್ರಕಟಣೆ ತಿಳಿಸಿದೆ.
ಸ್ವದೇಶಿ ನಿರ್ಮಿತ ತೇಜಸ್ ಯುದ್ದ ವಿಮಾನದಲ್ಲಿ ಹಾರಾಟ ನಡೆಸಿದ ಪ್ರಧಾನಿ ನರೇಂದ್ರ ಮೋದಿ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನಲ್ಲಿ ಸ್ವದೇಶಿ ನಿರ್ಮಿತ ಲಘು ಯುದ್ಧ ವಿಮಾನ ತೇಜಸ್ ನಲ್ಲಿ ಹಾರಾಟ ನಡೆಸಿದರು. ಶನಿವಾರ ಬೆಂಗಳೂರು ಮೂಲದ ರಕ್ಷಣಾ ಪಿಎಸ್ಯು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ಗೆ ಭೇಟಿ ನೀಡಿದ ಪ್ರಧಾನಿ ಮೋದಿ ಉತ್ಪಾದನಾ ಘಟಕದಲ್ಲಿ ನಡೆಯುತ್ತಿರುವ ಕೆಲಸವನ್ನು ಪರಿಶೀಲಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. “ತೇಜಸ್ನಲ್ಲಿನ ವಿಹಾರವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಅನುಭವವು ನಂಬಲಾಗದಷ್ಟು ಸಮೃದ್ಧವಾಗಿದೆ, ನಮ್ಮ ದೇಶದ ಸ್ಥಳೀಯ ಸಾಮರ್ಥ್ಯಗಳಲ್ಲಿ ನನ್ನ ವಿಶ್ವಾಸವನ್ನು ಗಮನಾರ್ಹವಾಗಿ ಹೆಚ್ಚಿಸಿದೆ ಮತ್ತು ನಮ್ಮ ರಾಷ್ಟ್ರೀಯ ಸಾಮರ್ಥ್ಯದ […]
ನ. 27 ರಂದು ಮಹತೋಬಾರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ರಥೋತ್ಸವ
ಕುಂದಾಪುರ: ನ.27 ರಂದು ಮಹತೋಬಾರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಮನ್ಮಹಾರಥೋತ್ಸವ ಬೆಳಿಗ್ಗೆ 11.30 ಕ್ಕೆ ಜರಗಲಿದೆ. ರಾತ್ರಿ 8 ಗಂಟೆಗೆ ಅರೆಹೊಳೆ ಪ್ರತಿಷ್ಠಾನದ ನಂದಗೋಕುಲದ ಕಲಾವಿದರಿಂದ ನೃತ್ಯ ವರ್ಷಾ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ನ. 28 ರಂದು ಚೂರ್ಣೋತ್ಸವ, ಅವಭೃತ ಸ್ನಾನ ರಾತ್ರಿ ಓಕುಳಿ ಸೇವೆ ನಡೆಯಲಿದೆ. ವಿದುಷಿ ಭಾಗೀರಥಿ ಎಂ ರಾವ್ ಶಿಷ್ಯ ವೃಂದದವರಿಂದ ನೃತ್ಯ ಸೌರಭ ಕಾರ್ಯಕ್ರಮ ಜರಗಲಿದೆ.
ಇಂದಿನಿಂದ ರಾಜ್ಯ ರಾಜಧಾನಿಯಲ್ಲಿ ಕಂಬಳ ಕಲರವ: ರಾಜ-ಮಹಾರಾಜ ಜೋಡುಕರೆಯಲ್ಲಿ ವಿಜೃಂಭಿಸಲಿದೆ ತುಳುನಾಡ ಜನಪದ ಕ್ರೀಡೆ
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕರಾವಳಿ ಭಾಗದ ಗ್ರಾಮೀಣ ಕ್ರೀಡೆ ಕಂಬಳ ಕಲರವ ಇಂದಿನಿಂದ ಎರಡು ದಿನಗಳ ಕಾಲ ನಗರದ ಅರಮನೆ ಮೈದಾನದಲ್ಲಿ ನಡೆಯಲಿದೆ. ಯಕ್ಷಗಾನದ ಭಾಗವತಿಕೆಯೊಂದಿಗೆ ವೇದಿಕೆ ಮತ್ತು ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಲಾಯಿತು. ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಶಾಸಕರಾದ ಅಶೋಕ್ ಕುಮಾರ್ ರೈ, ಗುರ್ಮೆ ಸುರೇಶ್ ಶೆಟ್ಟಿ, ಸಂಗೀತ ನಿರ್ದೇಶಕ ಗುರುಕಿರಣ್ ಕಂಬಳ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ಮಧ್ಯಾಹ್ನ 12ಗಂಟೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಾಂಸ್ಕೃತಿಕ ಕಾರ್ಯಕ್ರಮ […]