ಭಾರತದಲ್ಲಿ ಹೈ ಅಲರ್ಟ್ ಘೋಷಿಸಿದ ಕೇಂದ್ರ ಆರೋಗ್ಯ ಇಲಾಖೆ: ಚೀನಾದಲ್ಲಿ ಮತ್ತೊಂದು ಡೆಡ್ಲಿ ವೈರಸ್ ಪತ್ತೆ

ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದ್ದಾರೆ. ಆಸ್ಪತ್ರೆಗಳಲ್ಲಿ ಹಾಸಿಗೆಗಳು, ಔಷಧಗಳು, ಇನ್ಫ್ಲುಯೆನ್ಸಾ ಲಸಿಕೆಗಳು, ಆಕ್ಸಿಜನ್‌, ಆಯಂಟಿಬಯೊಟಿಕ್‌, ವೈಯಕ್ತಿಕ ಸುರಕ್ಷತೆಯ ಸಾಧನಗಳು ಇತರೇ ಪರೀಕ್ಷಾ ಕಿಟ್‌ಗಳಂತಹ ಮೂಲ ಸೌಕರ್ಯಗಳನ್ನು ಹೆಚ್ಚಿಸಲು ಕ್ರಮ ತೆಗೆದುಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.ಇದರ ಬೆನ್ನಲ್ಲೇ ಕೇಂದ್ರ ಆರೋಗ್ಯ ಇಲಾಖೆಯು (Central Health Department) ಭಾರತದಲ್ಲಿ ಹೈ ಅಲರ್ಟ್ ಘೋಷಿಸಿದ್ದು, ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಆಸ್ಪತ್ರೆಯಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳನ್ನು ತಕ್ಷಣವೇ ಪರಿಶೀಲಿಸುವಂತೆ ರಾಜ್ಯ ಸರ್ಕಾರಗಳಿಗೆ ಖಡಕ್‌ ಸೂಚನೆ ಕೊಟ್ಟಿದೆ. […]

ಸಿಎಂ ಸಿದ್ದರಾಮಯ್ಯ ; 2024 ರಲ್ಲಿ ರಾಜ್ಯದಲ್ಲಿ ‘ಯುವನಿಧಿ’ ಜಾರಿ, ಕೌಶಲ್ಯಾಭಿವೃದ್ಧಿ ತರಬೇತಿ

ತೆಲಂಗಾಣ : ಭಾನುವಾರ ತೆಲಂಗಾಣಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಾತನಾಡಿದರು.2024 ರಲ್ಲಿ ಕರ್ನಾಟಕದಲ್ಲಿ ಯುವನಿಧಿ ಜಾರಿಗೊಳಿಸಲಾಗುತ್ತದೆ ಹಾಗೂ ಯುವಜನರಿಗೆ ಕೌಶಾಲ್ಯಾಭಿವೃದ್ಧಿ ತರಬೇತಿ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. 2022-23ನೇ ಸಾಲಿನಲ್ಲಿ ಪದವಿ ಪಡೆದ ಯುವಜನರಿಗೆ 2 ವರ್ಷಗಳವರೆಗೆ ಮಾಸಿಕ 3000 ರೂ. ಹಾಗೂ 2 ವರ್ಷದವರಗೆ ಡಿಪ್ಲೊಮಾ ಮಾಡಿದ ಯುವಜನರಿಗೆ ಮಾಸಿಕ 1500 ರೂ.ಗಳನ್ನು ನೀಡಲಾಗುತ್ತೆ, . ಇದಲ್ಲದೇ ಯುವಜನರಿಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನೂ ನೀಡಲಾಗುತ್ತದೆ ಎಂದು […]

ವಿವಿಧ ಯೋಜನೆ: ಅರ್ಜಿ ಆಹ್ವಾನ 

ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಾದ ಧನಶ್ರೀ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ, ಚೇತನಾ ಯೋಜನೆ ಹಾಗೂ ಉದ್ಯೋಗಿನಿ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಸೇವಾಸಿಂಧು ಪೋರ್ಟಲ್ ಅಡಿ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.  ಅರ್ಜಿ ಸಲ್ಲಿಸಲು ಡಿಸೆಂಬರ್ 22 ಕೊನೆಯ ದಿನ. ಹೆಚ್ಚಿನ ಮಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ […]

IPL 2024: ಹೀಗಿದೆ ಪ್ಲೇಯರ್ಸ್ ಹೊಸ​ ಪಟ್ಟಿ, ಜೋಶ್ ಸೇರಿ 11 ಆಟಗಾರರ ಕೈಬಿಟ್ಟ ಆರ್​ಸಿಬಿ

ಬೆಂಗಳೂರು: ಭಾನುವಾರ ಸಂಜೆ ಆರ್​ಸಿಬಿ ತನ್ನ ಕೈಬಿಟ್ಟ ಆಟಗಾರರು ಹಾಗೂ ಉಳಿಸಿಕೊಂಡ ಆಟಗಾರರ ಪಟ್ಟಿಯನ್ನು ಪ್ರಕಟಿಸಿದೆ. ಮುಂಬರುವ 2024ರ ಇಂಡಿಯನ್​ ಪ್ರೀಮಿಯರ್​ ಲೀಗ್​ (ಐಪಿಎಲ್)​ ಟೂರ್ನಿಗೆ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತನ್ನ ಕೆಲ ಸ್ಟಾರ್​ ಆಟಗಾರರನ್ನು ಕೈಬಿಟ್ಟಿದೆ.ಹರ್ಷಲ್‌ ಪಟೇಲ್‌, ವನಿಂದು ಹಸರಂಗ, ಡೇವಿಡ್ ವಿಲ್ಲಿ ಸೇರಿದಂತೆ ಬರೋಬ್ಬರಿ 11 ಆಟಗಾರರನ್ನು ಬೆಂಗಳೂರು ತಂಡ ಕೈಬಿಟ್ಟಿದೆ.ಮುಂದಿನ ವರ್ಷದ ಐಪಿಎಲ್ ಟೂರ್ನಿಗೂ ಮುನ್ನ ಶ್ರೀಲಂಕಾದ ಸ್ಪಿನ್ನರ್ ವನಿಂದು ಹಸರಂಗ, ಆಸ್ಟ್ರೇಲಿಯಾದ ವೇಗಿ ಜೋಶ್ ಹೇಜಲ್‌ವುಡ್ ಸೇರಿ 11 ಆಟಗಾರರನ್ನು ಆರ್​ಸಿಬಿ […]

ಶಟಲ್ ಬ್ಯಾಡ್ಮಿಂಟನ್: ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ, ಇವರ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಶಟಲ್ ಬ್ಯಾಡ್ಮಿಂಟನ್ ನಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಧಾರಿಣಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.