15 ದಿನಗಳೊಳಗೆ FRUITS ತಂತ್ರಾಂಶದಲ್ಲಿ ಜಮೀನಿನ ಮಾಹಿತಿ ದಾಖಲಿಸಲು ಜಿಲ್ಲಾಧಿಕಾರಿ ಸೂಚನೆ
ಉಡುಪಿ: FRUITS ತಂತ್ರಾಂಶದಲ್ಲಿ ಜಿಲ್ಲೆಯ ರೈತರ ಎಲ್ಲಾ ಜಮೀನಿನ ಮಾಹಿತಿಯನ್ನು ಮುಂದಿನ 15ದಿನಗಳ ಒಳಗೆ ದಾಖಲಿಸಲು ಸರ್ಕಾರದ ನಿರ್ದೇಶನವಿರುತ್ತದೆ. ಬರಗಾಲದಿಂದ ಉಂಟಾದ ಬೆಳೆ ನಷ್ಟಕ್ಕೆ ದೊರೆಯುವ ಪರಿಹಾರವು ಫ್ರೂಟ್ಸ್ ತಂತ್ರಾಂಶದ ದಾಖಲೆಯನ್ವಯ ರೈತರ ಖಾತೆಗೆ ನೇರವಾಗಿ ಮುಂದಿನ ದಿನಗಳಲ್ಲಿ ಜಮೆಯಾಗಲಿದೆ. ಪ್ರಸ್ತುತ ಜಿಲ್ಲೆಯಲ್ಲಿ ಒಟ್ಟು ಲಭ್ಯ ಫ್ಲಾಟ್ 10,20,896 ಗಳಲ್ಲಿ ಈವರೆಗೆ 4,59,453 ಫ್ಲಾಟ್‌ಗಳನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ಸಂಯೋಜಿಸಲಾಗಿದ್ದು, ಇನ್ನೂ 5,61,440 ಫ್ಲಾಟ್‌ಗಳನ್ನು ಜೋಡಿಸಬೇಕಾಗಿರುತ್ತದೆ. ಸದ್ರಿ ಕಾರ್ಯವನ್ನು ಕ್ಷೇತ್ರ ಮಟ್ಟದಲ್ಲಿ ಕಂದಾಯ, ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳ […]
ಬೈಂದೂರು: ಚಿನ್ನಾಭರಣ ಮಳಿಗೆಯ ನೌಕರನಿಂದ ಸಂಸ್ಥೆಗೆ ಲಕ್ಷಾಂತರ ರೂ. ವಂಚನೆ; ಪ್ರಕರಣ ದಾಖಲು
ಬೈಂದೂರು: ತಾಲೂಕಿನ ಉಪ್ಪುಂದ ಅಂಬಾಗಿಲಿನಲ್ಲಿ ನಿತ್ಯಾನಂದ ಶೇಟ್ ಅವರ ಚಿನ್ನಾಭರಣ ಸಂಸ್ಥೆಯಲ್ಲಿ 2019-21ರ ಅವಧಿಯಲ್ಲಿ ಸಂಸ್ಥೆಯ ನೌಕರ, ಸ್ಥಳೀಯ ನಿವಾಸಿ ಗಿರೀಶ್ ಶೇಟ್ ಹಾಗೂ ಸಹೋದರರಾದ ವೆಂಕಟೇಶ್ ಶೇಟ್ ಮತ್ತು ಹರೀಶ್ ಶೇಟ್ ರೂ.10 ಕೋಟಿಗೂ ಅಧಿಕ ವಂಚನೆ ಮಾಡಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಂದೂರು ಠಾಣೆಯ ಅಪರಾಧ ಸಂಖ್ಯೆ 0004/2022 ರಂತೆ ಪ್ರಕರಣ ದಾಖಲಾಗಿದೆ. ಸದ್ರಿ ಪ್ರಕರಣದಲ್ಲಿ ಆರೋಪಿಯು ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ಪಡೆದಿದ್ದು, ಪ್ರಕರಣ ತನಿಖಾ ಹಂತದಲ್ಲಿರುವಾಗಲೇ ಆರೋಪಿ ಗಿರೀಶ್ ಶೇಟ್ ಗ್ರಾಹಕರಿಂದ ಸಂಸ್ಥೆಗೆ […]
ಹಳೆಯ ವಾಹನಗಳಿಗೆ ಸುರಕ್ಷಿತ ನೋಂದಣಿ ಫಲಕ ಅಳವಡಿಕೆ ಅವಧಿ ಫೆಬ್ರವರಿ 17 ರ ವರೆಗೆ ವಿಸ್ತರಣೆ
ಉಡುಪಿ: ರಾಜ್ಯ ಸರ್ಕಾರದ ಅಧಿಸೂಚನೆಯಂತೆ ರಾಜ್ಯದಲ್ಲಿ 2019 ಏಪ್ರಿಲ್ 1 ನೇ ದಿನಾಂಕಕ್ಕಿಂತಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ/ ಅಸ್ತಿತ್ವದಲಿರುವ ವಾಹನಗಳು) ದ್ವಿ-ಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಬಾರೀ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು (ಹೆಚ್.ಎಸ್.ಆರ್.ಪಿ) ಅಳವಡಿಸುವ ಅವಧಿಯನ್ನು 2024 ರ ಫೆಬ್ರವರಿ 17 ರ ವರೆಗೆ ವಿಸ್ತರಿಸಲಾಗಿದೆ. ಸಾರ್ವಜನಿಕರು ಆನ್‌ಲೈನ್ ಮೂಲಕ ಹೆಚ್.ಎಸ್.ಆರ್.ಪಿ ಪಡೆಯಲು ತೊಂದರೆಗಳಾದಲ್ಲಿ ಸಹಾಯವಾಣಿ […]
ಅನಧಿಕೃತ ನಳ್ಳಿ ನೀರಿನ ಸಂಪರ್ಕ ಕಡಿತ: ನಗರಸಭೆ
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಅನಧಿಕೃತವಾಗಿ ನಳ್ಳಿನೀರಿನ ಸಂಪರ್ಕವನ್ನು ಕಲ್ಪಿಸಿಕೊಂಡಿದ್ದಲ್ಲಿ, ನವೆಂಬರ್ 30 ರ ಒಳಗೆ ನಗರಸಭೆ ಕಚೇರಿಗೆ ನಿಯಮಾನುಸಾರ ಅರ್ಜಿ ಸಲ್ಲಿಸಿ, ಸದರಿ ಸಂಪರ್ಕವನ್ನು ಅಧಿಕೃತಗೊಳಿಸಿಕೊಳ್ಳಬೇಕು. ತಪ್ಪಿದಲ್ಲಿ ಯಾವುದೇ ಮುನ್ಸೂಚನೆ ನೀಡದೇ ಅನಧಿಕೃತ ಸಂಪರ್ಕವನ್ನು ಹಾಗೂ ನಗರಸಭಾ ಕಚೇರಿಯಿಂದ ನೀಡಲಾಗಿರುವ ಇತರೇ ಮೂಲಭೂತ ಸೌಲಭ್ಯಗಳನ್ನು ಕಡಿತಗೊಳಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿ
ಉಡುಪಿ: ಬೆಂಗಳೂರಿನ ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ (ರಿ) ವತಿಯಿಂದ ಸಮಗ್ರ ಸಾಹಿತ್ಯ ಸೇವೆ ಮತ್ತು ಜೀವಮಾನ ಸಾಧನೆಗಾಗಿ ಕೊಡಮಾಡುವ ಪ್ರತಿಷ್ಠಿತ ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿಗೆ ಉಡುಪಿಯ ತಲ್ಲೂರು ಫ್ಯಾಮಿಲಿ ಟ್ರಸ್ಟಿನ ಪ್ರವರ್ತಕ ಹಾಗೂ ಲೇಖಕ ಡಾ.ತಲ್ಲೂರು ಶಿವರಾಮ ಶೆಟ್ಟಿ ಆಯ್ಕೆಯಾಗಿದ್ದಾರೆ. ಸಂಸ್ಥೆ ಮುಂಬರುವ ಡಿಸೆಂಬರ್ 30 ರಂದು ಬೆಂಗಳೂರಿನ ನಯನ ರಂಗಮಂದಿರದಲ್ಲಿ ಹಮ್ಮಿಕೊಂಡಿರುವ ಕೆಂಪೇಗೌಡ ಕರ್ನಾಟಕ ಪ್ರಾದೇಶಿಕ ಸಾಂಸ್ಕೃತಿಕ ಕಲಾ ಉತ್ಸವದ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಡಾ.ತಲ್ಲೂರು ಶಿವರಾಮ […]