ನ. 29 ರಿಂದ ಡಿ. 1 ರ ವರೆಗೆ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ

ಉಡುಪಿ: ಪೊಲೀಸ್ ಇಲಾಖೆ ಉಡುಪಿ ವತಿಯಿಂದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟವು ನ. 29 ರಿಂದ ಡಿ. 1 ರ ವರೆಗೆ ನಗರದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ನ. 29 ರಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಉದ್ಘಾಟಿಸಲಿದ್ದು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಕರಾವಳಿ ಕಾವಲು ಪಡೆಯ ಪೊಲೀಸ್ ಅಧೀಕ್ಷಕ ಅಂಷು ಕುಮಾರು, ಕಾರ್ಕಳ ನಕ್ಸಲ್ ನಿಗ್ರಹ ದಳದ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ […]

ಉಡುಪಿ ಜಿಲ್ಲಾ ಕಂದಾಯ ಇಲಾಖೆಯಲ್ಲಿ ಇ- ಆಫೀಸ್ ಸೇವೆ ಶೇ.100 ಅನುಷ್ಠಾನ

ಉಡುಪಿ: ಕಂದಾಯ ಇಲಾಖೆಯು ಸರಕಾರದ ಒಂದು ಪ್ರಮುಖ ಇಲಾಖೆಯಾಗಿದ್ದು, ಮಾತೃ ಇಲಾಖೆ ಎಂದು ಗುರುತಿಸಿಕೊಳ್ಳುತ್ತದೆ. ಮುಖ್ಯಮಂತ್ರಿಗಳ ಹಾಗೂ ಕಂದಾಯ ಸಚಿವರ ನಿರ್ದೇಶನದಂತೆ ಸಾರ್ವಜನಿಕರು ದಿನನಿತ್ಯ ಸರ್ಕಾರಿ ಕಚೇರಿಗಳಿಗೆ ಅಲೆಯದಂತೆ ನೋಡಿಕೊಳ್ಳಲು ಕಂದಾಯ ಇಲಾಖೆಯಲ್ಲಿ ಹೊಸ ತಂತ್ರಜ್ಞಾನದ ಬಳಕೆ, ನಿಗದಿತ ಕಾಲ ಮಿತಿಯಲ್ಲಿ ಕೆಲಸ ಕಾರ್ಯಗಳನ್ನು ಮಾಡಿಕೊಡಲು ಮುಂದಾಗಿದೆ. ಉತ್ತಮ ಸೇವೆ ನೀಡುವುದರ ಮೂಲಕ ಕಳೆದ ಆರು ತಿಂಗಳಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕಂದಾಯ ಇಲಾಖೆಯ ಮೂಲಕ ಹಲವು ಜನಪರ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು, ಅಭಿವೃದ್ಧಿಯನ್ನು ಆದ್ಯತೆಯನ್ನಾಗಿಸಿ, ಸರ್ಕಾರ […]

ಬಸ್ಸು ನಿಲ್ದಾಣಗಳೆದುರು ಬಸ್ಸುಗಳನ್ನು ನಿಲ್ಲಿಸಲು ಆರ್.ಟಿ.ಒ ಸೂಚನೆ

ಉಡುಪಿ: ಜಿಲ್ಲೆಯಲ್ಲಿ ಸಂಚರಿಸುವ ಖಾಸಗಿ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಮುಖ್ಯವಾಗಿ ಎಂ.ಜಿ.ಎಂ ಕಾಲೇಜು ಮತ್ತು ಸಂತೆಕಟ್ಟೆ ಬಸ್ಸು ನಿಲ್ದಾಣಗಳಲ್ಲಿ ಬಸ್ಸುಗಳನ್ನು ನಿಲುಗಡೆ ಮಾಡದೇ ಬಸ್ಸು ನಿಲ್ದಾಣದ ಹಿಂದೆ ಅಥವಾ ಮುಂದೆ ನಿಲುಗಡೆ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬಂದಿರುತ್ತವೆ. ಆದ್ದರಿಂದ ಜಿಲ್ಲೆಯಲ್ಲಿ ಸಂಚರಿಸುವ ಎಲ್ಲಾ ಖಾಸಗಿ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಕಡ್ಡಾಯವಾಗಿ ಬಸ್ಸು ನಿಲ್ದಾಣಗಳಲ್ಲಿಯೇ ಬಸ್ಸುಗಳನ್ನು ನಿಲುಗಡೆ ಮಾಡಲು ಎಲ್ಲಾ ಬಸ್ಸುಗಳ ಮಾಲೀಕರು ಕ್ರಮವಹಿಸಬೇಕು. ತಪ್ಪಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ […]

ಶ್ರೀಕೃಷ್ಣ ಮಠದಲ್ಲಿ ತೆಪ್ಪೋತ್ಸವ ಸಂಪನ್ನ

ಶ್ರೀ ಕೃಷ್ಣ ಮಠದಲ್ಲಿ ಅಷ್ಟಮಠಾಧೀಶರ ಉಪಸ್ಥಿತಿಯಲ್ಲಿ ವೈಭವದ ತೆಪ್ಪೋತ್ಸವ ಸಹಿತ 4 ದಿನದ ಲಕ್ಷದೀಪೋತ್ಸವವು ಮುಕ್ತಾಯಗೊಂಡಿತು. ಮಥದ ಹಿರಿ ಕಿರಿಯ ಸ್ವಾಮೀಜಿಗಳು, ಭಕ್ತರು ಉಪಸ್ಥಿತರಿದ್ದರು.

ಮಾತೃ ಭಾಷೆ ತುಳು ಎಂದು ನಮೂದಿಸಿ ತುಳು ಕೋಟಾದಲ್ಲಿ ಸೀಟು ಗಳಿಸಿ: ಜಯಕರ್ ಶೆಟ್ಟಿ ಇಂದ್ರಾಳಿ

ಉಡುಪಿ: ಉಸಿರು ನಿಂತರೂ ಹೆಸರು ಉಳಿಸುವ ಕಾರ್ಯಕ್ರಮವನ್ನು ತುಳುಕೂಟವು ನಿರಂತರವಾಗಿ ಮಾಡುತ್ತಿದೆ. ಒಳ್ಳೆ ಕೆಲಸ ಮಾಡಿದವರ ಹೆಸರು ಅಜರಾಮರವಾಗಿರಬೇಕು. ಶಾಲೆಗೆ ಸೇರಿಸುವಾಗ ಮಾತೃ ಭಾಷೆ ತುಳು ಎಂದು ನಮೂದಿಸಿದಲ್ಲಿ ಹತ್ತು ವರ್ಷದ ಬಳಿಕ ತುಳು ಕೋಟಾದಲ್ಲಿ ಸೀಟು ಸಿಗುವುದು ಎಂದು ತುಳುಕೂಟದ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು. ಅವರು ನಿಟ್ಟೂರು ಸಂಜೀವ ಭಂಡಾರಿ ಸ್ಮರಣಾರ್ಥ ಆಯೋಜಿಸಿದ್ದ ತುಳು ಭಾವಗೀತೆ ಸ್ಪರ್ಧೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭಾವಗೀತೆಯಲ್ಲಿ ಭಾವನಾತ್ಮಕ ಸಂಬಂಧವಿದೆ. ತಂತಜ್ಞಾನದೊಂದಿಗೆ ನಮ್ಮತನವನ್ನು ಬಿಟ್ಟುಕೊಡಬಾರದು ಎಂದು […]