ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ: ಇಬ್ಬರು ಆರೋಪಿಗಳ ವಿರುದ್ದ ಚಾರ್ಜ್ ಶೀಟ್ ಸಲ್ಲಿಸಿದ ಎನ್‌ಐಎ

ಮಂಗಳೂರು: ಕಳೆದ ವರ್ಷ ನವೆಂಬರ್‌ನಲ್ಲಿ ಮಂಗಳೂರಿನಲ್ಲಿ ಇಸ್ಲಾಮಿಕ್ ಸ್ಟೇಟ್ ಪ್ರಾಯೋಜಿತ ಪ್ರೆಶರ್ ಕುಕ್ಕರ್ ಬಾಂಬ್ ಸ್ಫೋಟದ ಇಬ್ಬರು ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬುಧವಾರದಂದು ಚಾರ್ಜ್‌ಶೀಟ್ ಸಲ್ಲಿಸಿರುವುದಾಗಿ ಎ.ಎನ್.ಐ ವರದಿ ಮಾಡಿದೆ. ಆರೋಪಿಗಳಲ್ಲಿ ಒಬ್ಬನಾದ ಮೊಹಮ್ಮದ್ ಶಾರಿಕ್ 2022 ರ ನವೆಂಬರ್ 19 ರಂದು ಆಟೊ ರಿಕ್ಷಾದಲ್ಲಿ ಪ್ರೆಶರ್ ಕುಕ್ಕರ್ ಐಇಡಿ ಅನ್ನು ಒಯ್ಯುತ್ತಿದ್ದಾಗ ಅದು ಸ್ಫೋಟಗೊಂಡಿತ್ತು. ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಹಿಂದೂ ಸಮುದಾಯದಲ್ಲಿ ಭಯ ಹುಟ್ಟಿಸುವ ಉದ್ದೇಶದಿಂದ ಈತ ಐಇಡಿ ಸ್ಥಾಪಿಸಲು […]

ಚಿನ್ನಾಭರಣ ಕಳ್ಳನ ಬಂಧನ: ಉಡುಪಿ ನಗರ ಪೊಲೀಸರ ಕಾರ್ಯಾಚರಣೆ

ಉಡುಪಿ: ಇಂದಿರಾನಗರದ ಬಡಗಬೆಟ್ಟು ಗ್ರಾಮದ ಮನೆಯೊಂದರ ಹಿಂಬಾಗಿಲನ್ನು ಮುರಿದು ಮನೆಯೊಳಗೆ ಪ್ರವೇಶಿಸಿ ಲಾಕರ್ ನಲ್ಲಿಟ್ಟಿದ್ದ ಚಿನ್ನಾಭರಣ ಕಳ್ಳತನ ಮಾಡಿದ್ದ ಕಳ್ಳನನ್ನು ಬಂಧಿಸುವಲ್ಲಿ ಉಡುಪಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಮಲ್ಲಾರಿನ ತೌಸಿಫ್‌ ಎಂದು ಗುರುತಿಸಲಾಗಿದೆ. ಆರೋಪಿಯು ಕಳ್ಳತನ ಮಾಡಿದ್ದ ಸುಮಾರು 155 ಗ್ರಾಂ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ಇದರ ಮೌಲ್ಯ 9 ಲಕ್ಷ ಎಂದು ಅಂದಾಜಿಸಲಾಗಿದೆ. ಬಂಧಿತ ಆರೋಪಿಯ ವಿರುದ್ದ ಬಂಟ್ವಾಳ, ಪಣಂಬೂರು, ಬಜ್ಪೆ ಠಾಣೆಗಳಲ್ಲಿ ಮನೆಗಳ್ಳತನ ಪ್ರಕರಣ ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಉಡುಪಿ ಇನ್‌ಸ್ಪೆಕ್ಟರ್ […]

ಭ್ರಷ್ಟ ಅಧಿಕಾರಿಯ ಅಮಾನತು ಎಪಿಎಂಸಿ ರಕ್ಷಣಾ ಸಮಿತಿಯ ಸಂಘಟಿತ ಹೋರಾಟಕ್ಕೆ ಸಂದ ಜಯ: ವಿಜಯ್ ಕೊಡವೂರು

ಉಡುಪಿ: ಜಿಲ್ಲೆಯ ಪ್ರತಿಷ್ಠಿತ ಎಪಿಎಂಸಿ( ಕೃಷಿ ಉತ್ಪನ್ನ ಮಾರುಕಟ್ಟೆ) ಜಿಲ್ಲೆಯ ಕೃಷಿಕರು ಬೆಳೆದಂತಹ ಬೆಳೆಗಳನ್ನು ಮಾರಾಟ ಮಾಡುವಂತಹ ಕೇಂದ್ರ. ಈ ಕೇಂದ್ರ ಉತ್ತಮ ರೀತಿಯಾಗಿ ನಡೆಯುತ್ತಿದ್ದು, ರಾಜ್ಯಕ್ಕೆ ಮಾದರಿಯಾಗಿತ್ತು ಆದರೆ ಕಳೆದ ಕಳೆದ ಐದಾರು ವರ್ಷಗಳಿಂದ ಎಪಿಎಂಸಿಯಲ್ಲಿ ಕೃಷಿಕರಿಗೆ ಮತ್ತು ವರ್ತಕರಿಗೆ ಮಾರಾಟ ಮಾಡಲು ಅನುಕೂಲಕರ ವ್ಯವಸ್ಥೆ ಕಂಡುಬರುತ್ತಿಲ್ಲ ಅಧಿಕಾರಿಗಳ ದಬ್ಬಾಳಿಕೆ, ಭ್ರಷ್ಟಾಚಾರ ಮತ್ತು ದುರ್ನಡತೆ ಎದ್ದು ಕಾಣುತ್ತಿತ್ತು. ಕ್ಯಾನ್ಸರ್ ಪೀಡಿತ ವರ್ತಕನಿಂದ 250 ರೂಪಾಯಿಯ ಲೈಸೆನ್ಸ್ ಗೆ 40,000ರೂ ಪಾವತಿ ಮಾಡಿಸಿರುವ ಘಟನೆ ಹಾಗೂ ಮರಣ […]

ನೇಜಾರು ಕುಟುಂಬದವರಿಗೆ ಸಾಂತ್ವನ ನೀಡಿದ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್

ಉಡುಪಿ: ಉಡುಪಿ ಜಿಲ್ಲೆಯ ಜನರು ಶಾಂತಿ ಪ್ರಿಯರು, ಶಿಸ್ತಿನ ಸಿಪಾಯಿಗಳು. ಇಂತಹ ಜಿಲ್ಲೆಯಲ್ಲಿ ನಾಲ್ಕು ಜನರ ಕ್ರೂರ ಹತ್ಯೆ ನಡೆಸಿದ ಆರೋಪಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ಅಜೀಮ್ ಹೇಳಿದರು. ಮಂಗಳವಾರ ಉಡುಪಿಯ ನೇಜಾರುವಿನ ನೂರ್ ಮೊಹಮ್ಮದ್ ಅವರ ಮನೆಗೆ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಉಡುಪಿ ನಗರದಲ್ಲಿ ಸುಮಾರು ಹದಿನೈದು ದಿನಗಳ ಹಿಂದೆ ನಡೆದ ಒಂದೇ ಕುಟುಂಬದ ನಾಲ್ಕು ಜನ ಸದಸ್ಯರನ್ನು ಒಬ್ಬ ದುಷ್ಕರ್ಮಿಯು ಕ್ರೂರವಾಗಿ […]

ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿ ಭಕ್ತಿ ಭಾವದ ಮನ್ಮಹಾರಥೋತ್ಸವ ಸಂಪನ್ನ

ಬೈಂದೂರು: ಅವಿಭಜಿತ ದ.ಕ ಜಿಲ್ಲೆಯ ಎರಡನೆ ಪ್ರಸಿದ್ದ ಕೊಡಿಹಬ್ಬವು ಮಂಗಳವಾರದಂದು ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಳದ ಮನ್ಮಹಾರಥೋತ್ಸವದೊಂದಿಗೆ ನೆರವೇರಿತು. ಧ್ವಜಾರೋಹಣದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ದೇವಸ್ಥಾನದ ತಂತ್ರಿಗಳ ನೇತೃತವದಲ್ಲಿ ಪಂಚಾಮೃತಾಭಿಷೇಕ, ವಿಶೇಷ ಭೂತ ಬಲಿ ಹಾಗೂ ಇತರ ಧಾರ್ಮಿಕ ಕಾರ್ಯಗಳು ಸಂಪ್ರದಾಯದಂತೆ ನಡೆದವು. ಸಾವಿರಾರು ಭಕ್ತರು ಶೃದ್ದಾ ಭಕ್ತಿಯಿಂದ ರಥೋತ್ಸವದಲ್ಲಿ ಪಾಲ್ಗೊಂಡರು. ಶ್ರೀ ದೇವಿಗೆ ಹರಕೆ ರೂಪದಲ್ಲಿ ಸಲ್ಲಿಸಲಾದ ಸೀರೆಗಳ ಬಹಿರಂಗ ಹರಾಜು ಪ್ರಕ್ರಿಯೆ ನಡೆಯಿತು. ರಥಬೀದಿಯಲ್ಲಿ ಚಂಡೆ, ನಾಸಿಕ್ ಬ್ಯಾಂಡ್, ಕೀಲು ಕುದುರೆ ತಟ್ಟಿಯಾರ ಜನರನ್ನು […]